ಸೆಪ್ಟೆಂಬರ್ 11 ರಂದು ನಿಗದಿಯಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಂದೂಡಿಕೆ: ಸಚಿವ ಕೆ. ಸುಧಾಕರ್
ಸೆಪ್ಟೆಂಬರ್ 11 ರಂದು ನಿಗದಿಯಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ಬೆಂಗಳೂರು: ಸೆಪ್ಟೆಂಬರ್ 11 ರಂದು ನಿಗದಿಯಾಗಿದ್ದ ಬಿಜೆಪಿ (BJP) ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ (K Sudhakar) ಹೇಳಿದ್ದಾರೆ. ಹಾಗೇ ಸತತ ಎರಡು ಮುಂದೂಡಿಕೆಯ ಬಳಿಕ ಬಿಜೆಪಿ ಜನೋತ್ಸವ (Janostav) ಸಮಾವೇಶ ಬದಲಾಗಿ ಜನಸ್ಪಂದನಾ ಸಮಾವೇಶವಾಗಿ ಹೆಸರು ಬದಲಿಸಲಾಗಿದೆ ಎಂದು ಹೇಳಿದರು. ಜನಸ್ಪಂದನಾ ಸಮಾವೇಶ ರವಿವಾರ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ಹೇಳಿದರು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಜೊತೆ (CM Basavaraj Bommai) ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ನಾಳೆ ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ
ಬೆಂಗಳೂರು: ನಾಳೆ (ಸೆ. 8) ರಂದು ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರ (ಸೆ. 11) ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಹೇಳಿದ್ದಾರೆ. ದೊಡ್ಡಬಳ್ಳಾಪುರ ಪಟ್ಟಣದಲ್ಲಿ ನಿಗದಿಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ಮುಂದೂಡಲಾಗಿದೆ ಎಂದು ಹೇಳಿದರು.
ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ(61) ನಿಧನವಾದ ಹಿನ್ನೆಲೆ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆಗೆ ನಿರ್ಧರಿಸಿದ್ದೇವೆ. ಶೋಕಾಚರಣೆ ಹಿನ್ನೆಲೆ ಯಾವುದೇ ಸರ್ಕಾರ ಕಾರ್ಯಕ್ರಮವಿರುವುದಿಲ್ಲ. ತುರ್ತಾಗಿ ಪ್ರವಾಹ ನಿರ್ವಹಣೆ ಬಿಟ್ಟರೆ ಸರ್ಕಾರದ ಕಾರ್ಯಕ್ರಮವಿಲ್ಲ ಎಂದರು.
ಉಮೇಶ್ ಕತ್ತಿ ಆತ್ಮಿಯ ಸ್ನೇಹಿತ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ ರಾಜ್ಯ ಕಂಡ ಧಿಂಮತ ನಾಯಕರಾಗಿದ್ದರು. ನಾನು ಭಾರದ ಹೃದಯದಿಂದ ಬೆಳಗಾವಿಗೆ ಬಂದಿದ್ದೇನೆ. ಈ ಸಂದರ್ಭದಲ್ಲಿ ಹೆಚ್ಚು ಮಾತನಾಡಲ್ಲ. ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ, ಅಂತಿಮ ದರ್ಶನಕ್ಕೂ ವ್ಯವಸ್ಥೆ ಇದೆ. ಜನರು ದೊಡ್ಡ ಪ್ರಮಾಣದಲ್ಲಿ ಬಂದಿದ್ದಾರೆ, ಜನ ಸಹಕಾರ ಮಾಡಬೇಕು. ರಾಜ್ಯ ಸರ್ಕಾರದಿಂದ ಗೌರವ ಸಲ್ಲಿಕೆ ಮಾಡುತ್ತೆವೆ ಎಂದು ತಿಳಿಸಿದರು.
ಜನೋತ್ಸವ ಹಿನ್ನೆಲೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬಿಜೆಪಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 8 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ ಹೊಂದಿದ ಹಿನ್ನೆಲೆ ಜನೋತ್ಸವ ಕಾರ್ಯಕ್ರಮವನ್ನು ಸೆ. 11 ಭಾನುವಾರಕ್ಕೆ ಮುಂದೂಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:28 pm, Wed, 7 September 22