AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತೀಶ್​ ರೆಡ್ಡಿ ಮನೆಯಂಗಳ ಸ್ವಚ್ಛ ಮಾಡಲು 15ಕ್ಕೂ ಹೆಚ್ಚು ಪೌರಕಾರ್ಮಿಕರ ಬಳಕೆ

ಬೊಮ್ಮನಹಳ್ಳಿ ವಾರ್ಡ್​ ಸ್ವಚ್ಛತೆ ಮಾಡಬೇಕಿದ್ದವರು ಶಾಸಕರ ಮನೆ ಆಳುಗಳಂತಾಗಿರುವುದು ಆಕ್ಷೇಪಾರ್ಹವಾಗಿದ್ದು, ಇಷ್ಟೆಲ್ಲ ಆದರೂ ಹೇಳುವವರು ಕೇಳುವವರು ಯಾರೂ ಇಲ್ಲವೇ ಎಂಬ ಪ್ರಶ್ನೆ ಮೂಡಿದೆ.

ಶಾಸಕ ಸತೀಶ್​ ರೆಡ್ಡಿ ಮನೆಯಂಗಳ ಸ್ವಚ್ಛ ಮಾಡಲು 15ಕ್ಕೂ ಹೆಚ್ಚು ಪೌರಕಾರ್ಮಿಕರ ಬಳಕೆ
ಸುಟ್ಟು ಕರಕಲಾದ ಕಾರುಗಳು
TV9 Web
| Edited By: |

Updated on: Aug 13, 2021 | 8:25 AM

Share

ಬೆಂಗಳೂರು: ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಆದರೆ, ಇತ್ತ ಮನೆಯಂಗಳದಲ್ಲಿ ಆಗಿರುವ ರಂಪಾಟವನ್ನು ಸ್ವಚ್ಛಗೊಳಿಸಲು ಸತೀಶ್​ ರೆಡ್ಡಿ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ಬಳಸಿಕೊಂಡ ಗಂಭೀರ ಆರೋಪ ಕೇಳಿಬಂದಿದ್ದು, ಅವರ ಮೇಲೆ ಆಕ್ರೋಶ ಮೂಡಲು ಕಾರಣವಾಗಿದೆ. 15 ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಮನೆ ಸ್ವಚ್ಛತೆಗೆಂದು ಶಾಸಕ ಸತೀಶ್ ರೆಡ್ಡಿ ಬಳಸಿಕೊಂಡಿದ್ದು, ಬೊಮ್ಮನಹಳ್ಳಿ ವಾರ್ಡ್ ಕ್ಲೀನ್ ಮಾಡಬೇಕಾಗಿದ್ದ ಪೌರಕಾರ್ಮಿಕರು ಸತೀಶ್ ರೆಡ್ಡಿ ಮನೆ ಅಂಗಳವನ್ನು ತಿಕ್ಕಿ ತೊಳೆಯುತ್ತಿದ್ದಾರೆ. ಆ ಬಗ್ಗೆ ಪೌರಕಾರ್ಮಿಕರನ್ನೇ ಕೇಳಿದರೆ ಎಂಎಲ್​ಎ ಹೇಳಿದ್ದಾರೆ ಎಂದು ಅಸಹಾಯಕತೆಯನ್ನೂ ವ್ಯಕ್ತಪಡಿಸಿದ್ದಾರೆ.

ಬೊಮ್ಮನಹಳ್ಳಿ ವಾರ್ಡ್​ ಸ್ವಚ್ಛತೆ ಮಾಡಬೇಕಿದ್ದವರು ಶಾಸಕರ ಮನೆ ಆಳುಗಳಂತಾಗಿರುವುದು ಆಕ್ಷೇಪಾರ್ಹವಾಗಿದ್ದು, ಇಷ್ಟೆಲ್ಲ ಆದರೂ ಹೇಳುವವರು ಕೇಳುವವರು ಯಾರೂ ಇಲ್ಲವೇ ಎಂಬ ಪ್ರಶ್ನೆ ಮೂಡಿದೆ. 15 ಕ್ಕೂ ಹೆಚ್ಚು ಪೌರಕಾರ್ಮಿಕರು ಸತೀಶ್ ರೆಡ್ಡಿ ಅವರ ಮನೆಯಂಗಳವನ್ನು ತೊಳೆಯುತ್ತಿದ್ದು, ಶಾಸಕರಾದ ಮಾತ್ರಕ್ಕೆ ಈ ರೀತಿ ಅಧಿಕಾರ ಚಲಾಯಿಸುವುದು ಎಷ್ಟು ಸರಿ ಎಂದು ಎಲ್ಲರೂ ಕೇಳುವಂತಾಗಿದೆ. ಕಾರಿಗೆ ಬೆಂಕಿ ಬಿದ್ದಿದೆ ಎಂದು ಎಲ್ಲರೂ ಅನುಕಂಪ ತೋರುತ್ತಿದ್ದ ಹೊತ್ತಿನಲ್ಲೇ ಶಾಸಕ ಸತೀಶ್ ರೆಡ್ಡಿ ಈ ರೀತಿ ಪೌರಕಾರ್ಮಿಕರನ್ನು ಸ್ವಚ್ಛತಾ ಕಾರ್ಯಕ್ಕೆ ಬಳಸಿಕೊಂಡು ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬೆಡ್​ಬ್ಲಾಕಿಂಗ್​ ದಂಧೆ ಬಯಲು ಮಾಡಿದ್ದಕ್ಕಾಗಿ ಕಾರಿಗೆ ಬೆಂಕಿ? ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಇಡಲು ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ಹೊಸ ಅನುಮಾನವೊಂದು ಮೂಡಿದೆ. ಕೊರೊನಾ ಎರಡನೇ ಅಲೆ ಜೋರಾಗಿದ್ದ ಹೊತ್ತಲ್ಲಿ ಸಂಸದ ತೇಜಸ್ವಿ ಸೂರ್ಯ ಜತೆ ಸೇರಿಕೊಂಡು ಸತೀಶ್ ರೆಡ್ಡಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು. ಈ ವೇಳೆ ಸತೀಶ್ ರೆಡ್ಡಿ ಆಪ್ತ ಬಾಬು ಸೇರಿ ಹಲವರ ಬಂಧನವಾಗಿತ್ತು. ತಮ್ಮ ಆಪ್ತನನ್ನೇ ಜೈಲಿಗೆ ಕಳಿಸಿದ್ರೆಂಬ ಜಿದ್ದು ಸಂಬಂಧಿಕರಿಗಿತ್ತಾ? ಎಂಬ ಶಂಕೆ ಇದೀಗ ವ್ಯಕ್ತವಾಗಿದ್ದು ಆ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಡ್ ಬ್ಲಾಕ್ ದಂಧೆ ಸಂಬಂಧ 2 ಎಫ್ಐಆರ್ ದಾಖಲಾಗಿತ್ತು. ಜಯನಗರ ಮತ್ತು ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ 11 ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿತ್ತು. ಇದೇ ಜಿದ್ದಿಗೆ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

(BJP MLA Satish Reddy asks scavengers to clean his house in Bengaluru)

ಇದನ್ನೂ ಓದಿ: ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ; ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ತಮ್ಮ ಆಪ್ತನನ್ನೇ ಜೈಲಿಗೆ ಕಳಿಸಿದ್ರೆಂಬ ಜಿದ್ದು ದುಷ್ಕೃತ್ಯಕ್ಕೆ ಕಾರಣನಾ? 

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ: ಚುರುಕುಗೊಂಡ ಪೊಲೀಸ್ ತನಿಖೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ