Sign In

By signing in or creating an account, you agree with Associated Broadcasting Company's Terms & Conditions and Privacy Policy.

Anti Conversion Bill: ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ

ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ.

Anti Conversion Bill: ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ
ಮತಾಂತರ ನಿಷೇಧ ಕಾನೂನು ಪರ-ವಿರೋಧದ ಚರ್ಚೆಗಳು ಮತ್ತೊಮ್ಮೆ ಗರಿಗೆದರಿವೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 15, 2022 | 7:30 AM

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಗುರುವಾರ (ಸೆ 15) ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಆಡಳಿತಾರೂಢ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮಂಡನೆಗೆ ಪೂರ್ವಭಾವಿಯಾಗಿ ನಿನ್ನೆ (ಸೆ 14) ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (Rashtriya Swayamsevak Sangh – RSS) ಕಚೇರಿಯಲ್ಲಿ ವಿಧಾನ ಪರಿಷತ್​ನ ಬಿಜೆಪಿ ಸದಸ್ಯರ ಸಭೆ ನಡೆಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವಕೃಪಾದಲ್ಲಿ ವಿಧೇಯಕ ಮಂಡನೆ ವೇಳೆ ಪ್ರಬಲವಾಗಿ ಸಮರ್ಥಿಸಿಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ವಿಧಾನ ಪರಿಷತ್​ ಬಿಜೆಪಿ ಸದಸ್ಯರಿಗೆ ಈ ಸಂಬಂಧ ಆರ್​ಎಸ್​ಎಸ್​ ನಿರ್ದೇಶನ ನೀಡಿದೆ. ವಿಧಾನ ಪರಿಷತ್​ನಲ್ಲಿ ಇಂದು ಪ್ರಶೋತ್ತರ ಕಲಾಪ ನಂತರ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಲಿದ್ದಾರೆ.

ಆರ್​ಎಸ್​ಎಸ್​ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್​ನ ಸರ್ಕಾರಿ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಪರಿಷತ್​ ಸದಸ್ಯರಾದ ಎನ್.ರವಿಕುಮಾರ್, ತುಳಸಿ ಮುನಿರಾಜುಗೌಡ, ಕೆ.ಎಸ್.ನವೀನ್, ಪ್ರತಾಪಸಿಂಹ ನಾಯಕ, ಎಂ.ಕೆ.ಪ್ರಾಣೇಶ್​ ಉಪಸ್ಥಿತರಿದ್ದರು.

ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಆದರೆ ವಿಧಾನ ಪರಿಷತ್​ನಲ್ಲಿ ಈವರೆಗೆ ಮಸೂದೆಯನ್ನು ಸರ್ಕಾರ ಮಂಡಿಸಿಲ್ಲ. ಮಸೂದೆ ಮಂಡಿಸುವ ತಡವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಪ್ರಸ್ತುತ ವಿಧಾನ ಪರಿಷತ್​ನಲ್ಲಿ ಬಿಜೆಪಿಯ 41 ಸದಸ್ಯರಿದ್ದಾರೆ. ಕಾಂಗ್ರೆಸ್​ನ 26 ಮತ್ತು ಜೆಡಿಎಸ್​ನ 8 ಸದಸ್ಯರಿದ್ದಾರೆ. ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಿರುವುದರಿಂದ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುವ ಉತ್ಸಾಹ ಬಿಜೆಪಿಗೆ ಬಂದಿದೆ.

ಮತಾಂತರ ನಿಷೇಧ ಕಾಯ್ದೆಯ ಮುಖ್ಯಾಂಶಗಳು

1) ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡತಕ್ಕದ್ದು.

2) ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಈಗಾಗಲೇ ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡತಕ್ಕದ್ದು

3) ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡತಕ್ಕದ್ದು

4) ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು

5) ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು

6) ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸತಕ್ಕದ್ದು

7) ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡತಕ್ಕದ್ದು

8) ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡತಕ್ಕದ್ದು

9) ಮ್ಯಾಜಿಸ್ಟ್ರೇಟ್​‌ರಿಂದ ಮಾಹಿತಿ ಸ್ವಕರಿಸಿದ ಬಳಿಕ ಸಂಬಂಧಪಟ್ಟ ಇಲಾಖೆ ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮ ವಹಿಸುವುದು.

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್