AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ

ಜನಾಕ್ರೋಶಕ್ಕೆ ಮಣದಿರುವ ಬಿಎಂಆರ್‌ಸಿಎಲ್ ಕೊನೆಗೂ ನಮ್ಮ ಮೆಟ್ರೋ ಪ್ರಯಾಣ ದರ ಎಲ್ಲೆಲ್ಲಿ ದುಪ್ಪಟ್ಟು ಹೆಚ್ಚಾಗಿದೆಯೋ ಅಲ್ಲೆಲ್ಲ ತುಸು ಇಳಿಕೆ ಮಾಡಿದೆ. ದರ ಇಳಿಕೆ ಇಂದಿನಿಂದಲೇ ಜಾರಿಗೆ ಬಂದಿದೆ. ಶುಕ್ರವಾರ ಬೆಳಗ್ಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಯಾಣಿಕರು ಕೂಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆ ಆಯ್ತು ಎಂಬ ಮಾಹಿತಿ ಇಲ್ಲಿದೆ. ಆದಾಗ್ಯೂ, ಮೆಟ್ರೋದ ಅಧಿಕೃತ ದರಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ
ನಮ್ಮ ಮೆಟ್ರೋ
Ganapathi Sharma
|

Updated on:Feb 14, 2025 | 10:16 AM

Share

ಬೆಂಗಳೂರು, ಫೆಬ್ರವರಿ 14: ದರ ಏರಿಕೆಯಿಂದ ಆಕ್ರೋಶಗೊಂಡಿರುವ ಸಾರ್ವಜನಿಕರನ್ನು, ಪ್ರಯಾಣಿಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್, ಶೇ 90 ರಿಂದ 100 ರಷ್ಟು ದರ ಹೆಚ್ಚಳ ಮಾಡಿರುವ ನಿಲ್ದಾಣಗಳ ಮಧ್ಯೆ ದರ ತುಸು ಇಳಿಕೆ ಮಾಡಿದೆ. ಪರಿಷ್ಕೃತ ದರ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಿಎಂಆರ್​ಸಿಎಲ್ ಗುರುವಾರ ತಿಳಿಸಿತ್ತು. ಆದರೆ, ಈವರಗೆ ಪರಿಷ್ಕೃತ ದರ ಪಟ್ಟಿ ಮೆಟ್ರೋದ ಅಧಿಕೃತ ವೆಬ್​ಸೈಟ್​​ನಲ್ಲಾಗಲೀ ಎಕ್ಸ್ ತಾಣದಲ್ಲಾಗಲೀ ಪ್ರಕಟವಾಗಿಲ್ಲ. ಆದರೆ, ಪ್ರಯಾಣ ದರದಲ್ಲಿ ತುಸು ಇಳಿಕೆ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬಂದಿದೆ.

ಯಾವ ನಿಲ್ದಾಣದಿಂದ ಎಲ್ಲಿಗೆ ಎಷ್ಟು ದರ ಇಳಿಕೆ?

  • ಮೆಜೆಸ್ಟಿಕ್​​ನಿಂದ ವೈಟ್​ಫಿಲ್ಡ್​ಗೆ 90 ರೂ. ಇದ್ದ ದರ ಈಗ 80 ರೂ. ಆಗಿದೆ.
  • ಮೆಜೆಸ್ಟಿಕ್​​ನಿಂದ ಚಲ್ಲಘಟ್ಟಕ್ಕೆ 70 ರೂ. ಇದ್ದ ದರ ಈಗ 60 ರೂ. ಆಗಿದೆ
  • ಮೆಜೆಸ್ಟಿಕ್​​ನಿಂದ ವಿಧಾನಸೌಧಕ್ಕೆ 20 ರೂ. ಇದ್ದ ದರ ಈಗ 10 ರೂ. ಆಗಿದೆ
  • ಮೆಜೆಸ್ಟಿಕ್​​ನಿಂದ ಕಬ್ಬನ್​ಪಾರ್ಕ್​ಗೆ ಇದ್ದ 20 ರೂ. ದರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
  • ಮೆಜೆಸ್ಟಿಕ್​​ನಿಂದ ಬೈಯಪ್ಪನಹಳ್ಳಿಗೆ 60 ಇದ್ದ ದರ ಈಗ 50 ರೂ. ಆಗಿದೆ.
  • ಮೆಜೆಸ್ಟಿಕ್​​ನಿಂದ ರೇಷ್ಮೆ ಸಂಸ್ಥೆಗೆ ಇದ್ದ 70 ರೂ. ದರ ಈಗ 60 ರೂ. ಆಗಿದೆ.
  • ಜಾಲಹಳ್ಳಿಯಿಂದ ರೇಷ್ಮೆ ಸಂಸ್ಥೆಗೆ 90 ರೂ. ದರದಲ್ಲಿ ಬದಲಾವಣೆ ಇಲ್ಲ
  • ನಮ್ಮ ಮೆಟ್ರೋ ಕನಿಷ್ಠ, ಗರಿಷ್ಠ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಮೆಟ್ರೋ ದರ ಏರಿಕೆ ಬಗ್ಗೆ ಪರಿಶೀಲನೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದ ಬೆನ್ನಲ್ಲೇ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಬಿಎಂಆರ್​ಸಿಎಲ್ ಎಂಡಿ ಮಹೇಶ್ವರ್ ರಾವ್, ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಸ್ಟೇಜ್ ಬೈ ಸ್ಟೇಜ್ ಮರ್ಜ್ ಮಾಡುವ ಮೂಲಕ ದರ ಕಡಿಮೆ ಮಾಡಲಾಗುವುದು. ಪರಿಷ್ಕೃತ ದರ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದಿದ್ದರು.

ಆದರೆ, ನಮ್ಮ ಮೆಟ್ರೋ ಪ್ರಯಾಣದ ಕನಿಷ್ಠ ಹಾಗೂ ಗರಿಷ್ಠ ದರದಲ್ಲಿ ಬದಲಾವಣೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಕೆ

ಮೆಟ್ರೋ ಪ್ರಯಾಣದರೆ ಏರಿಕೆ ಬೆನ್ನಲ್ಲೇ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿರುವ ಬಗ್ಗೆ ವರದಿಯಾಗಿತ್ತು. ಆದರೆ, ಗಣನೀಯ ಪ್ರಮಾಣದಲ್ಲಿ ದರ ಹೆಚ್ಚಾಗಿರುವುದನ್ನು ಕಡಿಮೆ ಮಾಡುತ್ತೇವೆ ಎಂದು ಬಿಎಂಆರ್‌ಸಿಎಲ್ ಭರವಸೆ ನೀಡಿದ ಹೊರತಾಗಿಯೂ ಪ್ರಯಾಣಿಕರ ಸಂಖ್ಯೆ ಕಡಿಮೆಯೇ ಇದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಶೇ 30 ರ ವರೆಗೆ ಇಳಿಕೆ: ಆದರೆ ಎಲ್ಲೆಡೆಯೂ ಅಲ್ಲ!

ಶುಕ್ರವಾರ ಬೆಳಗ್ಗೆ ಕೂಡ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂತು. ಸಾಮಾನ್ಯವಾಗಿ ಬೆಳಗ್ಗೆ ಹೊತ್ತು ಮೆಜೆಸ್ಟಿಕ್ ನಿಲ್ದಾಣದಲ್ಲಿ ತೀವ್ರ ಜನದಟ್ಟಣೆ ಇದ್ದು ಮೆಟ್ರೋ ರೈಲು ಹತ್ತುವುದು ಕೂಡ ಕಷ್ಟವಾಗಿರುತ್ತದೆ. ಆದರೆ ಇಂದು ಆರಾಮವಾಗಿ ಪ್ರಯಾಣಿಸುವಷ್ಟು ಅನುಕೂಲಕರವಾಗಿತ್ತು. ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ, ‘ಟಿವಿ9’

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Fri, 14 February 25

ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ