ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ಬಹು ನಿರೀಕ್ಷಿತ ಬೈಯಪ್ಪನಹಳ್ಳಿ- ಕೆಆರ್‌ ಪುರ ಮೆಟ್ರೋ ಓಡಾಡಕ್ಕೆ ಸಿದ್ಧವಾಗಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದ ಬಾಕಿ ಉಳಿದಿರುವ ಕೆಆರ್‌ ಪುರ - ಬೈಯಪ್ಪನಹಳ್ಳಿ ನಡುವಿನ 2 ಕಿ.ಮೀ. ಮಾರ್ಗದ ಸುರಕ್ಷತಾ ಪರಿಶೀಲನೆ ಈಗಾಗಲೇ ಪೂರ್ಣಗೊಂಡಿದೆ. ಆದ್ರೆ, ಅದ್ಯಾಕೋ ಉದ್ಘಾಟನೆ ವಿಳಂಬವಾಗಿದೆ. ಇದಕ್ಕೆ ಇದೀಗ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2023 | 10:50 AM

ಬೆಂಗಳೂರು, (ಅಕ್ಟೋಬರ್ 02): ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ (Byappanahalli – KR Pura Metro) ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (tejasvi surya) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂಆರ್​ಎಸ್​​ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ. ರಾಹುಲ್​ ಗಾಂಧಿಯಿಂದ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ, ರಾಹುಲ್ ಗಾಂಧಿ ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಯುವ ಮೋರ್ಚಾ ಆಯೋಜಿಸಿದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಉದ್ಘಾಟನೆಯಾದರೆ ಈ ಸಂಖ್ಯೆಯಲ್ಲಿ ಸುಮಾರು ಶೇ. 50-60 ರಷ್ಟು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ. ನೂತನ ಮೆಟ್ರೋ ಮಾರ್ಗವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 21ರಂದು ನೇರಳೆ ಮಾರ್ಗದ ಮಿಸ್ಸಿಂಗ್ ಲಿಂಕ್ ಎನಿಸಿಕೊಂಡಿದ್ದ ಆರ್ ಪುರ – ಬೈಯಪ್ಪನಹಳ್ಳಿ ನಡುವಿನ 2-ಕಿಮೀ ಮಾರ್ಗದ ಸುರಕ್ಷತಾ ಪರಿಶೀಲನೆ ಮಾಡಿದ್ದ ಸಿಎಂಆರ್‌ಎಸ್ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿತ್ತು. ಆದ್ರೆ, ಇದುವರೆಗೂ ಉದ್ಘಾಟನೆಯಾಗಿಲ್ಲ. ವಿಳಂಬಕ್ಕೆ ಕಾರಣವೇನು ಎನ್ನುವುದು ಸಹ ತಿಳಿದುಬಂದಿಲ್ಲ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ