AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ

ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್​​​ರನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸುವ ಮೂಲಕ ಶಾಕ್​ ನೀಡಿತ್ತು. ಇದೀಗ ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಪೊಲೀಸರು ಶಾಸಕನನ್ನು ವಶಕ್ಕೆ ಪಡೆದಿದ್ದಾರೆ.

ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ
ಶಾಸಕ ಭೈರತಿ ಬಸವರಾಜ್​​​, ಬಿಕ್ಲು ಶಿವ
ಶಿವಪ್ರಸಾದ್​ ಬಿ.
| Edited By: |

Updated on:Feb 12, 2026 | 8:04 PM

Share

ಬೆಂಗಳೂರು, ಫೆಬ್ರವರಿ 12: ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva Murder Case) ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೊನೆಗೂ ಕೆ.ಆರ್​.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್​ನ್ನು (Byrathi Basavaraj) ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಹಿನ್ನೆಲೆ ಭೈರತಿ ಬಸವರಾಜ್​​ ತಲೆಮರೆಸಿಕೊಂಡಿದ್ದರು. ಇದೀಗ ಇಂಡಿಗೋ 6E683 ವಿಮಾನದಲ್ಲಿ ಅಹಮದಾಬಾದ್​​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್​ ಇಂದು ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿತ್ತು. ಸುಪ್ರೀಂಕೋರ್ಟ್‌ನಲ್ಲಿ ನಿರೀಕ್ಷಣಾ ಅರ್ಜಿ ವಜಾ ಆಗುತ್ತಿದ್ದಂತೆ ಭೈರತಿಗೆ ಬೇರೆ ದಾರಿಯೇ ಇಲ್ಲದಂತಾಗಿತ್ತು. ತಲೆಮರೆಸಿಕೊಂಡಿದ್ದ ಭೈರತಿ, ಸಿಐಡಿ ಮುಂದೆ ಶರಣಾಗಲು ನಿರ್ಧರಿಸಿದ್ದರು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಹಮದಾಬಾದ್​ನಿಂದ ಬಂದು ಇಳಿದು ಹೊರ ಬರುತ್ತಿದ್ದಂತೆ ದೇವನಹಳ್ಳಿ ಎಸಿಪಿ ಹರ್ಷ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಭೈರತಿ ಬಸವರಾಜ್​ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್​ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸದ್ಯ ಪೊಲೀಸರು ಭೈರತಿ ಬಸವರಾಜ್​​ನನ್ನ ಏರ್​ಪೋರ್ಟ್​ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಬಹುತೇಕ ನಾಳೆ ಜಡ್ಜ್​​ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. ಇನ್ನು ಸಿಐಡಿ ಜಡ್ಜ್​​ ಎದುರು ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಲಿದೆ.

ಪ್ರಕರಣ ಹಿನ್ನೆಲೆ 

ಕಿತ್ತಗನೂರಿನ ಜಮೀನು ವಿವಾದದ ಹಿನ್ನೆಲೆ ಕಳೆದ ವರ್ಷ ಜುಲೈ 15 ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್​ಗಳಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದರು. ಮೃತನ ತಾಯಿ ಭೈರತಿ ಬಸವರಾಜ್​​ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು. ಭೈರತಿ ಬಸವರಾಜ್ ಕೈವಾಡ ಇದೆ ಅಂತಾ ಆರೋಪಿಸಿದ್ದರು. ಈ ಸಂಬಂಧ ಶಾಸಕರ ವಿರುದ್ಧ FIR ದಾಖಲಾಗಿತ್ತು. A1 ಜಗದೀಶ್ ಜೊತೆ ಶಾಸಕರಿಗೆ ನಂಟು ಇದೆ ಎಂಬ ಆರೋಪವಿದ್ದು, ಕೊಲೆ ಕೇಸ್‌ನಲ್ಲಿ ಭೈರತಿ ಬಸವರಾಜ್ A5 ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:05 pm, Thu, 12 February 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ