ಎಂಎಲ್​ಎ ಟಿಕೆಟ್ ವಂಚನೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ ಹಾಲಶ್ರೀ ಬಿಡುಗಡೆ,​ ಕೇಸರಿ ಶಾಲು ಹಾಕಿ ಸ್ವಾಗತಿಸಿದ ಪ್ರಮೋದ್ ಮುತಾಲಿಕ್

ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಪರಪ್ಪನ ಅಗ್ರಹಾರ ಸೇರಿದ್ದರು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಇಂದು ಹಾಲಶ್ರೀ ಅವರು ಜೈಲಿನಿಂದ ಹೊರ ಬಂದಿದ್ದು ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹೊದಿಸಿ ಸ್ವಾಗತಿಸಿದರು.

ಎಂಎಲ್​ಎ ಟಿಕೆಟ್ ವಂಚನೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ ಹಾಲಶ್ರೀ ಬಿಡುಗಡೆ,​ ಕೇಸರಿ ಶಾಲು ಹಾಕಿ ಸ್ವಾಗತಿಸಿದ ಪ್ರಮೋದ್ ಮುತಾಲಿಕ್
ಅಭಿನವ ಹಾಲಶ್ರೀ
Follow us
ರಾಮು, ಆನೇಕಲ್​
| Updated By: ಆಯೇಷಾ ಬಾನು

Updated on:Nov 11, 2023 | 12:37 PM

ಆನೇಕಲ್, ನ.11: ಚೈತ್ರಾ ಗ್ಯಾಂಗ್​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಕೇಸ್ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ (Abhinava Halashree) ಬಿಡುಗಡೆಯಾಗಿದ್ದಾರೆ. ಹೈಕೋರ್ಟ್​ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅವರು ಕೇಸರಿ ಶಾಲು ಹಾಕಿ ಸ್ವಾಗತ ಕೋರಿದರು.

ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಪರಪ್ಪನ ಅಗ್ರಹಾರ ಸೇರಿದ್ದರು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಇಂದು ಹಾಲಶ್ರೀ ಅವರು ಜೈಲಿನಿಂದ ಹೊರ ಬಂದಿದ್ದು ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹೊದಿಸಿ ಸ್ವಾಗತಿಸಿದರು.

ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹಾಲಶ್ರೀ, ಪ್ರತ್ಯಕ್ಷವಾಗಿ ಕಂಡರು ಪ್ರಮಾಣಿಸಿ ನೋಡಬೇಕು. ಅದನ್ನು ಪ್ರಕರಣದ ತನಿಖೆ ವೇಳೆ ಪರಿಗಣಿಸಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ನಮ್ಮನ್ನ ನಂಬಿ ಅರಾಧಿಸುವ ಸಮಾಜಕ್ಕೆ ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದ ಆಶಯಕ್ಕೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೆನೆ. ಮುಂದೆಯೂ ಆದೇ ರೀತಿ ಬದುಕು ಸಾಗಿಸುತ್ತೇನೆ ಎಂದರು.

ಇದನ್ನೂ ಓದಿ: ಚೈತ್ರಾ ವಂಚನೆ ಕೇಸ್​; ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಐದು ಕೋಟಿ ಹಣ ಪಡೆದು ವಂಚಿಸಲಾಗಿತ್ತು. ಈ ಬಗ್ಗೆ ಉದ್ಯಮಿ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಬಿ ಪೊಲೀಸರು ಪ್ರಕರಣದ ಆರೋಪಿಗಳಾದ ಹಿಂದೂಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಹಾಗೂ ಶ್ರೀಕಾಂತ್‌, ರಮೇಶ್‌, ಗಗನ್‌, ಪ್ರಜ್ವಲ್‌ ಹಾಗೂ ಧನರಾಜ್‌ ಅವರನ್ನು ಬಂಧಿಸಿದ್ದರು. ದೂರುದಾರರಿಂದ 1.5 ಕೋಟಿ ರೂ. ಪಡೆದ ಆರೋಪ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023 ರ ಸೆ.19 ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು.

ಇನ್ನು ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್‌ ಬುಧವಾರ ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯಪೀಠ ಅರ್ಜಿ ಮಾನ್ಯ ಮಾಡಿತ್ತು. ಸದ್ಯ ಇಂದು ಹಾಲಶ್ರೀ ಪರಪ್ಪನ ಅಗ್ರಹಾರದಿಂದ ಹೊರ ಬಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:23 pm, Sat, 11 November 23