
ಬೆಂಗಳೂರು, ಮೇ 15: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Purple Line) ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ.
ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 07 ಗಂಟೆಯಿಂದ 09 ಗಂಟೆ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.
ಇದನ್ನೂ ಓದಿ: ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ
ಭಾನುವಾರ ಬೆಳಗ್ಗೆ 09 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:00 pm, Fri, 15 May 26