India-Pakistan Tension: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ನಿರ್ಮಾಣವಾದ ನಂತರ ದೇಶದ ಎಲ್ಲ ನಗರಗಳಿಗೂ ಕೇಂದ್ರ ಸರ್ಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಫುಲ್ ಅಲರ್ಟ್ ಆಗಿದ್ದು, ಇದೆ ಮೊದಲ ಬಾರಿಗೆ ಎಐ ಕ್ಯಾಮರಗಳ ಮೊರೆ ಹೋಗಿದೆ. ಹೌದು, ಬಿಎಂಆರ್​ಸಿಎಲ್​ ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಎಐ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ. ಮೊದಲ ಹಂತದಲ್ಲಿ ಯಾವ್ಯಾವ ನಿಲ್ದಾಣಗಳಲ್ಲಿ ಅಳವಡಿಕೆ? ಇಲ್ಲಿದೆ ವಿವರ

India-Pakistan Tension: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ
Updated By: ವಿವೇಕ ಬಿರಾದಾರ

Updated on: May 11, 2025 | 8:08 PM

ಬೆಂಗಳೂರು, ಮೇ 11: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ (Bengaluru) ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆ ನೀಡಿದೆ. ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಪ್ರತಿನಿತ್ಯ ಎಂಟು ಲಕ್ಷಕ್ಕೂ ಹೆಚ್ಚಿನ ಪ್ರಯಾಣಿಕರು ಪ್ರಯಾಣ ಮಾಡುತ್ತಾರೆ. ಹೀಗಾಗಿ ಮೆಟ್ರೋದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವಿನ ಆರು ಮೆಟ್ರೊ ನಿಲ್ದಾಣಗಳಲ್ಲಿ 600 ಸುಧಾರಿತ ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಜೊತೆಗೆ ಎಐ ತಂತ್ರಜ್ಞಾನವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಅಳವಡಿಸಲು ಮುಂದಾಗಿದೆ.

ಈ ಕ್ಯಾಮರಾಗಳು ನಿಲ್ದಾಣದ ಒಳಗೆ ಮತ್ತು ಸುತ್ತಲಿನ ಪ್ರದೇಶಗಳನ್ನೂ ಗಮನಿಸಲಿವೆ. ಜೊತೆಗೆ ಎಐ ತಂತ್ರಜ್ಞಾನದಿಂದ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲಿದೆ. ಈ ನಿಗಾ ವ್ಯವಸ್ಥೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇನ್ನು ನಿಲ್ದಾಣಗಳ ಬಳಿಯಿರುವ ವಾಹನಗಳ ನಂಬರ್ ಪ್ಲೇಟ್ ಗುರುತಿಸಲು ಆಟೋಮಾಟಿಕ್ ನಂಬರ್ ಪ್ರೇಟ್ ರೆಕಗ್ನಿಷನ್ (ANPR) ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ. ಎಐ ಆಧಾರಿತ ಕ್ಯಾಮೆರಾ ಸಹಾಯದಿಂದ ಅನುಮಾನಸ್ಪದ ಘಟನೆಗಳನ್ನು ತಕ್ಷಣ ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಇದನ್ನೂ ಓದಿ
ಟೆಲಿಗ್ರಾಮ್ ಆ್ಯಪ್​ನಲ್ಲಿ ಕೆಲಸ ಹುಡುಕುವವರು ಎಚ್ಚರ! 3.5 ಲಕ್ಷ ರೂ ವಂಚನೆ
ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ ಸಮೀಕ್ಷೆ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆ
ಗಡಿಯಲ್ಲಿ ಉದ್ವಿಗ್ನ: ಕರ್ನಾಟಕದಾದ್ಯಂತ ಕಟ್ಟೆಚ್ಚರ ವಹಿಸಲು ಗುಪ್ತಚರ ಇಲಾಖೆ 

ಇದನ್ನೂ ಓದಿ: ನಡು ರೋಡಲ್ಲಿ ಕೈ ಕೊಡುತ್ತಿರುವ ಬಿಎಂಟಿಸಿ ಟಿಕೆಟ್ ಮಷಿನ್​​ಗಳು: ಕಂಡಕ್ಟರ್ ಮತ್ತು ಪ್ರಯಾಣಿಕರ ಮಧ್ಯೆ ಕಿರಿಕ್

ಒಟ್ಟಿನಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಮ್ಮ ಮೆಟ್ರೋ ಸ್ಟೇಷನ್​ಗಳಲ್ಲಿ ಎಐ ಕ್ಯಾಮೆರಾಗಳನ್ನು ಅಳವಡಿಸಲು ಮುಂದಾಗಿದ್ದು ಇದು ಎಷ್ಟರಮಟ್ಟಿಗೆ ಕೆಲಸ ಮಾಡುತ್ತದೆ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ