ಆಸ್ಪತ್ರೆಯಿಂದ ಡಿಸ್ಚಾರ್ಜ್: ತಮ್ಮ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ಶಾಸಕ ಸುರೇಶ್ ಕುಮಾರ್
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಆರೋಗ್ಯದ ಬಗ್ಗೆ ಅಪ್ಡೇಟ್ ಬಂದಿದ್ದು, ಅವರು ಸದ್ಯಕ್ಕೆ ಗುಣಮುಖರಾಗಿದ್ದಾರೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 04): ರೂಪಾಂತರಿ ಚಿಕುನ್ ಗುನ್ಯಾದಿಂದ (Chikungunya) ಬಳಲುತ್ತಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ (S Suresh Kumar) ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದು, ಇಂದು (ಸೆಪ್ಟೆಂಬರ್ 04) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುರೇಶ್ ಕುಮಾರ್, ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ. ವೈದ್ಯರ ಸಲಹೆ ಮೇರೆಗೆ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ. ಮಾಧ್ಯಮಗಳಲ್ಲಿ ತಮ್ಮ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಶಾಸಕ ಸುರೇಶ್ ಕುಮಾರ್‌ಗೆ ಅನಾರೋಗ್ಯ; ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ
ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ. ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಸುರೇಶ್ ಕುಮಾರ್ ಪತ್ರಕಾ ಪ್ರಕಟಣೆ ಹೊರಡಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ನಿನ್ನೆ(ಸೆ.03) ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಸುರೇಶ್ ಕುಮಾರ್ ಗುಣಮುಖರಾಗಿದ್ದು, ರೆಸ್ಟ್ನಲ್ಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ