AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು: ವಿವಾದಾತ್ಮಕ ಹೇಳಿಕೆ ನೀಡಿದ ಬಿ.ಕೆ. ಹರಿಪ್ರಸಾದ್

RSS ಮತ್ತು ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು ಎಂದು ಕಾಂಗ್ರೆಸ್​​ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ಕರೆ ನೀಡಿರೋದು ವಿವಾದಕ್ಕೆ ಕಾರಣವಾಗಿದೆ. ಇದೇ ವೇಳೆ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧವೂ ಏಕವಚನದಲ್ಲಿಯೇ ಅವರು ವಾಗ್ದಾಳಿ ನಡೆಸಿದ್ದಾರೆ. ಮತ್ತೊಂದೆಡೆ ಹರಿಪ್ರಸಾದ್ ನೀಡಿರುವ ಈ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ತಿರುಗೇಟು ನೀಡಿದ್ದಾರೆ.

RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು: ವಿವಾದಾತ್ಮಕ ಹೇಳಿಕೆ ನೀಡಿದ ಬಿ.ಕೆ. ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್ Image Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on:Sep 28, 2026 | 2:13 PM

Share

ಬೆಂಗಳೂರು, ಸೆಪ್ಟೆಂಬರ್​​ 28: ಬಿಜೆಪಿ ಮತ್ತು ಆರ್​​ಎಸ್​​ಎಸ್​​ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೆಪಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ನೀಡಿರುವ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ. RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿರೋದು ಭಾರಿ ಚರ್ಚೆಗೆ ಗ್ರಾಸವಾಗಿದೆ. ವಂದೇ ಮಾತರಂ ನಮ್ಮ ಪಕ್ಷದವರು ಚೆನ್ನಾಗಿ ಹಾಡುತ್ತಾರೆ. ವಂದೇ ಮಾತರಂ ಏನಿದ್ರು ನಮ್ಮದು ಎಂದಿರುವ ಅವರು, ನೀವು ಖಾಕಿ ಚಡ್ಡಿ, ದೊಣ್ಣೆ ಹಿಡಿದು ಸಂಜೆ ಹೋಗಿ ಎಂದು ವ್ಯಂಗ್ಯವಾಡಿದ್ದಾರೆ.

ಸಿಇಸಿ ಜ್ಞಾನೇಶ್​ ಕುಮಾರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ

ಸಿಇಸಿ ಜ್ಞಾನೇಶ್​ ಕುಮಾರ್​ ಒಬ್ಬ ಅಜ್ಞಾನಿ. ಜ್ಞಾನೇಶ್ ಕುಮಾರ್ ಹೋಗುವ ತನಕ ಹೋರಾಟ ಮಾಡಿ. ಅವನ ಬಗ್ಗೆ ನಿರ್ಲಕ್ಷ್ಯವಹಿಸಿದ್ರೆ, ಅರ್ಹ ಮತದಾರನ್ನು ಕೈಬಿಡ್ತಾನೆ. ಅವನಂತಹ ನೀಚ ಈ ದೇಶದಲ್ಲಿ ಬೇರೆ ಯಾರೂ ಸಹ ಇಲ್ಲ. ಸಂವಿಧಾನ ದುರುಪಯೋಗ ಮಾಡಿಕೊಂಡ ನೀಚ ಅವನು. ನೀವೆಲ್ಲ ಮತದಾರರ ಪಟ್ಟಿಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹೇಳುವ ಮೂಲಕ ಜ್ಞಾನೇಶ್ ವಿರುದ್ಧ ಬಿ.ಕೆ.ಹರಿಪ್ರಸಾದ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಗಣೇಶೋತ್ಸವದ ವೇಳೆ ಅವಾಚ್ಯ ಪದ ಬಳಕೆ ಆರೋಪ: ಶಾಸಕ ಮುನಿರತ್ನ ಮನೆ ಬಳಿ ಹೈಡ್ರಾಮಾ

ಹರಿಪ್ರಸಾದ್​​ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

RSS, ಬಿಜೆಪಿಗರನ್ನು ಬೆಂಗಳೂರಿನಿಂದ ಓಡಿಸಬೇಕೆಂಬ ಬಿ.ಕೆ.ಹರಿಪ್ರಸಾದ್​ ಹೇಳಿಕೆಗೆ ಪರಿಷತ್​​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಯಾರನ್ನೂ ಬೆಂಗಳೂರು ಬಿಟ್ಟು ಓಡಿಸಲು ಸಾಧ್ಯವಿಲ್ಲ. ಬಿ.ಕೆ.ಹರಿಪ್ರಸಾದ್ ತಲ್ವಾರ್​ ಹಿಡಿದು ಓಡಾಡುವ ಕಾಲ ಇತ್ತು. RSSನದು ಗಣವೇಶ ಅಷ್ಟೇ, ಲಾಠಿಯಿಂದ ಯಾರನ್ನೂ ತಳಿಸಿಲ್ಲ. ಕರ್ನಾಟಕದಲ್ಲಿ RSS ವಿರುದ್ಧ ಯಾವುದೇ ಕೇಸ್ ಇಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರೇ ಸದನದಲ್ಲಿ ಅದನ್ನು ಸ್ಪಷ್ಟಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್​ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ವಂದೇಮಾತರಂನ ಬಹುಕಾಲದಿಂದ ಸದನದಲ್ಲಿ ಪೂರ್ಣ ಹಾಡ್ತಿದ್ರು. ಅದನ್ನ ನಿಲ್ಲಿಸಿ ಕಾಂಗ್ರೆಸ್ ಬಂಡತನ ಪ್ರದರ್ಶನ ಮಾಡಿದೆ. ಹರಿಪ್ರಸಾದ್​ರದ್ದು ಹೊಡಿಬಡಿ ಸಂಸ್ಕೃತಿ, ಒಳ್ಳೇದು ನಿರೀಕ್ಷಿಸಲು ಆಗಲ್ಲ ಎಂದು ತಿವಿದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:03 pm, Mon, 28 September 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ