Namma Metro: ಗುಡ್ ನ್ಯೂಸ್; ಡಿಸೆಂಬರ್​​​ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು

|

Updated on: May 22, 2023 | 6:10 PM

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವ್ಯಾಪಿಸಿರುವ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಕಾರಿಡಾರ್ ಈ ವರ್ಷದ ಡಿಸೆಂಬರ್‌ನಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವ ನಿರೀಕ್ಷೆಯಿದೆ.

Namma Metro: ಗುಡ್ ನ್ಯೂಸ್; ಡಿಸೆಂಬರ್​​​ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು
ನಮ್ಮ ಮೆಟ್ರೋ
Follow us on

ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಸಿಹಿ ಸುದ್ದಿ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವ್ಯಾಪಿಸಿರುವ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಕಾರಿಡಾರ್ (Electronic City Metro Corridor) ಈ ವರ್ಷದ ಡಿಸೆಂಬರ್‌ನಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು, ವಿಶೇಷವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಮತ್ತು ಅಲ್ಲಿಂದ ಮರಳುವ ಉದ್ಯೋಗಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್‌ನ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಈ ವಿಷಯವನ್ನು ಪ್ರಕಟಿಸಿದ್ದಾರೆ.

ಈ ಹಿಂದೆ, ಕಾರಿಡಾರ್ ಅನ್ನು ಎರಡು ಹಂತಗಳಲ್ಲಿ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಉದ್ದೇಶಿಸಿತ್ತು, ಆದರೆ ರೋಲಿಂಗ್ ಸ್ಟಾಕ್ ಕೊರತೆಯಿಂದಾಗಿ, ಸಂಪೂರ್ಣ ವಿಸ್ತರಣೆಯನ್ನು ಏಕಕಾಲದಲ್ಲಿ ಪ್ರಾರಂಭಿಸಲು ನಿರ್ಧರಿಸಿದೆ.

ಎಲೆಕ್ಟ್ರಾನಿಕ್ಸ್ ಸಿಟಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ, ವಸತಿ ಪ್ರದೇಶಗಳಾದ ಜಯನಗರ, ಬಿಟಿಎಂ ಲೇಔಟ್ ಮತ್ತು ಎಚ್‌ಎಸ್‌ಆರ್ ಲೇಔಟ್ ನಡುವಣ ಹಳದಿ ಮಾರ್ಗದ ಪ್ರಯಾಣಿಕರು ಎಲೆಕ್ಟ್ರಾನಿಕ್ ಸಿಟಿ ಕಾರಿಡಾರ್‌ನಿಂದ ಪ್ರಯೋಜನ ಪಡೆಯಲಿದ್ದಾರೆ.

ಕೋನಪ್ಪನ ಅಗ್ರಹಾರ ನಿಲ್ದಾಣಕ್ಕೆ ಇನ್ಫೋಸಿಸ್ ಮತ್ತು ಹೆಬ್ಬಗೋಡಿ ನಿಲ್ದಾಣಕ್ಕೆ ಬಯೋಕಾನ್ ಫೌಂಡೇಶನ್ ತಿಳುವಳಿಕೆ ಪತ್ರಗಳಿಗೆ ಸಹಿ ಹಾಕಿವೆ.

ಇದನ್ನೂ ಓದಿ: Byappanahalli-KR Pura Metro: ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ಮಾರ್ಗ ಜುಲೈ 15ರೊಳಗೆ ಸಂಚಾರಕ್ಕೆ ಮುಕ್ತ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​​​ನ ನೇರಳೆ ಮಾರ್ಗದ (ನಾಗವಾರ – ಕಳೆನಾ – ಅಗ್ರಹಾರ) ಸುರಂಗ ನಿರ್ಮಾಣದ ಸರಿಸುಮಾರು 72 ಪ್ರತಿಶತದಷ್ಟು ಪೂರ್ಣಗೊಂಡಿದೆ ಮತ್ತು ಮಾರ್ಚ್ 2025 ರ ಅಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಒಟ್ಟು 21.24 ಕಿಮೀ ಸುರಂಗ ಮಾರ್ಗದಲ್ಲಿ 15.2 ಕಿಮೀ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ