AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪ: ಲೋಕಾಯುಕ್ತಕ್ಕೆ ಸ್ವಯಂ ಪ್ರೇರಿತವಾಗಿ ದಾಖಲೆ ಸಮೇತ ಉತ್ತರ ಸಲ್ಲಿಸಿದ ಶಾಸಕ ಸುರೇಶ್ ಕುಮಾರ್

ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ತಮ್ಮ ವಿರುದ್ಧ ಸಲ್ಲಿಕೆಯಾಗಿದ್ದ ಭ್ರಷ್ಟಾಚಾರದ ಆರೋಪ ಸಂಬಂಧ ಯಾವುದೇ ನೋಟಿಸ್ ಬರದಿದ್ದರೂ ಲೋಕಾಯುಕ್ತಕ್ಕೆ ಸ್ವಯಂಪ್ರೇರಿತವಾಗಿ 160 ಪುಟಗಳ ದಾಖಲೆಗಳ ಸಮೇತ ಉತ್ತರ ನೀಡಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ದೂರು ಎಂದು ಪುನರುಚ್ಛರಿಸಿರುವ ಅವರು, ಶಾಸಕರೂ ಸೇರಿದಂತೆ, ಯಾವುದೇ ಜನಪ್ರತಿನಿಧಿ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ನಿಯಮಾನುಸಾರ ಅವಕಾಶವಿಲ್ಲ ಎಂದಿದ್ದಾರೆ.

ಭ್ರಷ್ಟಾಚಾರ ಆರೋಪ: ಲೋಕಾಯುಕ್ತಕ್ಕೆ ಸ್ವಯಂ ಪ್ರೇರಿತವಾಗಿ  ದಾಖಲೆ ಸಮೇತ ಉತ್ತರ ಸಲ್ಲಿಸಿದ ಶಾಸಕ ಸುರೇಶ್ ಕುಮಾರ್
ಶಾಸಕ ಸುರೇಶ್ ಕುಮಾರ್ Image Credit source: S Suresh Kumar Facebook
ಪ್ರಸನ್ನ ಹೆಗಡೆ
|

Updated on:Jul 08, 2026 | 8:35 PM

Share

ಬೆಂಗಳೂರು, ಜುಲೈ 08: ಕಾಂಗ್ರೆಸ್ ಕಾರ್ಯಕರ್ತ ಹಾಗೂ ವಕೀಲ ಸೂರ್ಯ ಮುಕುಂದರಾಜ್ ಭ್ರಷ್ಟಾಚಾರ ಆರೋಪ ಮಾಡಿ ತಮ್ಮ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಸಂಬಂಧ ಸ್ವಯಂಪ್ರೇರಿತರಾಗಿ 160 ಪುಟಗಳ ದಾಖಲೆಗಳೊಂದಿಗೆ, 27 ಪುಟಗಳ ಉತ್ತರವನ್ನು ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ನೀಡಿದ್ದಾರೆ. ಜುಲೈ 2ರ ಗುರುವಾರದಂದು ತನ್ನ ವಿರುದ್ಧ ಓರ್ವ ವ್ಯಕ್ತಿ ಕರ್ನಾಟಕ ಲೋಕಾಯುಕ್ತರ ಬಳಿ ದೂರು ಸಲ್ಲಿಸಿರುವುದು ಮಾಧ್ಯಮಗಳ ಮೂಲಕ ತಿಳಿದಿದ್ದು, ದೂರಿನ ಅಂಶಗಳನ್ನು ಅಧ್ಯಯನ ಮಾಡಿದ ನಂತರ ಲೋಕಾಯುಕ್ತರಿಗೆ ಉತ್ತರ ನೀಡುವುದಾಗಿ ತಕ್ಷಣವೇ ತಿಳಿಸಿದ್ದೆ. ಹೀಗಾಗಿ ಲೋಕಾಯುಕ್ತರಿಂದ ಯಾವುದೇ ನೋಟಿಸ್ ಅಥವಾ ಸಂದೇಶ ಬರದಿದ್ದರೂ ಸ್ವಯಂ ಪ್ರೇರಿತವಾಗಿ, ಸುದೀರ್ಘ ಉತ್ತರ ನೀಡಿರೋದಾಗಿ ಶಾಸಕರು ಹೇಳಿದ್ದಾರೆ.

‘ಆರೋಪದಲ್ಲಿ ಕಿಂಚಿತ್ತೂ ಹುರುಳಿಲ್ಲ’

ಶಾಸಕರೂ ಸೇರಿದಂತೆ, ಯಾವುದೇ ಜನಪ್ರತಿನಿಧಿ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ನಿಯಮಾನುಸಾರ ಅವಕಾಶವಿಲ್ಲ. ಹೀಗಾಗಿ ಟೆಂಡರ್ ಕುರಿತಂತೆ ಯಾವುದೇ ಕಡತದ ಮೇಲೆ ನಾವು ನಿರ್ಧಾರ ಕೈಗೊಂಡು ಸಹಿ ಹಾಕುವ ಅನುಮೋದನೆ ಮಾಡುವ ಅವಕಾಶ ಇರುವುದಿಲ್ಲ. ಇದೆಲ್ಲವೂ ಕಾನೂನು ಮತ್ತು ನಿಯಮಗಳ ಅನುಸಾರವಾಗಿ ಸಂಬಂಧಪಟ್ಟ ಅಧಿಕಾರಿಗಳು ನಡೆಸಬೇಕಿರುವ ಕಾರ್ಯ. ಹೀಗಿರುವಾಗ ತನ್ನ ವಿರುದ್ಧ ಸಲ್ಲಿಸಿರುವ ಈ ದೂರಿನಲ್ಲಿ ತೋರಿಸಿರುವ ಯಾವುದೇ ಅಂಶದಲ್ಲಿ ಕಿಂಚಿತ್ತೂ ಹುರುಳಿಲ್ಲ ಎಂಬುದನ್ನು ಮಾನ್ಯ ಲೋಕಾಯುಕ್ತರಿಗೆ ನೀಡಿರುವ ಉತ್ತರದಲ್ಲಿ ಸ್ಪಷ್ಟಪಡಿಸಿದ್ದೇನೆ ಎಂದು ಸುರೇಶ್​​ ಕುಮಾರ್​​ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಲೋಕಾಯುಕ್ತ ದೂರು ಶುದ್ಧ ಹಾಸ್ಯಾಸ್ಪದ, ರಾಜಕೀಯ ಪಿತೂರಿ; ಬಿಜೆಪಿ ಶಾಸಕ ಸುರೇಶ್ ಕುಮಾರ್

‘ಆರೋಪಕ್ಕೆ ಒಂದು ಪುರಾವೆಯನ್ನೂ ಕೊಟ್ಟಿಲ್ಲ’

ಯಾರೋ ಬೇನಾಮಿ ಗುತ್ತಿಗೆದಾರರಿಗೆ ಸಹಾಯ ಮಾಡಿದ್ದೇನೆ ಮತ್ತು ನಗರ ಪಾಲಿಕೆಗೆ 300 ಕೋಟಿ ರೂ. ನಷ್ಟ ಉಂಟಾಗುವಂತೆ ಮಾಡಿದ್ದೇನೆ ಎಂಬ ಹಸಿ ಸುಳ್ಳಿನಿಂದ ಕೂಡಿರುವ ಆರೋಪವನ್ನು ಸಂಪೂರ್ಣವಾಗಿ ತಾನು ಅಲ್ಲಗೆಳೆದಿದ್ದು, ಆರೋಪ ಮಾಡಿರುವವರು ಆ ಸಂಬಂಧ ಒಂದೇ ಒಂದು ಪುರಾವೆಯನ್ನೂ ಒದಗಿಸಿರುವುದಿಲ್ಲ. ತನ್ನ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ, ಗುತ್ತಿಗೆ ವಿಚಾರದಲ್ಲಾಗಲಿ ಅಥವಾ ಇನ್ಯಾವುದೇ ಕಾರ್ಯದಲ್ಲಾಗಲಿ , ಕಾನೂನುಬಾಹಿರವಾಗಿ ನಿಯಮ ಉಲ್ಲಂಘಿಸಿ ಕಾರ್ಯವೆಸಗಿಲ್ಲ ಎಂದೂ ಸಹ ಉತ್ತರದಲ್ಲಿ ತಿಳಿಸಿರೋದಾಗಿ ಶಾಸಕರು ಹೇಳಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ತೆಗೆದುಕೊಂಡು ಕಾಮಗಾರಿ ಮಾಡದೆ ಬಿಲ್ ಪಡೆದಿರುವ, ಒಂದೊಮ್ಮೆ ಕಾಮಗಾರಿ ಮಾಡಿದ್ದರೂ ಸೂಚಿತ ಗುಣಮಟ್ಟದ ಮತ್ತು ಸೂಚಿತ ಪ್ರಮಾಣದ ಕಾರ್ಯ ಮಾಡದೆ ಅನೇಕ ಪ್ರಮಾದಗಳನ್ನು ಎಸಗಿರುವ ಗುತ್ತಿಗೆದಾರನ ಪರವಾಗಿ ತನ್ನ ವಿರುದ್ಧ ಈ ದೂರು ಸಲ್ಲಿಸಲಾಗಿದೆ ಎಂಬ ಬಗ್ಗೆಯೂ ಲೋಕಾಯುಕ್ತರ ಗಮನಕ್ಕೆ ತಂದಿದ್ದೇನೆ. ಇದೊಂದು ಶುದ್ಧ ರಾಜಕೀಯ ಪ್ರೇರಿತ ದೂರು. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವುದೇ ಈ ಸುಳ್ಳು ದೂರಿನ ಉದ್ದೇಶ ಎಂಬುದು ಸ್ಪಷ್ಟವಾಗಿರೋದಾಗಿ ಸುರೇಶ್​​ ಕುಮಾರ್​​ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:33 pm, Wed, 8 July 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ