ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ.
ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚಿಗಷ್ಟೇ ಅಂಜುಂ ಪರ್ವೇಜ್ ನೇಮಕವಾಗಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ಬೆಂಗಳೂರು ಮೆಟ್ರೋ ಎಂಡಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಪರ್ವೇಜ್, ಕರ್ನಾಟಕ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರದಿಂದ ಬಿಎಮ್ಆರ್ಸಿಎಲ್ ಎಂಡಿ ಆಗಿ ನೇಮಕಾತಿ ಹೊಂದಿದ್ದಾರೆ.
ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್
ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.
ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.
ಇದನ್ನೂ ಓದಿ:
Karnataka Weather Update: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
Namma Metro: ಬೆಂಗಳೂರು ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬವಾಗುತ್ತಿರುವುದೇಕೆ?; 10 ಕಾರಣಗಳು ಇಲ್ಲಿವೆ
(BMRCL announced extension of Bengaluru Namma metro traffic period till 9 pm)