ಕಾಂಗ್ರೆಸ್ ಚಲೋಗೆ ಬಿಜೆಪಿ ಭಾರೀ ಕೌಂಟರ್: 26ರಂದು ಜಾಗೃತಿ ಸಮಾವೇಶಕ್ಕೆ ಬಿಜೆಪಿ ಘಟಕ ಕರೆ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು.

ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿದೆ. ಸದ್ಯ ಕಾಂಗ್ರೆಸ್ ಚಲೋಗೆ ಬಿಜೆಪಿ ಭಾರೀ ಕೌಂಟರ್ ನೀಡಿದ್ದು, 26ರಂದೇ ಜಾಗೃತಿ ಸಮಾವೇಶಕ್ಕೆ ಮಡಿಕೇರಿ ಜಿಲ್ಲಾ ಬಿಜೆಪಿ ಘಟಕ ಕರೆ ನೀಡಿದೆ. ಹಾಗಾಗಿ ಮಡಿಕೇರಿ ರಣರಂಗವಾಗತ್ತಾ ಎನ್ನುವ ಪ್ರಶ್ನೆಗಳು ಉಂಟಾಗಿವೆ. ಜನಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ದದ ಹಲವು ಅಂಶಗಳ ಪ್ರಸ್ತಾಪ ಮಾಡಲಾಗಿದೆ. ಸಿದ್ದರಾಮಯ್ಯ ಗೋಮಾಂಸ ಭಕ್ಷಣೆ ಹೇಳಿಕೆ ವಿರುದ್ದವೂ ಜನ ಜಾಗೃತಿ ಮಾಡಲು ಬಿಜೆಪಿ ಕರೆ ನೀಡಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಆರೋಪಿ ಮಡಿಕೇರಿ ಸಂಪತ್ ಬಿಜೆಪಿ ಕಾರ್ಯಕರ್ತನಂತೆ -ಕೊಡಗು ಕಾಂಗ್ರೆಸ್ ಫೋಟೋ ಬಿಡುಗಡೆ ರಾಜಕೀಕರಣ ಮಾಡುವುದು ಆಯಾ ಪಕ್ಷಕ್ಕೆ ಬಿಟ್ಟಿದ್ದು: ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು. ಒಂದು ಘಟನೆ ಎಷ್ಟರ ಮಟ್ಟಿಗೆ ತೆಗೆದುಕೊಂಡು ಹೋಗಬೇಕು. ಇದು ಆಯಾ ರಾಜಕೀಯ ಪಕ್ಷಕ್ಕೆ ಬಿಟ್ಟಿದ್ದು. ಕರ್ನಾಟಕದಲ್ಲಿ ಮೊದಲು ಶಾಂತಿ ಮುಖ್ಯ. ಸಾವರ್ಕರ್ ಬಗ್ಗೆ ಇಂದಿರಾ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟಿಪ್ಪು-ಸಾವರ್ಕರ್ ಕುರಿತು ಪರ ವಿರೋಧ ವಿಚಾರಗಳಿವೆ. ಅಲ್ಲದೇ ವೈಚಾರಿಕ ಭಿನ್ನಾಭಿಪ್ರಾಯಗಳು ಕೂಡ ಇವೆ. ಅದನ್ನು ರಾಜಕೀಕರಣ ಮಾಡುವುದು ಆಯಾ ಪಕ್ಷಕ್ಕೆ ಬಿಟ್ಟಿದ್ದು ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.
ಮಹದಾಯಿ ಯೋಜನೆ ಪ್ರಗತಿಯಲ್ಲಿದೆ
ಮಹದಾಯಿ ಯೋಜನೆ ನನೆಗುದಿಗೆ ಬಿದ್ದಿಲ್ಲ, ಪ್ರಗತಿಯಲ್ಲಿದೆ. ಈ ಸಂಬಂಧ ಅರಣ್ಯ ಇಲಾಖೆಗೆ ಅನುಮತಿ ಕೋರಲಾಗಿದೆ. ಇದು ಅಂತಿಮ ಘಟ್ಟದಲ್ಲಿದೆ. ಕೇಂದ್ರ ಜಲ ಆಯೋಗದಿಂದ ಫೈನಲ್ ಕ್ಲಿಯರೆನ್ಸ್ ಬರಬೇಕಿದೆ. ಈ ಎರಡೂ ಬಂದ ಕೂಡಲೇ ಯೋಜನೆ ಕಾಮಗಾರಿ ಆರಂಭವಾಗಲಿದೆ. ಹಾವೇರಿಯಲ್ಲಿ ವಕೀಲರ ಸಂಘದ ಕಟ್ಟಡ ಉದ್ಘಾಟನೆ ಆಮಂತ್ರಣ ಪತ್ರಿಕೆಯಲ್ಲಿ ನೆಹರು ಓಲೇಕಾರ ಕೈಬಿಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಶಾಸಕ ನೆಹರು ಓಲೇಕಾರ ಅವರನ್ನ ಕಡೆಗಣಿಸಿಲ್ಲ. ಹೈಕೋರ್ಟ್ ಪ್ರೋಟೋಕಾಲ್ ಪ್ರಕಾರ ಅದು ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




