AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್

ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲ ಪ್ರಯಾಣಿಕರು ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಈ ಹಿನ್ನೆಲೆ ಪ್ರಯಾಣಿಕರು ನಮ್ಮ ಮೆಟ್ರೋ ಸ್ಟೇಷನ್​ಗಳಲ್ಲಿ ಪಿಎಸ್​​ಡಿ ಡೋರ್ ಅಳವಡಿಸುವಂತೆ ಆಗ್ರಹಿಸಿದ್ದರು. ಸದ್ಯ ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್ ಪಿಎಸ್​​ಡಿ ಬದಲಿಗೆ ಸ್ಟೀಲ್ ಬ್ಯಾರಿಕೇಡ್, ಗೇಟ್​ಗಳನ್ನು ಅಳವಡಿಸಲು ಮುಂದಾಗಿದೆ.

ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್
ಸಾಂದರ್ಭಿಕ ಚಿತ್ರImage Credit source: TV9 Network
ಕಿರಣ್​ ಸೂರ್ಯ
| Edited By: |

Updated on: Feb 23, 2026 | 7:13 AM

Share

ಬೆಂಗಳೂರು, ಫೆಬ್ರವರಿ 23: ಬೆಂಗಳೂರು (Bangalore) ನಗರದಲ್ಲಿ ಇತ್ತೀಚೆಗೆ ನಮ್ಮ ಮೆಟ್ರೋ ಸ್ಟೇಷನ್​ಗಳಲ್ಲಿ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 2 ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೆಟ್ರೋ ಸ್ಟೇಷನ್​ಗಳಿಗೆ ಪಿಎಸ್​ಡಿ ಅಳವಡಿಸುವಂತೆ ಪ್ರಯಾಣಿಕರಿಂದ ಒತ್ತಾಯ ಕೇಳಿಬಂದಿತ್ತು. ‘ಟಿವಿ9’ ಸಹ ಈ ಬಗ್ಗೆ ಸಾಕಷ್ಟು ಬಾರಿ ವರದಿ ಪ್ರಸಾರ ಮಾಡಿತ್ತು. ಇದೀಗ ಕೊನೆಗೂ ಎಚ್ಚೆತ್ತುಕೊಂಡಿರುವ ಬಿಎಂಆರ್​​ಸಿಎಲ್ (BMRCL), ಮೆಜಸ್ಟಿಕ್ ಮೆಟ್ರೋ ಸ್ಟೇಷನ್, ಆರ್.ವಿ ರೋಡ್, ಕೆ.ಆರ್.ಪುರ, ಇಂದಿರಾ ನಗರ, ಬೆನ್ನಿಗಾನಹಳ್ಳಿ ಮೆಟ್ರೋ ಸ್ಟೇಷನ್​ಗಳಲ್ಲಿ ಸ್ಟೀಲ್ ಬ್ಯಾರಿಕೇಡ್​ಗಳನ್ನು ಅಳವಡಿಸಲು ಮುಂದಾಗಿದೆ.

ಈ ಬಗ್ಗೆ ಮೆಟ್ರೋ ಪ್ರಯಾಣಿಕರು ಪ್ರತಿಕ್ರಿಯಿಸಿದ್ದು, ಪಿಎಸ್ಡಿ ಡೋರ್​ಗಳನ್ನು ಅಳವಡಿಸಿದರೆ ಮಾತ್ರ, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುವವರನ್ನು ತಡೆಗಟ್ಟಬಹುದು. ಸ್ಟೀಲ್ ಬ್ಯಾರಿಕೇಡ್​ಗಳಿಂದ ಹೆಚ್ಚಿನ ಪ್ರಯೋಜನವಾಗದು ಎಂದಿದ್ದಾರೆ.

ಒಟ್ಟು 83 ಮೆಟ್ರೋ ನಿಲ್ದಾಣಗಳ ಪೈಕಿ ಸದ್ಯ ನಾಲ್ಕರಲ್ಲಿ ಸ್ಟೀಲ್ ಗೇಟ್​​ಗಳನ್ನು ಅಳವಡಿಸಲಾಗಿದೆ. ಉಳಿದ ಮೆಟ್ರೋ ಸ್ಟೇಷನ್​ಗಳಲ್ಲೂ ಪಿಎಸ್ಡಿ ಡೋರ್ ಅಥವಾ ಸ್ಟೀಲ್ ಗೇಟ್​ಗಳನ್ನು ಅಳವಡಿಸಿ ಎಂದು ನಮ್ಮ ಮೆಟ್ರೋ ಪ್ರಯಾಣಿಕರು ಬಿಎಂಆರ್ಸಿಎಲ್​​ಗೆ ಒತ್ತಾಯಿಸುತ್ತಿದ್ದಾರೆ. ಆದರೆ ಬಿಎಂಆರ್ಸಿಎಲ್ ಮಾತ್ರ ಪಿಂಕ್ ಲೈನ್ ಕಾಳೇನ ಅಗ್ರಹಾರ – ನಾಗವಾರ ಮೆಟ್ರೋ ಮಾರ್ಗದ ಅಂಡರ್ ಗ್ರೌಂಡ್ ಮೆಟ್ರೋ ಮಾರ್ಗದಲ್ಲಿ ಪಿಎಸ್ಡಿ ಡೋರ್ ಅಳವಡಿಸಲು ಸಿದ್ದತೆ ಮಾಡಿಕೊಂಡಿದ್ದು, ಈಗಾಗಲೇ ಟೆಂಡರ್ ಕೂಡ ನೀಡಿದೆ.

ಇದನ್ನೂ ಓದಿ: ಕಿತ್ತಳೆ ಮಾರ್ಗಕ್ಕಾಗಿ ಸಾವಿರಾರು ಮರಗಳ ಮಾರಣಹೋಮಕ್ಕೆ ಮುಂದಾದ BMRCL: ಸಿಡಿದೆದ್ದ ಪರಿಸರ ಪ್ರೇಮಿಗಳು

ಒಟ್ಟಿನಲ್ಲಿ ಈಗಾಗಲೇ ಬೇರೆಬೇರೆ ರಾಜ್ಯದಲ್ಲಿರುವ ಮೆಟ್ರೋ ಸ್ಟೇಷನ್​ಗಳಲ್ಲಿ ಪಿಎಸ್ಡಿ ಅಳವಡಿಸಿದ್ದಾರೆ. ಆದರೆ ನಮ್ಮ ಮೆಟ್ರೋದಲ್ಲಿ ಇನ್ನೂ ಸ್ಟೀಲ್ ಗೇಟ್, ಬ್ಯಾರಿಕೇಡ್​ಗಳನ್ನು ಅಳವಡಿಸಲು ಮುಂದಾಗಿದ್ದಾರೆ. ಅದ್ಯಾವಾಗ ನಮ್ಮಲ್ಲೂ ಪಿಎಸ್ಡಿ ಅಳವಡಿಕೆ ಶುರುವಾಗುತ್ತದೆಯೋ ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ