ಬೆಂಗಳೂರು, ಜುಲೈ 11: ವಿಮಾನ ನಿಲ್ದಾಣ (Airport), ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಫ್ಲೈಓವರ್ (Hebbal Flyover) ಬೆಂಗಳೂರು-ಬಳ್ಳಾರಿ (Bengaluru-Ballari Road) ರಸ್ತೆಯಲ್ಲಿ ಬಿಡಿಎ (BDA) ಮತ್ತು ಬಿಎಂಆರ್‌ಸಿಎಲ್ (BMRCL) ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ನಿಧಾನಗತಿಯಲ್ಲಿರುತ್ತದೆ. ಹೀಗಾಗಿ ಸೂಚಿಸಿರುವ ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿದಿನ 2.5 ಲಕ್ಷಕ್ಕೂ ಅಧಿಕ ವಾಹನಗಳು ಸಂಚರಿಸುವುದರಿಂದ ಹಾಗೂ ಹೆಬ್ಬಾಳ ಥೈಓವರ್ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರದಿಂದ ಸಂಚಾರ ದಟ್ಟಣೆಯುಂಟಾಗುತ್ತದೆ. ಸಂಚಾರ ದಟ್ಟಣೆಯನ್ನು ನಿವಾರಿಸಲು ವಿವಿಧ ಪೌರ ಸಂಸ್ಥೆಗಳಿಂದ ಕಾಮಗಾರಿಗಳನ್ನು ಕೈಗೊಂಡಿವೆ.
ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ಪೊಲೀಸ್
ಬಿಡಿಎ ವತಿಯಿಂದ ಪ್ರೈಓವರ್ ಅಗಲೀಕರಣ ಹಾಗೂ ಬಿಎಂಆರ್‌ಸಿಎಲ್ ನಿಂದ ಮೆಟ್ರೋ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪೀಕ್ ಅವರ್ಸ್ನಲ್ಲಿ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದರಿಂದಾಗಿ ಏರ್‌ಪೋರ್ಟ್‌ಗೆ ಚಲಿಸುವ ವಾಹನಗಳು ನಿಗದಿತ ವೇಳೆಗೆ ಏರ್‌ಪೋರ್ಟ್ ತಲುಪಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿಗಧಿತ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಪ್ರಯಾಣ ಪ್ರಾರಂಭಿಸುವುದು.
“Traffic advisory”/”ಸಂಚಾರ ಸಲಹೆ” pic.twitter.com/m7N7UlxuX6
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) July 10, 2024
ಕೆ.ಆರ್ ಪುರಂ-ಏರ್‌ಪೋರ್ಟ್ ಕಡೆಗೆ ತೆರಳಲು ಬಳಸಬೇಕಾದ ಮಾರ್ಗಗಳು:
ಕೆ.ಆರ್ ಪುರಂ- ಬೆಂಗಳೂರು ಕಡೆಗೆ ಬರುವ ವಾಹನಗಳು ಬಳಸಬೇಕಾದ ಮಾರ್ಗಗಳು:
ಬೆಂಗಳೂರು-ಬಳ್ಳಾರಿ ರಸ್ತೆಯಿಂದ ನಗರದ ಕಡೆಗೆ ಬರುವ ಭಾರಿ ಮತ್ತು ಮಧ್ಯಮ ಗಾತ್ರದ ಸರಕು ಸಾಗಾಣಿಕ ವಾಹನಗಳು ಬಳಸಬೇಕಾದ ಮಾರ್ಗಗಳು:
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ