ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ: ಚೈತ್ರಾ ಜೈಲಿನಿಂದ ಬಿಡುಗಡೆ

| Updated By: ವಿವೇಕ ಬಿರಾದಾರ

Updated on: Dec 06, 2023 | 8:25 PM

ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ: ಚೈತ್ರಾ ಜೈಲಿನಿಂದ ಬಿಡುಗಡೆ
ಚೈತ್ರಾ
Follow us on

ಬೆಂಗಳೂರು ಡಿ.06: ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ (BJP) ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ (Chaitra) ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್​ 4ರಂದು (Court) ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಏನಿದು ಪ್ರಕರಣ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಐದು ಕೋಟಿ ರೂ. ಹಣ ಪಡೆದು ಚೈತ್ರಾ ವಂಚಿಸಿದ್ದರು. ಈ ಬಗ್ಗೆ ಉದ್ಯಮಿ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಬಿ ಪೊಲೀಸರು ಪ್ರಕರಣದ ಆರೋಪಿಗಳಾದ ಹಿಂದೂಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಹಾಗೂ ಶ್ರೀಕಾಂತ್‌ ಅವರನ್ನು ಸೆಪ್ಟೆಂಬರ್​​ 13 ರಂದು ಬಂಧಿಸಿದ್ದರು.

ಇದನ್ನೂ ಓದಿ: ಚೈತ್ರಾ ಆ್ಯಂಡ್ ಗ್ಯಾಂಗ್ ವಂಚನೆ ಪ್ರಕರಣ: 9 ಆರೋಪಿಗಳ ವಿರುದ್ಧ ಚಾರ್ಜ್​​ಶೀಟ್ ಸಲ್ಲಿಸಿದ ಸಿಸಿಬಿ 

ಇನ್ನು ಪ್ರಕರಣದ ಇನ್ನೂಳಿದ ಆರೋಪಿಗಳಾದ ರಮೇಶ್‌, ಗಗನ್‌, ಪ್ರಜ್ವಲ್‌ ಹಾಗೂ ಧನರಾಜ್‌ ಅವರನ್ನು ಬಂಧಿಸಿದ್ದರು. ದೂರುದಾರರಿಂದ 1.5 ಕೋಟಿ ರೂ. ಪಡೆದ ಆರೋಪದ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023 ರ ಸೆಪ್ಟೆಂಬರ್​ 19 ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು.

ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್‌ ನವೆಂಬರ್​ 8 ರಂದು ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅರ್ಜಿ ಮಾನ್ಯ ಮಾಡಿತ್ತು. ನವೆಂಬರ್​ 11 ರಂದು ಹಾಲಶ್ರೀ ಪರಪ್ಪನ ಅಗ್ರಹಾರದಿಂದ ಹೊರ ಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:24 pm, Wed, 6 December 23