ಬೆಂಗಳೂರು, (ಅಕ್ಟೋಬರ್ 02): ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ (Byappanahalli – KR Pura Metro) ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (tejasvi surya) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂಆರ್ಎಸ್ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ. ರಾಹುಲ್ ಗಾಂಧಿಯಿಂದ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ, ರಾಹುಲ್ ಗಾಂಧಿ ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಬೈಯ್ಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಯುವ ಮೋರ್ಚಾ ಆಯೋಜಿಸಿದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಉದ್ಘಾಟನೆಯಾದರೆ ಈ ಸಂಖ್ಯೆಯಲ್ಲಿ ಸುಮಾರು ಶೇ. 50-60 ರಷ್ಟು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ. ನೂತನ ಮೆಟ್ರೋ ಮಾರ್ಗವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಆಗ್ರಹಿಸಿದ್ದಾರೆ.
Around 5.7 lakh people use Metro in Bengaluru everyday.
Around 50-60% of this number are set to benefit if Byappanahalli – KR Pura stretch opens. It will also attract new users. However, State Govt is not opening the stretch for public use, despite all clearances from CMRS.… pic.twitter.com/cpF5Zsi3gF
— Tejasvi Surya (@Tejasvi_Surya) October 1, 2023
ಸೆಪ್ಟೆಂಬರ್ 21ರಂದು ನೇರಳೆ ಮಾರ್ಗದ ಮಿಸ್ಸಿಂಗ್ ಲಿಂಕ್ ಎನಿಸಿಕೊಂಡಿದ್ದ ಆರ್ ಪುರ – ಬೈಯಪ್ಪನಹಳ್ಳಿ ನಡುವಿನ 2-ಕಿಮೀ ಮಾರ್ಗದ ಸುರಕ್ಷತಾ ಪರಿಶೀಲನೆ ಮಾಡಿದ್ದ ಸಿಎಂಆರ್‌ಎಸ್ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿತ್ತು. ಆದ್ರೆ, ಇದುವರೆಗೂ ಉದ್ಘಾಟನೆಯಾಗಿಲ್ಲ. ವಿಳಂಬಕ್ಕೆ ಕಾರಣವೇನು ಎನ್ನುವುದು ಸಹ ತಿಳಿದುಬಂದಿಲ್ಲ.