ಬೆಂಗಳೂರು: 2014-15ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆಯೆಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವರದಿ ನೀಡಿದೆ. ನೇಮಕಾತಿಯಲ್ಲಿ ಮೇಲ್ನೋಟಕ್ಕೆ ಅಕ್ರಮವೆಸಗಿರುವುದು ಸಾಬೀತಾಗಿದೆ.
ಶಿಕ್ಷಕರ ನೇಮಕಾತಿ ಸಂಬಂಧ ಕೇಂದ್ರೀಕೃತ ದಾಖಲಾತಿ ಘಟಕ, ಡಿಡಿಪಿಐ ಕಚೇರಿಯಲ್ಲಿನ ದಾಖಲಾತಿಗೆ ಯಾವುದೇ ಸಾಮ್ಯತೆ ಇಲ್ಲ. ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳಿಗೆ ಸಾಮ್ಯತೆ ಇಲ್ಲ. ಕಡಿಮೆ ಅಂಕ ಹೊಂದಿರುವವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಈ ಸಂಬಂಧ ಅವ್ಯವಹಾರ ದಾಖಲೆ ಬಿಡುಗಡೆಗೆ ಬಿಜೆಪಿ ಮುಂದಾಗಿದೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಆರೋಪ ಹಿನ್ನೆಲೆ ವಿಪಕ್ಷ ಕಾಂಗ್ರೆಸ್ ವಿರುದ್ಧ ಸಿದ್ದರಾಮಯ್ಯ ಸರ್ಕಾರದ ಅವ್ಯವಹಾರಗಳ ದಾಖಲೆಗಳ ಬಿಡುಗಡೆಗೆ ಬಿಜೆಪಿ ಮುಂದಾಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿನ ಅಕ್ರಮ ಪ್ರಕರಣಗಳನ್ನು ಮುನ್ನೆಲೆಗೆ ತರಲು ಆಡಳಿತ ಪಕ್ಷ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. 2014-15 ರಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್ -2 ಸಹ ಶಿಕ್ಷಕರು ಮತ್ತು ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದ ಸಿಐಡಿ ತನಿಖೆಗೆ ಒಪ್ಪಿಸಿರುವ ದಾಖಲೆಯನ್ನು ಬಿಜೆಪಿ ಹೊರ ತಂದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕೂಡಾ ನೇಮಕಾತಿಯಲ್ಲಿ ಆಕ್ರಮ ಆಗಿತ್ತು ಎಂದು ತೋರಿಸುವ ಮೂಲಕ ಕಾಂಗ್ರೆಸ್ ಪಕ್ಷದ ಪಿಎಸ್ಐ ಅಕ್ರಮ ಆರೋಪಕ್ಕೆ ಬಿಜೆಪಿ ಕೌಂಟರ್ ಕೊಟ್ಟಿದೆ.
ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಚುರುಕುಗೊಂಡ ತನಿಖೆ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧಿಕಾರವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಸಂಬಂಧ ಬಂಧಿತ ಶಿಕ್ಷಕರನ್ನು 8 ದಿನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಬಂಧಿತ 11 ಶಿಕ್ಷಕರಲ್ಲಿ ಇಬ್ಬರು ಯಾವುದೇ ಅಪ್ಲಿಕೇಶನೇ ಹಾಕದೇ ಶಿಕ್ಷಕರ ಹುದ್ದೆಗೆ ನೇಮಕವಾಗಿದ್ದಾರೆ. ಕಡಿಮೆ ಮಾರ್ಕ್ಸ್ ಬಂದಿದ್ರು ಸೆಕೆಂಡ್ ಲಿಸ್ಟ್ ನಲ್ಲಿ ಸೆಲೆಕ್ಟ್ ಆಗಿರುವುದು ಬೆಳಕಿಗೆ ಬಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ