AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಆಫರ್ ಕೊಟ್ಟಿದೆ -ಸಿದ್ದರಾಮಯ್ಯ

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಶುರು ಮಾಡಿವೆ. ಟಿಕೆಟ್ ವಂಚಿತರು ಬಂಡಾಯ ಏಳುತ್ತಿದ್ದು ಪಕ್ಷ ಬದಲಾಯಿಸುತ್ತಿದ್ದಾರೆ. ಮತ್ತೊಂದೆಡೆ ಆಪರೇಷನ್ ಕಮಲ, ಅಪರೇಷನ್ ಅಸ್ತದಂತಹ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಆದರೆ ಇತ್ತ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಆಫರ್ ಕೊಟ್ಟಿದೆ -ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಆಯೇಷಾ ಬಾನು
|

Updated on:Mar 24, 2024 | 2:13 PM

Share

ಬೆಂಗಳೂರು, ಮಾರ್ಚ್​.23: ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ. ಪ್ರಚಾರ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ನಾನಾ ತಯಾರಿ ಆರಂಭಿಸಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡುವಂತೆ ಮಾಡಲು ಬಿಜೆಪಿ ತಲಾ 50 ಕೋಟಿ ರೂಪಾಯಿ ನೀಡುವುದಾಗಿ ಆಫರ್ ಕೊಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತದೆ. ಅಕ್ರಮದ ಮೂಲಕ ಸಂಪತ್ತು ಗಳಿಸಿದ ಶ್ರೀಮಂತರು ವಿರೋಧ ಪಕ್ಷಗಳಲ್ಲಿ ಮಾತ್ರ ಇದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಬಿಜೆಪಿ ಅವರೇ ಭ್ರಷ್ಟಾಚಾರದ ಮೂಲ ಪಿತಾಮಹರು ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಇಂದಿಗೂ ಅವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸುತ್ತಿದ್ದಾರೆ. ನಮ್ಮ ಶಾಸಕರಿಗೆ ರಾಜೀನಾಮೆ ನೀಡುವಂತೆ 50 ಕೋಟಿ ರೂ. ಆಮಿಷವೊಡ್ಡತ್ತಿದ್ದಾರೆ. ನಿಮ್ಮ ಚುನಾವಣಾ ವೆಚ್ಚಕ್ಕೂ ಹಣ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಅವರು ಯಾವ ಹಣದ ಭರವಸೆ ನೀಡುತ್ತಿದ್ದಾರೆ? ಅದು ಕಪ್ಪು ಹಣ ಅಲ್ಲವೇ? ಅದು ಭ್ರಷ್ಟಾಚಾರದ ಹಣವಲ್ಲವೇ? ಎಂದು ಸಿಎಂ ಕೆಂಡಕಾರಿದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಬೇಸಿಗೆಯಲ್ಲಿ ಬಿಗ್ ಶಾಕ್; 200 ಯೂನಿಟ್‌‌ಗಿಂತ ಜಾಸ್ತಿ ಬಳಸಿದ್ರೆ ಶೇ. 20 ರಷ್ಟು ಫುಲ್ ಬಿಲ್ 

ನಮ್ಮೆಲ್ಲರ ಹಣವನ್ನು ಬಿಜೆಪಿ ಸೀಜ್ ಮಾಡಿದೆ

ರಾಜ್ಯ ಕಾಂಗ್ರೆಸ್‌ನ 118.8 ಕೋಟಿ ರೂಪಾಯಿ ಪಕ್ಷದ ಬ್ಯಾಂಕ್ ಖಾತೆಗಳಲ್ಲಿ ಐಟಿ ಇಲಾಖೆಯಿಂದ ಸ್ಥಗಿತಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೋದಿ ಆಡಳಿತವನ್ನು ಟೀಕಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್, ನಾವು 78 ಲಕ್ಷ ಜನರನ್ನು ಪಕ್ಷಕ್ಕೆ ಸೇರಿಸಿದ್ದೇವೆ ಮತ್ತು ಅವರು ತಲಾ 10 ರೂ. ಯುವ ಕಾಂಗ್ರೆಸ್ ಸದಸ್ಯತ್ವದಿಂದ ಸುಮಾರು 90 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದೇವೆ. ಎಂಎಲ್ಎ ಟಿಕೆಟ್ ಆಕಾಂಕ್ಷಿಗಳಿಂದ ತಲಾ 2 ಲಕ್ಷ ರೂಪಾಯಿ ಅಂದರೆ ಸುಮಾರು 21 ಕೋಟಿ ರೂಪಾಯಿ ಸಂಗ್ರಹಿಸಿದ್ದೇವೆ. ಆ ಎಲ್ಲ ಹಣವನ್ನು ಬಿಜೆಪಿ ಸೀಜೆ ಮಾಡಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:18 am, Sat, 23 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ