AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕವನ್ನ ಬರ್ಬಾದ್‌ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಮಾಡೆಲ್-ಬಿಜೆಪಿ

ವಿದ್ಯುತ್​ ಸರಬರಾಜು ಕಂಪನಿಗಳ ಬಾಕಿ ಪಾವತಿಸಿ ಎಂದು ಇಂಧನ ಇಲಾಖೆ ಸರ್ಕಾರಕ್ಕೆ ಪತ್ರ ಬರೆದಿದೆ. ಈ ಹಿನ್ನಲೆ ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದು, ಸಿಎಂ ಸಿದ್ದರಾಮಯ್ಯ ಅವರೇ, ಕರ್ನಾಟಕ ಬರ್ಬಾದ್‌ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಕರ್ನಾಟಕವನ್ನ ಬರ್ಬಾದ್‌ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಮಾಡೆಲ್-ಬಿಜೆಪಿ
ಸಿದ್ದರಾಮಯ್ಯ, ಬಿಜೆಪಿ
ಕಿರಣ್ ಹನುಮಂತ್​ ಮಾದಾರ್
|

Updated on: Jul 02, 2024 | 2:55 PM

Share

ಬೆಂಗಳೂರು, ಜು.02: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ಇಂದು (ಮಂಗಳವಾರ) ರಾಜ್ಯ ಬಿಜೆಪಿ (BJP) ಘಟಕ ತನ್ನ ‘ಎಕ್ಸ್’ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದೆ. ‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್‌ ಮಾಡುವುದೇ ಕಾಂಗ್ರೆಸ್(Congress) ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.

ಬಿಜೆಪಿ ಟ್ವೀಟ್​

ಇದನ್ನೂ ಓದಿ:ಕಾಂಗ್ರೆಸ್​ ಬೆನ್ನಲ್ಲೇ ಬಿಜೆಪಿಯಲ್ಲಿಯೂ ಶುರುವಾಗುತ್ತಾ ಆಂತರಿಕ ಕಲಹ? ವಿಪಕ್ಷ ನಾಯಕನ ಬದಲಾವಣೆ ಚರ್ಚೆ ಮುನ್ನೆಲೆಗೆ

ಜೊತೆಗೆ ‘ದೈನಂದಿನ ಖರ್ಚಿಗೂ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು, ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಕರ್ನಾಟಕ ಬರ್ಬಾದ್‌ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.

ಬಾಕಿ ಪಾವತಿಸಿ ಎಂದು ಪತ್ರ

ವಿದ್ಯುತ್​ ಸರಬರಾಜು ಕಂಪನಿಗಳು ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ವಿದ್ಯುತ್​ ಖರೀದಿ ಶುಲ್ಕವನ್ನು ಪಾವತಿಸಲು ಹಾಗೂ ಕಂಪನಿಯ ಇತರೆ ವೆಚ್ಚಗಳನ್ನು ಭರಿಸಲು ಕಷ್ಟಕರವಾಗಿದ್ದು, ಬಾಕಿ ಪಾವತಿಸಿ ಎಂದು ಸರ್ಕಾರಕ್ಕೆ ಪತ್ರ ಬರೆದಿದೆ. ಈ ಹಿನ್ನಲೆ ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದೆ

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ