AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್

ಬೆಂಗಳೂರು ಮೆಟ್ರೋ ಹಂತ 3 ರ ಅಡಿಯಲ್ಲಿ, ಬಿಎಂಆರ್​ಸಿಎಲ್ ಎರಡು ಮೆಟ್ರೋ ಮಾರ್ಗಗಳನ್ನು ಯೋಜಿಸಿದೆ. ಮೊದಲನೆಯದು ಕೆಂಪಾಪುರದಿಂದ ಜೆಪಿ ನಗರದ ಹೊರವರ್ತುಲ ರಸ್ತೆಯನ್ನು ಸಂಪರ್ಕಿಸುವ 32.1 ಕಿ.ಮೀ. ಮಾರ್ಗವಾಗಿದ್ದು, ಎರಡನೇಯದ್ದು ಮಾಗಡಿ ರಸ್ತೆ ಹೊಸಹಳ್ಳಿಯಿಂದ ಕಡಬಗೆರೆಗೆ ಸಂಪರ್ಕ ಕಲ್ಪಿಸುವ 12.5 ಕಿ.ಮೀ. ಮಾರ್ಗವಾಗಿದೆ.

ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 27, 2023 | 10:16 PM

Share

ಬೆಂಗಳೂರು, ನವೆಂಬರ್ 27: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು (BMRCL) ನಮ್ಮ ಮೆಟ್ರೊ (Namma Metro) ಯೋಜನೆಯ 3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲು ಸಜ್ಜಾಗಿದೆ. ಮೊದಲ ಹಂತದಲ್ಲಿ, ಸಂಸ್ಥೆಯು ಮೆಟ್ರೋ ಕಾರಿಡಾರ್‌ನ ಯೋಜಿತ ವಿಸ್ತರಣೆಗಳಲ್ಲಿ ಮೆಟ್ರೋ ಡಿಪೋ ಮತ್ತು ವಯಡಕ್ಟ್‌ಗಳ ನಿರ್ಮಾಣಕ್ಕಾಗಿ 100 ಎಕರೆ ಭೂಮಿಯನ್ನು ಗುರುತಿಸಿ, ಸ್ವಾಧೀನಪಡಿಸಿಕೊಳ್ಳಲಿದೆ. ಗುರುತಿಸಲಾದ ಆಸ್ತಿಗಳಿಗೆ ಜಂಟಿ ಸಮೀಕ್ಷೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

ನಮ್ಮ ಮೆಟ್ರೋದ 3 ನೇ ಹಂತದ ಕಾಮಗಾರಿ 15,600 ಕೋಟಿ ರೂಪಾಯಿಗಳ ಅಂದಾಜು ವೆಚ್ಚದೊಂದಿಗೆ ನಡೆಯಲಿದೆ. ಇದಕ್ಕೆ 2022 ರ ನವೆಂಬರ್​​​ನಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತು. ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಲು ಹಣಕಾಸು ಇಲಾಖೆ ಇತ್ತೀಚೆಗೆ ಹಸಿರು ನಿಶಾನೆ ತೋರಿತ್ತು. ಭೂಸ್ವಾಧೀನಕ್ಕೆ ಯಾವುದೇ ರೀತಿಯ ಖರ್ಚು ಮಾಡಬೇಕಿದ್ದರೆ ರಾಜ್ಯ ಸಚಿವ ಸಂಪುಟದ ಅನುಮೋದನೆ ಅನಿವಾರ್ಯವಾಗಿದೆ.

ಬೆಂಗಳೂರು ಮೆಟ್ರೋ ಹಂತ 3 ರ ಅಡಿಯಲ್ಲಿ, ಬಿಎಂಆರ್​ಸಿಎಲ್ ಎರಡು ಮೆಟ್ರೋ ಮಾರ್ಗಗಳನ್ನು ಯೋಜಿಸಿದೆ. ಮೊದಲನೆಯದು ಕೆಂಪಾಪುರದಿಂದ ಜೆಪಿ ನಗರದ ಹೊರವರ್ತುಲ ರಸ್ತೆಯನ್ನು ಸಂಪರ್ಕಿಸುವ 32.1 ಕಿ.ಮೀ. ಮಾರ್ಗವಾಗಿದ್ದು, ಎರಡನೇಯದ್ದು ಮಾಗಡಿ ರಸ್ತೆ ಹೊಸಹಳ್ಳಿಯಿಂದ ಕಡಬಗೆರೆಗೆ ಸಂಪರ್ಕ ಕಲ್ಪಿಸುವ 12.5 ಕಿ.ಮೀ. ಮಾರ್ಗವಾಗಿದೆ. ಆದರೆ, ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: ಇನ್ಮುಂದೆ ನಮ್ಮ ಮೆಟ್ರೋದಲ್ಲಿ ಸಿನಿ ತಾರೆಯರ ಕಲರವ: ಸಿನಿಮಾ ಶೋಟಿಂಗ್​ಗೆ ಬಿಎಂಆರ್​ಸಿಎಲ್ ಗ್ರೀನ್ ಸಿಗ್ನಲ್

ಬಿಎಂಆರ್ ಸಿಎಲ್ 3ನೇ ಹಂತಕ್ಕೆ 100 ಎಕರೆ ಜಾಗ ಗುರುತಿಸಿದ್ದು, ಈ ಪೈಕಿ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಬಳಿಯ ಮಾಗಡಿ ರಸ್ತೆಯಲ್ಲಿ ಡಿಪೋ ನಿರ್ಮಾಣಕ್ಕೆ 75 ಎಕರೆ ಮೀಸಲಿಡಲಾಗಿದೆ. ಇದಲ್ಲದೇ 25 ಎಕರೆ ಜಾಗವನ್ನು ಮೇಲ್ಸೇತುವೆ ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಬಿಎಂಆರ್​ಸಿಎಲ್​​ನ ಯೋಜನಾ ವಿಭಾಗವು ಪ್ರಸ್ತಾವಿತ ನಮ್ಮ ಮೆಟ್ರೋ ಲೈನ್‌ಗಳ ಪ್ರತಿ 10 ಕಿಮೀ ವಿಭಾಗಕ್ಕೆ ಭೂಸ್ವಾಧೀನ ಅಗತ್ಯತೆಗಳನ್ನು ಸಲ್ಲಿಸಬೇಕು. ನಂತರ, ಯೋಜನೆಯು ಪ್ರಗತಿಯಲ್ಲಿರುವಂತೆ ಪ್ರತಿ 10 ಕಿಮೀ ವ್ಯಾಪ್ತಿಯ ಭೂಸ್ವಾಧೀನಕ್ಕೆ ಅಧಿಸೂಚನೆಯನ್ನು ಸಹ ಹೊರಡಿಸಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು