ಸದನದಲ್ಲಿ ಧ್ವನಿ ಎತ್ತಲಿವೆ ಜೈನಮುನಿ, ಯುವ ಬ್ರಿಗೇಡ್ ಕೊಲೆ ಪ್ರಕರಣ; ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯಿಂದ 2 ತಂಡ ರಚನೆ

ಜೈನಮುನಿ, ಯುವ ಬ್ರಿಗೇಡ್ ಕೊಲೆ ಪ್ರಕರಣ ಸೇರಿದಂತೆ ಈ ಎರಡೂ ಕೊಲೆಗಳನ್ನು ಖಂಡಿಸಿ ಇಂದು ವಿಪಕ್ಷ ಬಿಜೆಪಿ ಸದಸ್ಯರು ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸದನದಲ್ಲಿ ಧ್ವನಿ ಎತ್ತಲಿವೆ ಜೈನಮುನಿ, ಯುವ ಬ್ರಿಗೇಡ್ ಕೊಲೆ ಪ್ರಕರಣ; ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯಿಂದ 2 ತಂಡ ರಚನೆ
ಜೈನಮುನಿ ಕಾಮಕುಮಾರ ನಂದಿ ಮಹಾರಾಜ, ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್
Follow us
TV9 Web
| Updated By: ಆಯೇಷಾ ಬಾನು

Updated on:Jul 11, 2023 | 7:22 AM

ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು(Acharya Sri Kamakumara Nandi Maharaj)ಬರ್ಬರ ಹತ್ಯೆ ಮಾಡಲಾಗಿದೆ. ಮತ್ತೊಂದೆಡೆ ಮೈಸೂರು ಜಿಲ್ಲೆ ಟಿ ಟಿ. ನರಸೀಪುರದಲ್ಲಿ ನಡೆದ ಹನುಮ ಜಯಂತಿಯ ಸಂದರ್ಭದಲ್ಲಿ ಆದ ಕ್ಷುಲ್ಲಕ ವಿಚಾರದ ಗಲಾಟೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ನನ್ನು(Yuva Brigade Venugopal) ಕೊಲೆ ಮಾಡಲಾಗಿದೆ. ಹೀಗಾಗಿ ಈ ಎರಡೂ ಕೊಲೆಗಳನ್ನು ಖಂಡಿಸಿ ಇಂದು ವಿಪಕ್ಷ ಬಿಜೆಪಿ(BJP Karnataka) ಸದಸ್ಯರು ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದೆ. ಎರಡು ಕೊಲೆಗಳನ್ನು ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಸಲು ಬಿಜೆಪಿ ಹೊರಟಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್​ನಲ್ಲಿ ಧರಣಿ ನಡೆಸಲಿದೆ. 2013-18 ರ ಅವಧಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣಗಳನ್ನು ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಬಿಂಬಿಸಿತ್ತು. ಅದು ಬಿಜೆಪಿಗೆ ಪರೋಕ್ಷವಾಗಿ ಚುನಾವಣಾ ಲಾಭವನ್ನೂ ತಂದುಕೊಟ್ಟಿದ್ದು ಸುಳ್ಳಲ್ಲ. ಈಗ ಮತ್ತೆ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಂಬಿಸಲು ಬಿಜೆಪಿ ಮುಂದಾಗಿದೆ. ಈ ಮೂಲಕ ಹಿಂದೂ ವೋಟ್ ಬ್ಯಾಂಕ್ ಕ್ರೋಢೀಕರಣಗೊಳ್ಳಬಹುದು ಎಂಬ ಲೆಕ್ಕಾಚಾರವಿದೆ.

ಇದನ್ನೂ ಓದಿ: ಹತ್ಯೆಯಾದ ಯುವ ಬ್ರಿಗೇಡ್ ಕಾರ್ಯಕರ್ತನ ಕುಟುಂಬಕ್ಕೆ ಸಿಗದ ಪರಿಹಾರ; ಮೈಸೂರು ಡಿಸಿ ಹೇಳುವುದೇನು?

ಬಿಜೆಪಿಯಿಂದ ಸತ್ಯಾಸತ್ಯತೆ ಪರಿಶೀಲನೆಗೆ ಎರಡು ತಂಡ ರಚನೆ

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಹಾಗೂ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಾಸತ್ಯತೆ ಪರಿಶೀಲನೆಗೆ ಎರಡು ತಂಡ ರಚನೆ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

ಇಂದು ಜೈನಮುನಿ ಹತ್ಯೆಯಾದ ಸ್ಥಳಕ್ಕೆ ನಳಿನ್ ಕುಮಾರ್ ಕಟೀಲು ನೇತೃತ್ವದ 11 ಜನರ ತಂಡ ಭೇಟಿ ನೀಡಲಿದೆ. ಇಂದು ಮಧ್ಯಾಹ್ನ 12ಗಂಟೆ ಸುಮಾರಿಗೆ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಬಿಜೆಪಿ ನಾಯಕರ ತಂಡ ಭೇಟಿ ನೀಡಲಿದೆ.  ಜೈನಮುನಿಗಳ ಪೂರ್ವಾಶ್ರಮದ ಸಂಬಂಧಿಗಳೊಂದಿಗೆ ಬಿಜೆಪಿ ತಂಡ ಮಾತುಕತೆ ನಡೆಸಲಿದೆ.  ನಳೀನ್ ಕುಮಾರ ಕಟೀಲ್ ತಂಡದಲ್ಲಿ ಅಶ್ವಥ್‌ ನಾರಾಯಣ, ಮಹೇಶ ತೆಂಗಿನಕಾಯಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಲ ಅಂಗಡಿ, ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಅನೀಲ್ ‌ಬೆನಕೆ ಸೇರಿ 11 ಜನ ಇದ್ದಾರೆ.

ಹಾಗೂ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿಯಲ್ಲಿನ ವೇಣುಗೋಪಾಲ್ ನಿವಾಸಕ್ಕೆ ಸಿ.ಟಿ.ರವಿ ನೇತೃತ್ವದ 10 ಜನರ ತಂಡ ಭೇಟಿ ನೀಡಲಿದ್ದಾರೆ. ತಂಡದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಮಾಜಿ ಶಾಸಕರಾದ ಎನ್.ಮಹೇಶ್, ಪ್ರೀತಮ್ ಗೌಡ, ಅರಣ್ಯ ವಸತಿ&ವಿಹಾರ ನಿಗಮದ ಮಾಜಿ ಅಧ್ಯಕ್ಷ ಅಪ್ಪಣ್ಣ, ಮಾಜಿ ಎಂಎಲ್‌ಸಿ ಪ್ರೊ.ಮಲ್ಲಿಕಾರ್ಜುನ, ಬಿಜೆಪಿ ವಿಭಾಗ ಪ್ರಭಾರಿ ರವಿಶಂಕರ್ ಹಾಗೂ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಂಗಳಾ ಸೋಮಶೇಖರ್ ಭೇಟಿ ನೀಡಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:11 am, Tue, 11 July 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?