AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ; ದುಷ್ಕರ್ಮಿಗಳು ಪರಾರಿ

ಬಿಳಿ ಬಣ್ಣದ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದರೆ, ಜೀಪ್​ ಮಾದರಿಯ ಇನ್ನೊಂದು ವಾಹನ ಬಹುತೇಕ ಸುಟ್ಟು ಹೋಗಿದೆ. ರಾತ್ರೋರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ಬಿಜೆಪಿ ಶಾಸಕ ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ; ದುಷ್ಕರ್ಮಿಗಳು ಪರಾರಿ
ಸುಟ್ಟು ಕರಕಲಾದ ಶಾಸಕ ಸತೀಶ್ ರೆಡ್ಡಿ ಕಾರುಗಳು
TV9 Web
| Edited By: |

Updated on:Aug 12, 2021 | 8:34 AM

Share

ಬೆಂಗಳೂರು: ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಬೊಮ್ಮನಹಳ್ಳಿಯಲ್ಲಿರುವ ಸತೀಶ್ ರೆಡ್ಡಿ ಮನೆ ಮುಂಭಾಗದಲ್ಲಿದ್ದ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು 2 ಕಾರುಗಳು ಸುಟ್ಟು ಕರಕಲಾಗಿವೆ. ತಡರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಶಾಸಕ ಸತೀಶ್​ ರೆಡ್ಡಿ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಎರಡು ಕಾರುಗಳೂ ಕೂಡಾ ದುಬಾರಿ ಬೆಲೆಯದ್ದಾಗಿದ್ದು, ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ಇಲ್ಲಿಯ ತನಕ ಸುಳಿವು ಸಿಕ್ಕಿಲ್ಲ. ರಾಜಕೀಯ ದ್ವೇಷಕ್ಕಾಗಿ ಬೆಂಕಿ ಹಚ್ಚಲಾಗಿದೆಯಾ? ವೈಯಕ್ತಿಕ ಕಾರಣಗಳೇನಾದರೂ ಇವೆಯಾ? ಎನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ. ಘಟನೆಯ ನಂತರ ಪೊಲೀಸರಿಗೆ ಸತೀಶ್ ರೆಡ್ಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಳಿ ಬಣ್ಣದ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದರೆ, ಜೀಪ್​ ಮಾದರಿಯ ಇನ್ನೊಂದು ವಾಹನ ಬಹುತೇಕ ಸುಟ್ಟು ಹೋಗಿದೆ. ರಾತ್ರೋರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ತಡರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಶಾಸಕ ಸತೀಶ್​ ರೆಡ್ಡಿ ಹೇಳಿರುವುದರಿಂದ ಆ ನಾಲ್ವರು ಕಿಡಿಗೇಳು ಯಾರು ಎನ್ನುವುದು ಸದ್ಯದ ಪ್ರಶ್ನೆ.

ಶಾಸಕ ಸತೀಶ್ ರೆಡ್ಡಿ ನಿವಾಸದ ಬಳಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ, ರಾತ್ರಿ 1 ಗಂಟೆ ಸುಮಾರಿಗೆ ಕಾರುಗಳಿಗೆ ಬೆಂಕಿ ಬಿದ್ದಿದೆ. ಯಾರು ಬೆಂಕಿ ಹಚ್ಚಿದ್ದಾರೆ ಅನ್ನೋದು ತನಿಖೆಯಿಂದ ಗೋತ್ತಾಗಬೇಕಿದೆ ಎಂದು ಹೇಳಿದ್ದಾರೆ.

ರಾತ್ರಿ 1 ಗಂಟೆ 23 ನಿಮಿಷಕ್ಕೆ ಬೈಕಿನಲ್ಲಿ ಬಂದವರು ಕೇವಲ 7 ನಿಮಿಷಗಳಲ್ಲಿ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಭದ್ರತಾ ಸಿಬ್ಬಂದಿ ಮನೆ ಎದುರಿನ ಗೇಟ್‌ ಬಳಿ ಇದ್ದರು. ಆದರೆ, ಹಿಂದಿನ ಗೇಟ್‌ನಿಂದ ಆರೋಪಿಗಳು ಪರಾರಿ ಆಗಿದ್ದಾರೆ. ಮನೆಯ ಹಿಂದಿನ ಗೇಟ್‌ನಲ್ಲಿ ಸಿಸಿಟಿವಿ ಇದೆಯಾದರೂ ಅದರಲ್ಲಿ ಮುಖ ಸರಿಯಾಗಿ ಕಾಣಿಸುವುದಿಲ್ಲ. ಬೈಕ್‌ನಲ್ಲಿ ಇಬ್ಬರು ಬಂದಿದ್ದರು ಅನ್ನೋದು ಗೊತ್ತಾಗಿದೆ. ಇದು ರಾಜಕೀಯ ದ್ವೇಷ ಅಲ್ಲ. ಹೀಗಾಗಿ ಇದನ್ನು ರಾಜಕೀಯ ದೃಷ್ಟಿಯಲ್ಲಿ ನೋಡುವುದಿಲ್ಲ ಎಂದು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

(BJP MLA Satish Reddy owned cars parked in front of his house are burnt during mid night in Bengaluru)

ಇದನ್ನೂ ಓದಿ: Bed Blocking Scam: ಬೆಡ್ ಬ್ಲಾಕಿಂಗ್ ದಂದೆ: ಸ್ವಪಕ್ಷೀಯರ ಕೈವಾಡದ ಬಗ್ಗೆ ಬಿಜೆಪಿಯ ಹಿರಿಯ ನಾಯಕರಿಗೆ ಶಾಸಕ ಸತೀಶ್ ರೆಡ್ಡಿ ದೂರು

ತುಮಕೂರಿನಲ್ಲಿ ಬೆಂಕಿ ತಗುಲಿ ಮನೆ ಭಸ್ಮ; ಸುಟ್ಟು ಕರುಕಲಾದ ವೃದ್ಧ

Published On - 7:18 am, Thu, 12 August 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್