BMRCL: ಬೆಂಗಳೂರು ಮೆಟ್ರೋ ರೈಲಿನಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ

ಇದಕ್ಕಾಗಿ ರೈಲಿನ ಕೊನೆಯ ಬೋಗಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

BMRCL: ಬೆಂಗಳೂರು ಮೆಟ್ರೋ ರೈಲಿನಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ
ಬೆಂಗಳೂರು ಮೆಟ್ರೋ ರೈಲು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 07, 2022 | 6:50 PM

ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ ನೀಡಲು ಬೆಂಗಳೂರು ಮೆಟ್ರೋ ರೈಲು ನಿಗಮ (Bangalore Metro Rail Corporation Limited – BMRCL) ಅವಕಾಶ ನೀಡಿದೆ. ಆದರೆ ಎಲ್ಲ ಬಗೆಯ ಸೈಕಲ್​ಗಳನ್ನು ರೈಲಿನಲ್ಲಿ ಸಾಗಿಸಲು ಸಮ್ಮತಿಸಿಲ್ಲ. ಕೇವಲ ಮಡಚಬಹುದಾದ ಸೈಕಲ್​ಗಳನ್ನು ಮಾತ್ರ ಕೊಂಡೊಯ್ಯಬಹುದಾಗಿದೆ. ಇದಕ್ಕಾಗಿ ರೈಲಿನ ಕೊನೆಯ ಬೋಗಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಗರಿಷ್ಠ 15 ಕೆಜಿ ತೂಕ ಇರುವ ಸೈಕಲ್​ಗಳನ್ನು ರೈಲುಗಳಲ್ಲಿ ಸಾಗಿಸಬಹುದಾಗಿದೆ. ರೈಲಿನಲ್ಲಿ ಸಾಗಿಸಲು ತರುವ ಸೈಕಲ್​ಗಳನ್ನು ಪ್ರವೇಶ ದ್ವಾರದಲ್ಲಿಯೇ ಸಿಬ್ಬಂದಿ ಪರಿಶೀಲಿಸುತ್ತಾರೆ. ಇಂಥ ಸೈಕಲ್​ಗಳಿಂದ ರೈಲಿಗೆ ಹಾನಿಯಾಗುವುದಿಲ್ಲ, ಅವು ಸರಿಯಾಗಿ ಪ್ಯಾಕ್ ಆಗಿದೆ ಎಂದು ಮನವರಿಕೆಯಾದ ನಂತರ ಸೈಕಲ್ ಕೊಂಡೊಯ್ಯಲು ಅವಕಾಶ ನೀಡಲಾಗುತ್ತದೆ. ಸೈಕಲ್‌ ಸಾಗಣೆಗೆ ಹೆಚ್ಚುವರಿ ಶುಲ್ಕ ತೆರಬೇಕಿಲ್ಲ. ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಆದರೆ ಇತರ ಪ್ರಯಾಣಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ಮಾಡಲಾಗಿದೆ.

BMRCL-Metro-Pressnotes

ಬೆಂಗಳೂರು ಮೆಟ್ರೋ ನಿಗಮವು ಸೈಕಲ್ ಸಾಗಣೆಗೆ ಅವಕಾಶ ನೀಡಿದೆ.

ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾದ ನಂತರ ಸೈಕಲ್ ಬಳಕೆಗೆ ಹೆಚ್ಚು ನೀಡಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಮನೆಗಳಿಂದ ಮೆಟ್ರೋ ನಿಲ್ದಾಣಗಳವರೆಗೆ ಸೈಕಲ್​ಗಳಲ್ಲಿ ಬರುವ ಜನರು ತಮ್ಮ ಸೈಕಲ್​ಗಳನ್ನು ಮೆಟ್ರೋದಲ್ಲಿ ಕೊಂಡೊಯ್ಯಲು ಅವಕಾಶ ಇರಬೇಕು. ಹೀಗಿದ್ದಾಗ ಅವರು ಮೆಟ್ರೋ ನಿಲ್ದಾಣಗಳಿಂದ ಇಳಿದ ನಂತರ ಕಚೇರಿಗಳಿಗೆ ತೆರಳಲು ಅನುಕೂಲವಾಗುತ್ತದೆ. ಶಾಲೆಗಳಿಗೆ ಹೋಗುವ ಮಕ್ಕಳಿಗೂ ಇದರಿಂದ ಅನುಕೂಲವಾಗುತ್ತದೆ ಎಂದು ಸಾಕಷ್ಟು ಜನರು ಒತ್ತಾಯಿಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 7 June 22

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ