AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​​ಎಸ್ ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು

ಬೆಂಗಳೂರಿನಲ್ಲಿ ನಡೆದ ಅಖಂಡ ಭಾರತ ಸಂಕಲ್ಪ ದಿನದಲ್ಲಿ, ಬಿ.ಎಲ್. ಸಂತೋಷ್ ಅವರು ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀಕ್ಷ್ಣ ತಿರುಗೇಟು ನೀಡಿದರು. ಆರ್‌ಎಸ್‌ಎಸ್ ಎಂದಿಗೂ ನೋಂದಣಿಯಾಗಿಲ್ಲ, ಸಮಾಜ ರಕ್ಷಣೆಯೇ ಅದರ ಧ್ಯೇಯ ಎಂದರು. ದೇಶದ ಇತಿಹಾಸದಲ್ಲಿ ಆರ್‌ಎಸ್‌ಎಸ್ ಕೊಡುಗೆ ಮತ್ತು ಹಿಂದೂಗಳ ಬಲಿದಾನವನ್ನು ಒತ್ತಿಹೇಳಿದ ಸಂತೋಷ್, ಸಂಘವನ್ನು ನೋಂದಣಿಯ ಶರತ್ತುಗಳಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಆರ್​ಎಸ್​​ಎಸ್ ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು
ಬಿ.ಎಲ್. ಸಂತೋಷ್, ಪ್ರಿಯಾಂಕ್ ಖರ್ಗೆ
ಅಕ್ಷಯ್​ ಪಲ್ಲಮಜಲು​​
|

Updated on:Aug 15, 2026 | 6:44 AM

Share

ಬೆಂಗಳೂರು ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ, ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀವ್ರ ತಿರುಗೇಟು ನೀಡಿದ್ದಾರೆ. ನಡುವೆ ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ದೇಶದ ಇತಿಹಾಸ ಹಾಗೂ ಆರ್‌ಎಸ್‌ಎಸ್ ಕೊಡುಗೆಗಳ ಕುರಿತು ಪ್ರಸ್ತಾಪಿಸಿದರು.

“ಆರ್‌ಎಸ್‌ಎಸ್ ರಿಜಿಸ್ಟ್ರೇಷನ್ (ನೋಂದಣಿ) ಆಗಿರಲಿಲ್ಲ, ಮುಂದೆಯೂ ಆಗಲ್ಲ. ಪ್ರಿಯಾಂಕ್ ಖರ್ಗೆ ಅವರೇ, ಪ್ರತಿಯೊಂದಕ್ಕೂ ನೋಂದಣಿಯೇ ಮಾನದಂಡವಲ್ಲ. ನಿಮ್ಮ ಕುಟುಂಬ ಕಲ್ಬುರ್ಗಿಗೆ ಓಡಿ ಬಂದಾಗ, ರಜಾಕಾರರ ವಿರುದ್ಧ ನಿಂತಿದ್ದು ಇದೇ ಆರ್‌ಎಸ್‌ಎಸ್‌ನ ಹುಡುಗರು” ಎಂದು ತಿರುಗೇಟು ನೀಡಿದರು.

“ನಮಗೆ ಉಪ್ಪು ತಯಾರಿಕೆ ಮತ್ತು ಚರಕದಿಂದ ಮಾತ್ರವೇ ಸ್ವಾತಂತ್ರ್ಯ ಬಂತು ಎಂದು ತಪ್ಪಾಗಿ ಹೇಳಿಕೊಡಲಾಗಿದೆ. ಆದರೆ 35 ಲಕ್ಷಕ್ಕೂ ಹೆಚ್ಚು ಹಿಂದೂಗಳ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. 1200 ವರ್ಷಗಳ ಕಾಲ ಖಿಲ್ಜಿ, ಕುಶಾನರು, ಅರಬರು, ಯುರೋಪಿಯನ್ನರು ಹಾಗೂ ಬ್ರಿಟಿಷರ ನಿರಂತರ ದಾಳಿಯನ್ನು ಎದುರಿಸಿ ಸಮಾಜವನ್ನು ರಕ್ಷಿಸಲಾಗಿದೆ” ಎಂದರು.ಸಂಘವು ಸಮಾಜದ ರಕ್ಷಣೆ ಮತ್ತು ಸೇವೆಗೆ ಬದ್ಧವಾಗಿದ್ದು, ಅದನ್ನು ನೋಂದಣಿಯ ಶರತ್ತುಗಳಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗಾಂಧಿ ಸರ್​​ನೇಮ್ ಹೆಸರಿಟ್ಟುಕೊಂಡು ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ತಜ್ಞ ಹಾಗೂ ಪ್ಯಾರಿಸ್ ಬ್ರಿಕ್ಸ್ ಅಂತರಾಷ್ಟ್ರೀಯ ಉಪಾಧ್ಯಕ್ಷ ಡಾ. ಕೆ.ಜೆ. ಪುರುಷೋತ್ತಮ್ ವಹಿಸಿದ್ದರು. ಕಿಡ್ನಿ ಫೌಂಡೇಶನ್ ಆಸ್ಪತ್ರೆಯ ನಿರ್ದೇಶಕರಾದ ಡಾ. ಹೆಚ್.ಕೆ. ನಾಗರಾಜ್, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ನಾಯಕರಾದ ಜಯನಗರ ರಾಮಮೂರ್ತಿ, ಚಿ.ನಾ.ರಾಮು ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 am, Sat, 15 August 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ