ಬೆಂಗಳೂರು: ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿಯವರ ಮೇಲೆ ಗುರುವಾರ ರಾತ್ರಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಆರೋಪ ಎದುರಾಗಿತ್ತು. ಇಂದು ಘಟನೆಯ ಕುರಿತಂತೆ ಟಿವಿ9ಗೆ ಅವರು ಪ್ರತಿಕ್ರಿಯೆ ನೀಡಿ, ವಿಷಾದ ವ್ಯಕ್ತಪಡಿಸಿದ್ದಾರೆ. ಪೊಲೀಸರೊಂದಿಗೆ ವಾಗ್ವಾದ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ (MP Kumaraswamy), ನಿನ್ನೆ ರಾತ್ರಿ ನನ್ನ ವರ್ತನೆಯ ಬಗ್ಗೆ ನನಗೆ ಬೇಸರವಾಗಿದೆ ಎಂದು ಹೇಳಿದ್ದಾರೆ. ‘‘ಆ ಪೊಲೀಸ್‌ಗೆ ನಾನು ಶಾಸಕನೆಂಬುದೇ ಗೊತ್ತಿಲ್ಲ. ನನ್ನ ಕಾರು ಹೋಗುವುದಕ್ಕೆ ಮುಕ್ಕಾಲು ಗಂಟೆ ಕಾಲ ಸಿಬ್ಬಂದಿ ಬಿಡಲೇ ಇಲ್ಲ. ಪೊಲೀಸರು ಹೊಯ್ಸಳ ಕಾರು ಅಡ್ಡಹಾಕಿಕೊಂಡಿದ್ದರು. ಹೀಗಾಗಿ ನಾನೇ ಸ್ಥಳಕ್ಕೆ ಹೋಗಿ ಮಾತನಾಡಿದ್ದೆ. ನಿನಗೆ ಬುದ್ಧಿ ಇಲ್ಲವಾ? ಕಾರು ಹೋಗುವುದಕ್ಕೆ ಬಿಡಲ್ವಾ? ಎಂದು ಪ್ರಶ್ನಿಸಿದ್ದೆ. ಈ ವೇಳೆ ಸಿಬ್ಬಂದಿ ಪೆದ್ದ ಪೆದ್ದನಾಗಿ ಮಾತನಾಡಿದ್ದರು. ನಾನು ಶಾಸಕನೇ ಅಲ್ಲ ಎನ್ನುವಂತೆ ಮಾತನಾಡಿದ್ದರು. ಈ ವೇಳೆ ಸಿಟ್ಟಾಗಿ ನಾನು ಕೂಡ ಮಾತನಾಡಿದ್ದೇನೆ. ಬಳಿಕ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿ ಬಂದರು. ಎಸಿಪಿ ಆ ಪೊಲೀಸ್ ಸಿಬ್ಬಂದಿಗೆ ಬುದ್ಧಿ ಹೇಳಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು’’ ಎಂದಿದ್ದಾರೆ ಎಂಪಿ ಕುಮಾರಸ್ವಾಮಿ.
ಘಟನೆಯೇನು?:
ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್‌ನಲ್ಲಿದ್ದ ಕಾನ್ಸ್‌ಟೇಬಲ್ ಚಂದ್ರಶೇಖರ್, ಹೆಚ್‌ಪಿ ನರಸಿಂಹಮೂರ್ತಿ ಅವರಿಗೆ ಅವಾಚ್ಯ ಶಬ್ದಗಳಿಂದ ಶಾಸಕರು ನಿಂದಿಸಿದ್ದಾರೆ ಎನ್ನಲಾಗಿತ್ತು. ಬೆಂಗಳೂರಿನ ಶಾಸಕರ ಭವನದಲ್ಲಿ ಕಳೆದ ರಾತ್ರಿ 11ರ ಸುಮಾರಿಗೆ ಘಟನೆ ನಡೆದಿತ್ತು.
ಹಲ್ಲೆ ಬಗ್ಗೆ ಕಂಟ್ರೋಲ್ ರೂಂಗೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಂತೆ ಎಸಿಪಿ ಸ್ಥಳಕ್ಕೆ ಆಗಮಿಸಿದ್ದರು. ಶಾಸಕರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.
ಸಿಎಂ ಇಬ್ರಾಹಿಂ ಅವರಿಗೆ ರಾಜಕೀಯದಲ್ಲಿ ದೊಡ್ಡ ವ್ಯಾಲ್ಯೂ ಇದೆ: ಸಚಿವ ಶ್ರೀರಾಮುಲು ಹೇಳಿಕೆ
ಬಳ್ಳಾರಿ: ಸಿ.ಎಂ.ಇಬ್ರಾಹಿಂ ಬಿಜೆಪಿಗೆ ಬರುತ್ತಾರೆ ಎಂದರೆ ನಮ್ಮ ನಾಯಕರು ಬೇಡ ಎನ್ನುವುದಿಲ್ಲವೆಂದು ಸಾರಿಗೆ ಸಚಿವ ಶ್ರೀರಾಮುಲು ನುಡಿದಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ (CM Ibrahim) ನನ್ನ ಜೊತೆ ಅನೇಕ ಬಾರಿ ಮಾತಾಡಿದ್ದಾರೆ. ಅವರು ಚಲಾವಣೆಯಲ್ಲಿರುವಂತಹ ನಾಣ್ಯ. ಇಬ್ರಾಹಿಂಗೆ ರಾಜಕೀಯದಲ್ಲಿ ದೊಡ್ಡ ವ್ಯಾಲ್ಯೂ ಇದೆ ಎಂದು ಶ್ರೀರಾಮುಲು ಹೇಳಿದ್ದಾರೆ. ಕಾಂಗ್ರೇಸ್ ಬಿಡುವುದಾಗಿ ಇಬ್ರಾಹಿಂ ಹಲವು ಬಾರಿ ಹೇಳಿದ್ದಾರೆ. ಅವರನ್ನು ಬಿಜೆಪಿಗೆ ಕರೆತರಲು ನಾಯಕರೊಂದಿಗೆ ಚರ್ಚಿಸುವೆ. ಸಿ.ಎಂ.ಇಬ್ರಾಹಿಂ ಬಿಜೆಪಿಗೆ ಬಂದರೆ ನಾಯಕರು ಬೇಡ ಎನ್ನುವುದಿಲ್ಲ ಎಂದು ಶ್ರೀರಾಮುಲು ಹೇಳಿಕೆ ನೀಡಿದ್ದಾರೆ
ಇದನ್ನೂ ಓದಿ:
ಕಾಂಗ್ರೆಸ್ನತ್ತ ಮುಖ ಮಾಡಿದ್ರಾ ಜೆಡಿಎಸ್ ಶಾಸಕ? ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಭೇಟಿ
CCD Siddharth Hegde: ಕಾಫಿ ಕಿಂಗ್ ಸಿದ್ದಾರ್ಥ ಹೆಗ್ಡೆಗೆ ನಮನ ಸಲ್ಲಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವಕ
Published On - 8:51 am, Fri, 28 January 22