AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prevent High way accidents: ಮೈಸೂರು ಹೆದ್ದಾರಿ ಅಪಘಾತಗಳ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಮೈಸೂರು ಹೆದ್ದಾರಿ ಅಪಘಾತಗಳ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಅಪಘಾತ ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು

ಕಿರಣ್​ ಹನಿಯಡ್ಕ
| Edited By: ಸಾಧು ಶ್ರೀನಾಥ್​|

Updated on: Jul 11, 2023 | 4:16 PM

Share

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bangalore Mysore High way) ಅಪಘಾತ ಪ್ರಕರಣ ಹೆಚ್ಚಳವಾಗುತ್ತಿರುವುದರ ಬಗ್ಗೆ ವಿಧಾನಸಭೆಯಲ್ಲಿ ಬೆಂಗಳೂರಿನ ರಾಜಾಜಿನಗರ ಬಿಜೆಪಿ ಶಾಸಕ ಎಸ್​​ ಸುರೇಶ್​ಕುಮಾರ್​ ಪ್ರಶ್ನೆ ಎತ್ತಿದ್ದಾರೆ. ಮೈಸೂರು ಹೆದ್ದಾರಿ ಅಪಘಾತಗಳ (road accidents) ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಅಪಘಾತ ನಿಯಂತ್ರಿಸಲು (prevent accidents ) ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು. ಇದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಉತ್ತರ ನೀಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಸರಿಯಾಗಿ ಮಾಡಿಲ್ಲ. ಬಹಳಷ್ಟು ನ್ಯೂನತೆಗಳೊಂದಿಗೆ ದಶಪಥ ನಿರ್ಮಾಣವಾಗಿದೆ. ರಸ್ತೆ ತಿರುವುಗಳಲ್ಲಿ ಯಾವುದೇ ಸೂಚನಾ ಫಲಕಗಳನ್ನು ಹಾಕಿಲ್ಲ.

ಹೆದ್ದಾರಿಯಲ್ಲಿ ವೇಗವಾಗಿ ವಾಹನ ಬಂದಾಗ ಅಪಘಾತಗಳಾಗ್ತಿವೆ. ಮಾರ್ಚ್​ನಲ್ಲಿ 62 ಅಪಘಾತವಾಗಿದ್ದು, 20 ಜನ ಮೃತಪಟ್ಟಿದ್ದಾರೆ. ಮಾರ್ಚ್​​ನಿಂದ ಜೂನ್​ವರೆಗೆ 100 ಸಾವು, 335 ಜನರಿಗೆ ಗಾಯಗಳಾಗಿವೆ. ಸಂಚಾರ ವಿಭಾಗದ ಎಡಿಜಿಪಿ ಎಕ್ಸ್​​ಪ್ರೆಸ್​ ವೈವೇ ಪರಿಶೀಲಿಸಿದ್ದಾರೆ. ಪಾದಚಾರಿಗಳು ಹೆದ್ದಾರಿಗೆ ಬರದಂತೆ ತಂತಿ ಬೇಲಿ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ವಾಹನ ಚಾಲಕರಿಗೆ ಸಂಚಾರಿ ನಿಯಮಗಳು ಗೊತ್ತಿಲ್ಲ. ಶೀಘ್ರವೇ ಹೆದ್ದಾರಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆಯುತ್ತೆ. ಅಪಘಾತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ ಮಾಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್​ (G. Parameshwara) ಉತ್ತರಿಸಿದ್ದಾರೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ