ಬಿಜೆಪಿ ಬುರುಡೆ ಪಾರ್ಟಿ; ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದವರು ಈಜುಕೊಳ ಮಾಡಿದ್ದಾರೆ, ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ
ಈ ತಿಂಗಳ 13ನೇ ತಾರೀಖು ಮುಗಿದ ಜಲಧಾರೆ ಸಮಾರೋಪ ಸಮಾವೇಶದ ಬಗ್ಗೆ 6 ದಿನ ಅಧ್ಯಯನ ಮಾಡಿ ಟ್ವೀಟ್ ಮಾಡಿದೆ ಬಿಜೆಪಿ. ಇನ್ನು ಆರಂಭವಾಗದ ಪಂಚರತ್ನ ಯಾತ್ರೆ ಬಗ್ಗೆ ಆಗಲೇ ಏರಿದೆ ಬೀಪಿ. ಮಿಷನ್ 123 ನಮ್ಮ ಗುರಿ. ನಿಮಗೆ ಯಾಕೆ ಉರಿ? ಎಂದು ಹೆಚ್ಡಿಕೆ ಬಿಜೆಪಿಗೆ ಪಂಚ್ ಕೊಟ್ಟಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ಭಾರತೀಯ ಜನತಾ ಪಕ್ಷ ಎಂದರೆ ಬುರುಡೆ ಪಾರ್ಟಿ. ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದವರು ಈಜುಕೊಳ ಮಾಡಿದ್ದಾರೆ. ಭವ್ಯ ಬೆಂಗಳೂರನ್ನು ಸ್ವಿಮ್ಮಿಂಗ್ ಪೂಲ್ ಮಾಡುತ್ತಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್ಡಿಕೆ ವಾಗ್ದಾಳಿ ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. ‘ಬಿಜೆಪಿ ಎಂಬ ಬುರುಡೆ ಪಾರ್ಟಿ ‘ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ. ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟವರು ಕೆಂಪೇಗೌಡರು ಕಟ್ಟಿದ ಭವ್ಯ ಬೆಂಗಳೂರು ನಗರವನ್ನು ಸ್ವಿಮ್ಮಿಂಗ್ ಪೂಲ್ ಮಾಡುತ್ತಿದ್ದಾರೆ! ರಸ್ತೆಗಳು ರಾಜ ಕಾಲುವೆಗಳಾಗಿ, ಮನೆಗಳು ಕೆರೆಗಳಾಗಿವೆ ಎಂದು ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ,ಕಾರಂಜಿ; ತಾಜ್ ಮಹಲ್ನ ಕಾರಂಜಿಗಳನ್ನು ಮುಚ್ಚಿ: ಅಸಾದುದ್ದೀನ್ ಓವೈಸಿ
ನನ್ನನ್ನು ಲಕ್ಕಿ ಡಿಪ್ ಸಿಎಂ ಎನ್ನುವ ಬಿಜೆಪಿಗೆ, ತನ್ನ ಸಿಎಂಗಳೆಲ್ಲರೂ ಆಪರೇಷನ್ ಕಮಲದ ಕೆಸರಿನಲ್ಲಿ ಡಿಪ್ ಆದವರು ಎನ್ನುವುದು ಗೊತ್ತಿಲ್ಲವೆ? 12/12#ಬಿಜೆಪಿಅಂದರೆ #ಬುರುಡೆ_ಜಾಗಟೆ_ಪಾರ್ಟಿ
— H D Kumaraswamy (@hd_kumaraswamy) May 18, 2022
ಈ ತಿಂಗಳ 13ನೇ ತಾರೀಖು ಮುಗಿದ ಜಲಧಾರೆ ಸಮಾರೋಪ ಸಮಾವೇಶದ ಬಗ್ಗೆ 6 ದಿನ ಅಧ್ಯಯನ ಮಾಡಿ ಟ್ವೀಟ್ ಮಾಡಿದೆ ಬಿಜೆಪಿ. ಇನ್ನು ಆರಂಭವಾಗದ ಪಂಚರತ್ನ ಯಾತ್ರೆ ಬಗ್ಗೆ ಆಗಲೇ ಏರಿದೆ ಬೀಪಿ. ಮಿಷನ್ 123 ನಮ್ಮ ಗುರಿ. ನಿಮಗೆ ಯಾಕೆ ಉರಿ? ಎಂದು ಹೆಚ್ಡಿಕೆ ಬಿಜೆಪಿಗೆ ಪಂಚ್ ಕೊಟ್ಟಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಜೆಡಿಎಸ್ ನಲ್ಲಿ 1+2+3 ಸಂಖ್ಯಾಬಲ ಇದೆ, ಆದರೆ, ಭಾರೀ ಕುಳಗಳ ಬಿಜೆಪಿಯಲ್ಲಿ 1+2 / 1+2+3 ಲೆಕ್ಕವೇ ಇಲ್ಲ. ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ತುಮಕೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಅದರ ಗರ್ಭಗುಡಿಯಲ್ಲಿ 1+2 / 1+2+3ಗಳ ಕುಟುಂಬ ಶಿಶುಗಳೇ ತುಂಬಿವೆ. ಯಡಿಯೂರಪ್ಪ, ಶೆಟ್ಟರ್, ನಿರಾಣಿ, ಜಾರಕಿಹೊಳಿ, ಜೊಲ್ಲೆ; ಒಂದಾ.. ಎರಡಾ? ಪಟ್ಟಿ ಮಾಡುತ್ತಾ ಹೋದರೆ ಅದೇ ಹನುಮನ ಬಾಲ. ಈಗ ಬಿಜೆಪಿಗರು ಹೇಳಬೇಕು, 1+2 / 1+2+3 ಇರುವುದು ಎಲ್ಲಿ? ಈ ವಿಷಯದಲ್ಲಿ ಬಿಜೆಪಿಯದ್ದು ರಾಷ್ಟೀಯ ದಾಖಲೆ. ಕುಟುಂಬವಾದ, ಹೋದ ಕಡೆಯೆಲ್ಲ ಸುಖವಾದದಲ್ಲಿ ತೇಲಿ ತೆವಳುವ ಬಿಜೆಪಿಯ ಸುಖ ಸಿದ್ಧಾಂತಕ್ಕೆ ರಣರೋಚಕ ಇತಿಹಾಸವೇ ಇದೆ. ಬ್ರಿಟಿಷರ ಬಚ್ಚಲು ಬಾಚಿದ ಅವರಿಗೆ ತಮ್ಮ ಕಪಟ ನೀತಿಗೆ ವಿರುದ್ಧವಾಗಿದ್ದ ರಾಷ್ಟ್ರೀಯವಾದ ಎಂಬ ಏಣಿ ಹತ್ತಿ ತಾನು ರಕ್ಕಸರೂಪ ತಾಳಿದ್ದು ಮರೆತಿದೆಯಾ? ಎಂದು ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾನ್ ಚಿತ್ರೋತ್ಸವದಲ್ಲಿ ಗಮನಸೆಳೆದ ತಮನ್ನಾ
ಜನತಾ ಪರಿವಾರ ದೇವೇಗೌಡ ಆಂಡ್ ಸನ್ಸ್ ಅನ್ನುವವರ ಕಣ್ಣುಗಳಿಗೆ ಕಾಮಾಲೆಯಾ? ಬಿಜೆಪಿಯಲ್ಲಿರುವ ಸನ್ಸ್, ಬ್ರದರ್ಸ್ ಮತ್ತು ಫ್ಯಾಮಿಲಿ ಪಾಲಿಟಿಕ್ಸ್ ಬಗ್ಗೆ ಕುರುಡಾ? 9/12
— H D Kumaraswamy (@hd_kumaraswamy) May 18, 2022
ಜೆಡಿಎಸ್ ನಲ್ಲಿ ಪಂಚರತ್ನಗಳಿವೆ, ನಿಜ. ಬಿಜೆಪಿಯಲ್ಲಿ ಸೀಡಿರತ್ನಗಳು, 40% ಕಮಿಷನ್ ರತ್ನಗಳು, ಜನರ ಹಣದ ಲೂಟಿ ರತ್ನಗಳು, ಕಾಸಿಗಾಗಿ ಕೆಲಸ ಮಾರಿಕೊಳ್ಳುವ ರತ್ನಗಳು, ಪಿಎಸ್ ಐ ಕಿಂಗ್ ಪಿನ್ ರತ್ನಗಳು, ಮಾಧ್ಯಮಗಳ ವಿರುದ್ಧ ಕೋರ್ಟ್ ಸ್ಟೇ ತಂದ ರತ್ನಗಳು, ಸದನದಲ್ಲೇ ನೀಲಿಚಿತ್ರ ನೋಡಿದ ರತ್ನಗಳು ಕೂಡ ಇವೆ. ಅಲ್ಲವೇ? 123 ನಮ್ಮ ಗುರಿ. ನಮ್ಮ ಹೋರಾಟ ನಮ್ಮದು. ಬಿಜೆಪಿಗೆ ಇಲ್ಲಿ ಒಂದು ಸೀಟು ಗೆಲ್ಲಬೇಕಾದರೂ ಮೋದಿಯೇ ಗತಿ. 123 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಮಾತು ಹಾಗಿರಲಿ. ನಿಮಗಿದ್ದಾರಾ? ಅಭ್ಯರ್ಥಿಗಳಿಗೆ ದಿಕ್ಕಿಲ್ಲದೆ, ಅಕ್ಕಪಕ್ಕದ ಪಕ್ಷಗಳ ನಾಯಕರ ಮನೆ ಬಾಗಿಲ ನೆಲ ನೆಕ್ಕುವ ನೀವಾ ನಮ್ಮ ಬಗ್ಗೆ ಮಾತನಾಡುವುದು ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜನತಾ ಪರಿವಾರ ದೇವೇಗೌಡ ಆಂಡ್ ಸನ್ಸ್ ಅನ್ನುವವರ ಕಣ್ಣುಗಳಿಗೆ ಕಾಮಾಲೆಯಾ? ಬಿಜೆಪಿಯಲ್ಲಿರುವ ಸನ್ಸ್, ಬ್ರದರ್ಸ್ ಮತ್ತು ಫ್ಯಾಮಿಲಿ ಪಾಲಿಟಿಕ್ಸ್ ಬಗ್ಗೆ ಕುರುಡಾ? ಎಂದು ಪ್ರಶ್ನಿಸುವ ಮೂಲಕ ಸರಣಿ ಟ್ವೀಟ್ಗಳನ್ನು ಮಾಡಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಜನರ ಗಮನ ಬೇರೆಡೆಗೆ ಸೆಳೆಯುವುದರಿಂದ ಸತ್ಯಗಳು ಬದಲಾಗುವುದಿಲ್ಲ, ಭಾರತವು ಶ್ರೀಲಂಕಾದಂತೆ ಕಾಣುತ್ತದೆ: ರಾಹುಲ್ ಗಾಂಧಿ
Published On - 8:48 pm, Wed, 18 May 22