ಬೆಂಗಳೂರು, ಜ.10: ಭದ್ರತಾ ವಿಭಾಗದ ಅಧಿಕಾರಿಗಳು ನಮ್ಮ ಮೆಟ್ರೋದಲ್ಲಿ (Namma Metro) ರೀಲ್ಸ್ ಮಾಡಿ ಹುಚ್ಚಾಟ ನಡೆಸಿದ್ದವನನ್ನ ಪತ್ತೆ ಹಚ್ಚಿ ದಂಡ (Fine) ವಸೂಲಿ ಮಾಡಿದ್ದಾರೆ. ನಮ್ಮ ಮೆಟ್ರೋದಲ್ಲಿ ನ್ಯೂಸ್ಸೆನ್ಸ್ (59) 1 ಉಂಟುಮಾಡಿದ ಆರೋಪದಡಿ ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 500 ರೂ. ದಂಡವಿಧಿಸಿ ಎಚ್ಚರಿಕೆ ನೀಡಲಾಗಿದೆ.
ಬಂಡೆಪಾಳ್ಯದ ಗೆದ್ದನಹಳ್ಳಿಯ ನಿವಾಸಿಯಾಗಿರುವ ಯೂಟ್ಯೂಬರ್ ಸಂತೋಷ್ ಕುಮಾರ್ ಡಿಸೆಂಬರ್ 24 ರಂದು ಮೆಟ್ರೋ ಚಲಿಸುತ್ತಿದ್ದಾಗ ರೀಲ್ಸ್ ಮಾಡ್ತಾ ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟಿದ್ದರು. ಮೆಟ್ರೋ ರೈಲಿನಲ್ಲಿ ಹುಚ್ಚಾಟ ಮೆರೆದಿದ್ದರು. ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ನಲ್ಲಿ ಯಶ್ ಗೌಡ ಎಂಬ ಅಕೌಂಟ್ ಮೂಲಕ ರೀಲ್ಸ್ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋವನ್ನ ಆಧರಿಸಿ ಸಂತೋಷ್ ಕುಮಾರ್ ಗೆ ದಂಡ ವಿಧಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆಸಿ, ವಿಚಾರಣೆ ನಡೆಸಿ ನಮ್ಮ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಇದನ್ನೂ ಓದಿ: Namma Metro: ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ
ನಮ್ಮ ಮೆಟ್ರೋ (Namma Metro) ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಡಿಸೆಂಬರ್ನಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ ಹರಿದುಬಂದಿದೆ. ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದು ₹55 ಕೋಟಿ ಆದಾಯ ಸಂಗ್ರಹವಾಗಿದೆ.
ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ನಮ್ಮ ಮೆಟ್ರೋ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಅತ್ಯಧಿಕ ಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ದಾಖಲೆ ಬರೆದಿದೆ. ಡಿಸೆಂಬರ್ ಒಂದೇ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದಾರೆ. ದಿನಕ್ಕೆ ಸರಾಸರಿ 6.88 ಲಕ್ಷ ಜನರು ಸಂಚಾರ ಮಾಡಿದ್ದಾರೆ. ವರ್ಷದ ಕೊನೆ ತಿಂಗಳಾದ ಡಿಸೆಂಬರ್ನಲ್ಲಿ ಬರೋಬ್ಬರಿ ₹55 ಕೋಟಿ ಆದಾಯ ಹರಿದು ಬಂದಿದೆ. ಡಿಸೆಂಬರ್ ನ ಒಟ್ಟು ಪ್ರಯಾಣಿಕರ ಸಂಖ್ಯೆ 2,13,34,076. ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 6,88,196 . ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗ್ತಿದೆ ಎಂದು ಟಿವಿ9ಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ