ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಬ್ರೇಕ್‌ಫಾಸ್ಟ್ ಮೀಟಿಂಗ್; ಲೋಕ ಗೆಲ್ಲಲು ರಣತಂತ್ರ
ಹೆಚ್ಎಎಲ್ಗೆ ವಿಶೇಷ ವಿಮಾನದಲ್ಲಿ ತಡರಾತ್ರಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ತಾಜ್ ವೆಸ್ಟ್ಎಂಡ್ನಲ್ಲಿ ವಾಸ್ತವ್ಯ ಹೂಡಿದ್ದರು. ಸದ್ಯ ಈಗ ಬಿಜೆಪಿ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಜೆಡಿಎಸ್ ಬಿಜೆಪಿ ಸಮನ್ವಯ ಕುರಿತು ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ಸಂದೇಶ ರವಾನಿಸಿದ್ದಾರೆ.
ಬೆಂಗಳೂರು, ಏಪ್ರಿಲ್.02: ಹಳೆ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಅಮಿತ್ ಶಾ (Amit Shah) ಇಂದು ಡಿಕೆ ಬ್ರದರ್ಸ್ ಕೋಟೆಯನ್ನು ಛಿದ್ರ ಮಾಡಲು ತಂತ್ರ ಹೆಣೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ (Road Show) ಹಮ್ಮಿಕೊಂಡಿದ್ದಾರೆ. ಇದಕ್ಕಾಗಿ ಈಗಾಗಲೇ ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಜ್‌ವೆಸ್ಟ್‌ಎಂಡ್ ಹೋಟೆಲ್‌ನಲ್ಲಿ (Taj West End Hotel) ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದ್ದಾರೆ (BJP-JDS Break Fast Meeting).
ಹೆಚ್ಎಎಲ್ಗೆ ವಿಶೇಷ ವಿಮಾನದಲ್ಲಿ ತಡರಾತ್ರಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ತಾಜ್ ವೆಸ್ಟ್ಎಂಡ್ನಲ್ಲಿ ವಾಸ್ತವ್ಯ ಹೂಡಿದ್ದರು. ಸದ್ಯ ಈಗ ಬಿಜೆಪಿ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಜೆಡಿಎಸ್ ಬಿಜೆಪಿ ಸಮನ್ವಯ ಕುರಿತು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಂದೇಶ ರವಾನಿಸಿದ್ದಾರೆ. ಈ ಮೀಟಿಂಗ್ನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೆಗೌಡ, ಮಾಜಿ ಸಚಿವರಾದ ಸಿಎಸ್ ಪುಟ್ಟರಾಜು, ಬಂಡೆಪ್ಪಕಾಶಂಪುರ, ಹೆಚ್.ಕೆ. ಕುಮಾರಸ್ವಾಮಿ, ಸಾರಾ ಮಹೇಶ್, ವೆಂಕಟರಾವ್ ನಾಡಗೌಡ ಉಪಸ್ಥಿತರಿದ್ದರು.
ಬ್ರೇಕ್ ಫಾಸ್ಟ್ ಮೀಟಿಂಗ್ಗೆ ಆಗಮಿಸಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿದ್ದು, ರಾಜ್ಯದ 28 ಕ್ಷೇತ್ರಗಳ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಚರ್ಚಿಸಲಿದ್ದಾರೆ. 28 ಕ್ಷೇತ್ರಗಳಲ್ಲಿ ಗೆಲ್ಲುವ ಬಗ್ಗೆ ಎರಡೂ ಪಕ್ಷಗಳ ಜೊತೆ ಸಮಾಲೋಚನೆ ನಡೆಯಲಿದೆ ಎಂದರು.
ಇದನ್ನೂ ಓದಿ: ಹಿಂದಿನ ಮಹಾರಾಜರು ಮಾಡಿದ ಉತ್ತಮ ಕೆಲಸಗಳಿಂದಾಗಿ ಗೌರವಾದರಗಳು ಲಭ್ಯವಾಗುತ್ತಿವೆ: ಯದುವೀರ್ ಕೃಷ್ಣದತ್ ಒಡೆಯರ್
ಅರಮನೆ ಮೈದಾನದಲ್ಲಿ ಸಮಾವೇಶ
ಇನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅರಮನೆ ಮೈದಾನದಲ್ಲಿ ಪ್ರಮುಖರ ಸಮಾವೇಶ ನಡೆಯಲಿದೆ. 5 ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶ ನಡೆಯಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರ, ಉತ್ತರ ಕ್ಷೇತ್ರ, ದಕ್ಷಿಣ ಕ್ಷೇತ್ರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಅಮಿತ್ ಶಾ ಮತ್ತೆ ಸಭೆ ನಡೆಸಲಿದ್ದಾರೆ. ಗೆಲುವಿನ ರಿಸ್ಕ್ ಇರುವ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಯಲಿದೆ. ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೀದರ್ ಮತ್ತು ಬೆಳಗಾವಿ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರ ಜೊತೆ ಶಾ ಸಭೆ ನಡೆಸಿ ಸಂಜೆ 6 ಗಂಟೆಗೆ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಹೆಚ್ಎಎಲ್ನಿಂದ ದೆಹಲಿಗೆ ತೆರಳಲಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ