Siddaramaiah: ರಾಜ್ಯದಲ್ಲಿ ವಿದ್ಯುತ್ ದುರ್ಬಳಕೆಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ -ಸಿಎಂ ಸಿದ್ದರಾಮಯ್ಯ

ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ ವಿದ್ಯುತ್ ದುರ್ಬಳಕೆ ಮತ್ತು ದುಂದುವೆಚ್ಚಕ್ಕೆ ಪ್ರಚೋದನೆ ನೀಡುತ್ತಿದೆ. ಇದು ಜನವಿರೋಧಿ ನಡೆ. ರಾಜ್ಯದ ಪ್ರಜ್ಞಾವಂತರು ಇದಕ್ಕೆ ಮಣಿಯುವುದಿಲ್ಲ ಎಂಬ ಭರವಸೆ ನಮಗಿದೆ ಎಂದ ಸಿದ್ದರಾಮಯ್ಯ.

Siddaramaiah: ರಾಜ್ಯದಲ್ಲಿ ವಿದ್ಯುತ್ ದುರ್ಬಳಕೆಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ -ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
|

Updated on: Jun 06, 2023 | 3:04 PM

ಬೆಂಗಳೂರು: 200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ಯೋಜನೆಯ(Gruha Jyothi Scheme) ದುರುಪಯೋಗಕ್ಕೆ, ವಿದ್ಯುತ್ ದುಂದುವೆಚ್ಚಕ್ಕೆ ಬಿಜೆಪಿ(BJP) ಪ್ರಚೋದನೆ ನೀಡುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಆರೋಪಿಸಿದ್ದಾರೆ. ಜೂನ್ 5ರ ಸೋಮವಾರ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಸಿದ್ದರಾಮಯ್ಯ ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ ಎನ್ನುವ ಮೂಲಕ ಪ್ರಕೃತಿ ವಿನಾಶವನ್ನು ಮಾನವನ ನಾಶಕ್ಕೆ ಹೋಲಿಸಿದರು. ಜನರನ್ನುದ್ದೇಶಿಸಿ ಮಾತನಾಡಿದ ಅವರು, ‘ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ, ಪ್ರಕೃತಿ ವಿನಾಶವೇ ನಮ್ಮ ವಿನಾಶ, ಹಾಗಾಗಿ ಪ್ರಕೃತಿಯೊಂದಿಗೆ ಬೆಳೆದು ಬದುಕಬೇಕು’ ಎಂದರು.

ಸಂಕಷ್ಟದಲ್ಲಿರುವ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರ ನೆರವಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಒಂದು ವರ್ಷದಲ್ಲಿ ಸರಾಸರಿ ಬಳಕೆಗಿಂತ ಶೇ.10ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡಿದ್ದೇವೆ. ಇದನ್ನು ಒಪ್ಪಿಕೊಂಡು ರಾಜ್ಯದ ಜನರು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: World Environment Day: ಸೆಂಟ್ರಲ್ ಕಾಲೇಜಿನಲ್ಲಿ ಪರಿಸರ ದಿನ ಆಚರಿಸಿದ ಸಿಎಂ, ಡಿಸಿಎಂ

ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ ವಿದ್ಯುತ್ ದುರ್ಬಳಕೆ ಮತ್ತು ದುಂದುವೆಚ್ಚಕ್ಕೆ ಪ್ರಚೋದನೆ ನೀಡುತ್ತಿದೆ. ಇದು ಜನವಿರೋಧಿ ನಡೆ. ರಾಜ್ಯದ ಪ್ರಜ್ಞಾವಂತರು ಇದಕ್ಕೆ ಮಣಿಯುವುದಿಲ್ಲ ಎಂಬ ಭರವಸೆ ನಮಗಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಮನೆಗಳಿಗೆ (ಗೃಹ ಜ್ಯೋತಿ) 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ ಎಂದರು.

ಪರಿಸರ ಸಂರಕ್ಷಣೆ, ಬೆಳೆಸುವುದು ಮತ್ತು ಅರಣ್ಯ ಬೆಳೆಸುವುದು ಅರಣ್ಯ ಇಲಾಖೆಯ ಕರ್ತವ್ಯ ಮಾತ್ರವಲ್ಲದೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಕೃತಿಯ ಸದುಪಯೋಗ ಪಡೆಯುತ್ತಿರುವ ಪ್ರತಿಯೊಬ್ಬರಿಗೂ ಪ್ರಕೃತಿಯನ್ನು ಉಳಿಸುವ ಹೊಣೆಗಾರಿಕೆ ಇದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’