ಪ್ರಯಾಣಿಕರ ಗಮನಕ್ಕೆ: ಅ.3ರಂದು ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

|

Updated on: Oct 01, 2024 | 7:53 PM

ಸುರಕ್ಷತಾ ತಪಾಸಣೆ ನಡೆಸುತ್ತರುವುದರಿಂದ ಅಕ್ಟೋಬರ್ 03ರಂದು ಬೆಂಗಳೂರು ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪ್ರಕಟಣೆಯಲ್ಲಿ ತಿಳಿಸಿದೆ. ಯಾವ ಸಮಯದಲ್ಲಿ? ಎಲ್ಲಿಂದ ಎಲ್ಲಿಯವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯವಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಪ್ರಯಾಣಿಕರ ಗಮನಕ್ಕೆ: ಅ.3ರಂದು ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ  ಸೇವೆಯಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
Follow us on

ಬೆಂಗಳೂರು, (ಅಕ್ಟೋಬರ್ 01): ಸುರಕ್ಷತಾ ತಪಾಸಣೆ ನಡೆಸುತ್ತರುವುದರಿಂದ ಅಕ್ಟೋಬರ್ 3ರಂದು ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಸುರಕ್ಷತಾ ತಪಾಸಣೆಯಿಂದಾಗಿ ಅ. 3ರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ನಾಗಸಂದ್ರ ಮತ್ತು ಮಾದವಾ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈ ಅವಧಿಯಲ್ಲಿ ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರ ಮತ್ತು ಮಾದವಾರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ, ದಿನಾಂಕ 3ನೇ ಅಕ್ಟೋಬರ್ 2024 ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬದಲಾವಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ ಎಂದು ಬಿಎಂಆರ್​ಸಿಎಲ್​ ಮಾಹಿತಿ ನೀಡಿದೆ.

ಇದನ್ನೂ ಓದಿ: ಅ. 3ರಂದು PSI ಪರೀಕ್ಷೆ: ಅಕ್ರಮ ತಡೆಯಲು ಕಠಿಣ ರೂಲ್ಸ್

ಈ ಅವಧಿಯಲ್ಲಿ, ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಬೆಳಿಗ್ಗೆ 9.00 ಗಂಟೆಗೆ ರೇಷ್ಮೆ ಸಂಸ್ಥೆಯಿಂದ ಹೊರಡುವ ಕೊನೆಯ ರೈಲು ನಾಗಸಂದ್ರ ನಿಲ್ದಾಣಕ್ಕೆ ತಲುಪಲಿದೆ. ನೇರಳೆ ಮಾರ್ಗದ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಲು ಮತ್ತು ಸಹಕರಿಸಲು ಕೋರಿದೆ. ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ ಎಂದು ಬಿಎಂಆರ್​ಸಿಎಲ್​ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ