AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ!

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಮಾಡಿದೆ. ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿಜಯೇಂದ್ರ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ವೇಳೆ ಹೈಡ್ರಾಮಾವೇ ನಡೆದಿದೆ. ಈ ಕುರಿತು ಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ.

ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ!
ಬಿಜೆಪಿ ಪ್ರತಿಭಟನೆ
ಕಿರಣ್​ ಹನಿಯಡ್ಕ
| Edited By: |

Updated on: Nov 11, 2026 | 6:30 PM

Share

ಮುಖ್ಯಾಂಶಗಳು

  • ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
  • ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಮುಗಿಸಿ ಸಿಎಂ ನಿವಾಸದತ್ತ ನಾಯಕರು
  • ರಸ್ತೆಗೆ ಅಡ್ಡ ಬ್ಯಾರಿಕೇಡ್‌ ಹಾಕಿ ಬಿಜೆಪಿ ನಾಯಕರನ್ನು ತಡೆದ ಪೊಲೀಸರು

ಬೆಂಗಳೂರು, ನವೆಂಬರ್​ 11: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಮುತ್ತಿಗೆ ಹಾಕಲು ಫ್ರೀಡಂಪಾರ್ಕ್​​​​​ನಿಂದ ತೆರಳಿದ್ದರು. ಆದರೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಇದಕ್ಕೆ ಜಗ್ಗದ ಬಿಜೆಪಿ ನಾಯಕರು ಬ್ಯಾರಿಕೇಡ್‌ ದಾಟಿ ಮುನ್ನುಗ್ಗಿದ್ದು, ಈ ವೇಳೆ ಹೈಡ್ರಾಮಾವೇ ನಡೆಯಿತು.

ಬಿಜೆಪಿ ನಾಯಕರು ಮುಂದಕ್ಕೆ ಸಾಗದಂತೆ ಫ್ರೀಡಂಪಾರ್ಕ್ ಬಳಿ ವಶಕ್ಕೆ ಪಡೆದರು. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್​, ಮುನಿರತ್ನ, ಚನ್ನಬಸಪ್ಪ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ NDA ಸರ್ಕಾರ ನಿಶ್ಚಿತ; ಯಡಿಯೂರಪ್ಪ

ಇನ್ನು ಇದಕ್ಕೂ ಮುನ್ನ ಫ್ರೀಡಂಪಾರ್ಕ್​​​ನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ‘ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ NDA ಸರ್ಕಾರ ನಿಶ್ಚಿತ’ ಎಂದಿದ್ದಾರೆ.

ಡಿಕೆ,‌ ಬಿಕೆ, ಪಿಕೆ ಅವರೇ ನಿಮ್ಮ ಆಟ ಇನ್ನು ನಡೆಯಲ್ಲ: ಬಿವೈ ವಿಜಯೇಂದ್ರ ಕಿಡಿ

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ‘ಡಿಕೆ,‌ ಬಿಕೆ, ಪಿಕೆ ಅವರೇ ನಿಮ್ಮ ಆಟ ಇನ್ನು ನಡೆಯಲ್ಲ. ಗಂಟು ಮೂಟೆ ಕಟ್ಟಿ ಮನೆಗೆ ಹೋಗುವ ಸಮಯ ಹತ್ತಿರ ಬಂದಿದೆ. ಯಾವಾಗ ಚುನಾವಣೆ ನಡೆದರೂ ಜನರು ನಿಮ್ಮನ್ನು ಮನೆಗೆ ಕಳಿಸ್ತಾರೆ. ನಾಲ್ಕು ತಿಂಗಳಲ್ಲೇ ಸಿಎಂ ಡಿಕೆ ಶಿವಕುಮಾರ್ ಕುರ್ಚಿ ಅಲ್ಲಾಡುತ್ತಿದೆ. ಸಿದ್ದರಾಮಯ್ಯರ ಕೈ ಕಾಲು ಹಿಡಿದಾದರೂ ಕುರ್ಚಿ ಉಳಿಸಿಕೋ, ಇಲ್ಲದಿದ್ದರೆ ನಿನ್ನ ಹಣೆಬರಹ ಏನಾದರೂ ಮಾಡ್ಕೋ ಎಂದು ಡಿಕೆ ಶಿವಕುಮಾರ್​ಗೆ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ’ ಎಂದು ಕಿಡಿಕಾರಿದರು.

ಡಿಕೆ ಶಿವಕುಮಾರ್​ ಅಧಿಕಾರಕ್ಕೆ ಬಂದ್ಮೇಲೆ ದೇವರೂ ಅವರ ಕಡೆ ನಿಲ್ತಿಲ್ಲ: ಅಶೋಕ್

‘ಡಿಕೆ ಶಿವಕುಮಾರ್​ ಅಧಿಕಾರಕ್ಕೆ ಬಂದ್ಮೇಲೆ ದೇವರೂ ಅವರ ಕಡೆ ನಿಲ್ತಿಲ್ಲ. ಡೀಸೆಲ್ ಹಾಕಲು ದುಡ್ಡಿಲ್ಲ, ನೀರು ಕೊಡಲೂ ಸರ್ಕಾರದಲ್ಲಿ ದುಡ್ಡಿಲ್ಲ. ಕಾಂಗ್ರೆಸ್‌ನವರು ಮನೆಹಾಳರು ಅಂತಾ ರಾಜ್ಯಕ್ಕೆ ಡಿಕೆ ಶಿವಕುಮಾರ್​ ತೋರಿಸಿಕೊಟ್ಟಿದ್ದಾರೆ. ಅವರಿಗೆ ಅಡಳಿತ ಮಾಡಲು ಬರಲ್ಲ, ಆಡಳಿತ ಮಾಡಲು ಗೊತ್ತಿಲ್ಲ’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

LIVE TV

‘ಗುರುವಾರ ಬಂದರೆ ಸಾಕು ಬಡವರ ಎದೆ ಹೊಡೆದುಕೊಳ್ಳುತ್ತದೆ’ ಎಂದು ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಇದು ದರೋಡೆಕೋರರ ಸರ್ಕಾರ ಅಂತಾ ಸಿಟಿ ರವಿ ವಾಗ್ದಾಳಿ ನಡೆಸಿದರೆ, ಲೂಟಿ ಹೊಡೆಯಲು ಬಂದಿದ್ದಾರೆ’ ಅಂತಾ ಛಲವಾದಿ ಕಿರಿಕಾರಿದ್ದಾರೆ.

ಬಿಜೆಪಿ ಪ್ರತಿಭಟನೆಗೆ ಡಿಕೆ ಶಿವಕುಮಾರ್ ತಿರುಗೇಟು

ಬಿಜೆಪಿ ಪ್ರತಿಭಟನೆಗೆ ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಥೆನಾಲ್ ಮಿಕ್ಸ್​ ಮಾಡಿದ್ದರಿಂದ ವಾಹನಗಳು ಡ್ಯಾಮೇಜ್ ಆಗಿದೆ. ಅದು ಬಿಜೆಪಿಯವರ ಕಣ್ಣಿಗೆ ಕಾಣುತ್ತಿಲ್ವಾ ಎಂದು ಟಾಂಗ್​ ಕೊಟ್ಟಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆ ವೇಳೆ ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್

ಬಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಕೌಂಟರ್ ನೀಡಿದೆ. ಕಲಬುರಗಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬರ ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್
ಈ ವರ್ಷ ಪಟಾಕಿ ಅವಘಡಗಳಿಂದ ಹೆಚ್ಚು ಮಂದಿಗೆ ಗಾಯ: ವೈದ್ಯರಿಂದ ಮಾಹಿತಿ
ಈ ವರ್ಷ ಪಟಾಕಿ ಅವಘಡಗಳಿಂದ ಹೆಚ್ಚು ಮಂದಿಗೆ ಗಾಯ: ವೈದ್ಯರಿಂದ ಮಾಹಿತಿ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್