ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ; ಪಕ್ಷದ ಸಾಧನೆ ಕೊಂಡಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ಆರಂಭದಲ್ಲಿ ಶಾಸಕರಾಗಿದ್ದ ಸಿ.ಎಂ. ಉದಾಸಿ ಮತ್ತು ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿ ಸಭೆ ಆರಂಭಿಸಲಾಗಿದೆ. ಸಭೆಯಲ್ಲಿ ಉಪಚುನಾವಣೆ ಅವಲೋಕನ, ಮುಂದಿನ ಪರಿಷತ್ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸೇರಿದಂತೆ ಸಂಘಟನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ.
ಬೆಂಗಳೂರು: ನಗರದ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಅಧ್ಯಕ್ಷತೆಯಲ್ಲಿ ಸಭೆಯನ್ನು ಏರ್ಪಡಿಸಲಾಗಿದ್ದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ವಿವಿಧ ಮೋರ್ಛಾಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ವಿವಿಧ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಇನ್ನು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ಆರಂಭದಲ್ಲಿ ಶಾಸಕರಾಗಿದ್ದ ಸಿ.ಎಂ. ಉದಾಸಿ ಮತ್ತು ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿ ಸಭೆ ಆರಂಭಿಸಲಾಗಿದೆ. ಸಭೆಯಲ್ಲಿ ಉಪಚುನಾವಣೆ ಅವಲೋಕನ, ಮುಂದಿನ ಪರಿಷತ್ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸೇರಿದಂತೆ ಸಂಘಟನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ರು. ಈ ವೇಳೆ ಅವರು ಮತಗಟ್ಟೆ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ. ತೈಲ ದರ ಇಳಿಸಿ ಜನಪರ ಬಿಜೆಪಿ ಸರ್ಕಾರ ಎಂದು ತೋರಿಸಿದೆ. ದರ ಇಳಿಕೆಗೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಆದರೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ದರ ಇಳಿಸಿಲ್ಲ. ದೇಶದಲ್ಲಿ ನೂರು ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಅದರಲ್ಲೂ ಉಚಿತವಾಗಿ ಅತೀ ಹೆಚ್ಚು ಲಸಿಕೆಯನ್ನು ನೀಡಿದ ದೇಶ ಭಾರತವಾಗಿದೆ ಎಂದು ಬಿಜೆಪಿ ಸಾಧನೆಯನ್ನು ಕೊಂಡಾಡಿದ್ದಾರೆ.
ಇಂದಿನಿಂದ 3 ದಿನ ರಾಜ್ಯಪಾಲ ಗೆಹ್ಲೋಟ್ ದೆಹಲಿ ಪ್ರವಾಸ ಇಂದಿನಿಂದ 3 ದಿನಗಳ ಕಾಲ ರಾಜ್ಯಪಾಲ ಗೆಹ್ಲೋಟ್ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೊವೀದ್ ನಾಳೆ ರಾಜ್ಯಪಾಲರ ಸಭೆ ಕರೆದಿರುವ ಹಿನ್ನೆಲೆಯಲ್ಲಿ ನಾಳಿನ ಸಭೆಯಲ್ಲಿ ಭಾಗಿಯಾಗಲು ರಾಜ್ಯಪಾಲ ಗೆಹ್ಲೋಟ್ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ.
ಇದನ್ನೂ ಓದಿ: T+1 Settlement Cycle: ಷೇರುಪೇಟೆಯಲ್ಲಿ T+1 ತೀರುವಳಿ ಫೆಬ್ರವರಿ 25ರಿಂದ ಹಂತ ಹಂತವಾಗಿ ಪರಿಚಯ
Published On - 11:55 am, Tue, 9 November 21