BJP PressMeet: ಶಿಕ್ಷಣ ಕ್ಷೇತ್ರದಲ್ಲಿ ಎಲ್ಲೂ ಎಡವದಂತೆ ಬಿಜೆಪಿ ನಾಯಕರಿಂದ ಕಾಂಗ್ರೆಸ್​ಗೆ ಉಪದೇಶ

ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲವು ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ. ಅವರ ಸಾಹಿತ್ಯ ತುರುಕುವ ಕೆಲಸ ಮಾಡಲಾಗುತ್ತಿದೆ ಎಂದು ಬಿಜೆಪಿಯು ಕಾಂಗ್ರೆಸ್ ಉಪದೇಶ ಮಾಡಿದೆ.

BJP PressMeet: ಶಿಕ್ಷಣ ಕ್ಷೇತ್ರದಲ್ಲಿ ಎಲ್ಲೂ ಎಡವದಂತೆ ಬಿಜೆಪಿ ನಾಯಕರಿಂದ ಕಾಂಗ್ರೆಸ್​ಗೆ ಉಪದೇಶ
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on: Jun 09, 2023 | 12:17 PM

ಬೆಂಗಳೂರು: ನಗರದ ಶಾಸಕರ ಭವನದಲ್ಲಿ ಬಿಜೆಪಿ(BJP) ವಿಧಾನ‌ ಪರಿಷತ್ ಸದಸ್ಯರು(MLC) ಸುದ್ದಿಗೋಷ್ಠಿ ನಡೆಸಿದ್ದು ಕಾಂಗ್ರೆಸ್ ನಾಯಕರಿಗೆ ಕೆಲವೊಂದು ವಿಚಾರಗಳನ್ನು ತಾಕೀತು ಮಾಡಿದ್ದಾರೆ. ಶಿಕ್ಷಣ ಸಚಿವರ ಮುಂದೆ ದೊಡ್ಡ ಸವಾಲಿದೆ. ಜವಾಬ್ದಾರಿಯಿಂದ ನಡೆದುಕೊಳ್ಳುವ ಅವಶ್ಯಕತೆ ಇದೆ. ಈಗಿನ ಶಿಕ್ಷಣ ಸಚಿವರು ಮತ್ತೊಬ್ಬ ಬಂಗಾರಪ್ಪ ಆಗಬೇಕು ಅನ್ನೋದು ನಮ್ಮ ಆಶಯ. ಬಜೆಟ್ ಮೊದಲು ವಿಧಾನಪರಿಷತ್‌ನ ಎಲ್ಲಾ ಪ್ರತಿನಿಧಿಗಳ ಸಭೆ ಕರೆಯಬೇಕು. ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬೇಗ ಮುಗಿಸಬೇಕು. 7ನೇ ವೇತನ ಆಯೋಗದ ವರದಿ ತರಿಸಿಕೊಂಡು ಜಾರಿಗೆ ತರಬೇಕು ಎಂದು ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ(Y.A. Narayanaswamy) ಅವರು ಸುದ್ದಿಗೋಷ್ಠಿ ಕಾಂಗ್ರೆಸ್​ಗೆ ಸಲಹೆ ಕೊಟ್ಟಿದ್ದಾರೆ.

ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲವು ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ. ಅವರ ಸಾಹಿತ್ಯ ತುರುಕುವ ಕೆಲಸ ಮಾಡಲಾಗುತ್ತಿದೆ. ಅದರ ಬಗ್ಗೆ ಎಚ್ಚರಿಕೆಯಿಂದ ಇರಿ. ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದವರಿಂದ ಸಲಹೆ ಪಡೆಯಿರಿ. ಕೆಲವರ ಮಾತು ಕಟ್ಟಿಕೊಂಡು ಈ ರೀತಿ ಹೆಜ್ಜೆ ಇಡಬೇಡಿ. ಇದು ನಿಮಗೆ ಸಂಕಷ್ಟ ತರಲಿದೆ. ಈಗಾಗಲೇ ಪಠ್ಯ ಶಾಲೆಗೆ ತಲುಪಿದೆ. ಒಳ್ಳೆಯ ಸಮಾಜ ನಿರ್ಮಾಣಕ್ಕೆ ಏನೆಲ್ಲಾ ಪಠ್ಯ ಕೊಡಬಹುದು ಅಂತ ನಿಮ್ಮ ಸಚಿವರ ಸಲಹೆ ಪಡೆಯಿರಿ. ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಹುದ್ದೆ ಖಾಲಿ ಇದೆ. ಹಿಂದಿನ ಸರ್ಕಾರ 15 ಸಾವಿರ ಹುದ್ದೆ ಭರ್ತಿ ಮಾಡಲು ತಯಾರಿ ಮಾಡಿತ್ತು. ತಾಂತ್ರಿಕ ಸಮಸ್ಯೆ ಇದ್ದ ಕಾರಣ ಸ್ಥಗಿತವಾಗಿತ್ತು. ಆರ್ಥಿಕ ಇಲಾಖೆಗೆ ಒಂದು ಧೋರಣೆ ಇದೆ. ಖಾಲಿ ಇರುವ ಹುದ್ದೆ ತುಂಬಲು ಹಿಂದೇಟು ಹಾಕುತ್ತಿದೆ. ಹುದ್ದೆ ಖಾಲಿ ಇಟ್ಟರೆ ಎಷ್ಟು ಹಣ ಉಳಿಸಬಹುದು ಅನ್ನೋದು ಅವರ ವಾದ. ಆದ್ರೆ ಗುಣಾತ್ಮಕ ಶಿಕ್ಷಣ ನೀಡುವ ಕೆಲಸ ಆಗಬೇಕಿದೆ ಎಂದು ಕಾಂಗ್ರೆಸ್​​ಗೆ ಬಿಜೆಪಿ ನಾಯಕರು ಕೆಲವು ಉಪದೇಶಗಳನ್ನು ನೀಡಿದ್ದಾರೆ.

ವೈ.ಎ. ನಾರಾಯಣ ಸ್ವಾಮಿ, ಶಶೀಲ್ ನಮೋಶಿ, ಅ.ದೇವೇಗೌಡ, ಚಿದಾನಂದ ಗೌಡ ಮತ್ತು ಮಾಜಿ ಎಂಎಲ್ಸಿ ಅರುಣ್ ಶಹಾಪುರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್