ಮೆಟ್ರೋದಲ್ಲಿ ಸಾಲು ಸಾಲು ಅವಘಡ; ಎಚ್ಚೆತ್ತ ಬಿಎಂಆರ್​ಸಿಎಲ್, ಪ್ರಯಾಣಿಕರ ಸುರಕ್ಷತೆಗೆ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ನಿರ್ಮಾಣ

ಮೊಬೈಲ್ ತೆಗೆಯಲು ಟ್ರ್ಯಾಕ್ ಗೆ ಜಿಗಿತ,‌ ಹಳಿಗೆ ಹಾರಿ ಯುವಕನಿಂದ ಆತ್ಮಹತ್ಯೆಗೆ ಯತ್ನ ಹೀಗೆ ಸಾಲು ಸಾಲು ಪ್ರಕರಣ ವರದಿಯ ಬೆನ್ನಲ್ಲೇ ಬಿಎಂಆರ್​ಸಿಎಲ್ ಎಚ್ಚೆತ್ತುಕೊಂಡಿದೆ. ಪ್ರಯಾಣಿಕರ ಸುರಕ್ಷತೆಗೆ ಭರ್ಜರಿ ಪ್ಲಾನ್ ಮಾಡಿದೆ. ಅಲ್ಲದೆ ಈ ಐಡಿಯಾದಿಂದ ನಿಲ್ದಾಣದಲ್ಲಿ ಆಗ್ತಿರುವ ಖರ್ಚು ಉಳಿಯಲಿದೆ.

ಮೆಟ್ರೋದಲ್ಲಿ ಸಾಲು ಸಾಲು ಅವಘಡ; ಎಚ್ಚೆತ್ತ ಬಿಎಂಆರ್​ಸಿಎಲ್, ಪ್ರಯಾಣಿಕರ ಸುರಕ್ಷತೆಗೆ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ನಿರ್ಮಾಣ
ನಮ್ಮ ಮೆಟ್ರೋ
Follow us
Kiran Surya
| Updated By: ಆಯೇಷಾ ಬಾನು

Updated on: Jan 09, 2024 | 7:34 AM

ಬೆಂಗಳೂರು, ಜ.09: ಕಳೆದ ಒಂದು ವಾರದಿಂದ ನಮ್ಮ ಮೆಟ್ರೋದಲ್ಲಿ (Namma Metro) ನಾನಾ ಅನಾಹುತಗಳು ಸಂಭವಿಸಿವೆ. ಹೀಗೆ ಸಾಲು ಸಾಲು ಅವಘಡಗಳು ಆಗುತ್ತಿರುವುದು ಬಿಎಂಆರ್​ಸಿಎಲ್ (BMRCL) ತಲೆನೋವಿಗೆ ಕಾರಣವಾಗಿದೆ. ಹೀಗಾಗಿ ಇದಕ್ಕೆಲ್ಲ ಕಡಿವಾಣ ಹಾಕಲು ಬಿಎಂಆರ್​ಸಿಎಲ್ ಮಾಸ್ಟರ್ ಪ್ಲಾನ್ ಮಾಡಿದೆ. ಫ್ಲಾಟ್ ಫಾರಂ ನಿಂದ ಟ್ರ್ಯಾಕ್ ನಡುವೆ ತಡೆಗೋಡೆ ಮಾದರಿಯಲ್ಲಿ ಕಾರ್ಯನಿರ್ವಹಿಸುವ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ (Platform Screen Door)  ಅನ್ನು ಎಲ್ಲಾ ಮೆಟ್ರೋ ನಿಲ್ದಾಣದಲ್ಲಿ‌ ನಿರ್ಮಾಣಕ್ಕೆ ಪ್ಲಾನ್ ಮಾಡ್ತಿದೆ.

ಕಳೆದ ಒಂದು ವಾರದಲ್ಲಿ ಮೆಟ್ರೋದಲ್ಲಿ ಸಂಭವಿಸಿದ ಅವಘಡಗಳು

  • ದಿನಾಂಕ: 1 ಜನವರಿ 2೦24: ಸ್ಥಳ: ಇಂದಿರಾ ನಗರ ಮೆಟ್ರೋ ನಿಲ್ದಾಣ, ಮೊಬೈಲ್ ತೆಗೆಯಲು ಟ್ರ್ಯಾಕ್ ಗೆ ಇಳಿದ ಮಹಿಳೆ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಉಳಿದ ಜೀವ.
  • ದಿನಾಂಕ: 5 ಜನವರಿ 2೦24: ಸ್ಥಳ: ಜಾಲಹಳ್ಳಿ ಮೆಟ್ರೋ ನಿಲ್ದಾಣ. ಮೆಟ್ರೋ ಹಳಿಗೆ ಹಾರಿ ಯುವಕನಿಂದ ಆತ್ಮಹತ್ಯೆಗೆ ಯತ್ನ, ಐಸಿಯುನಲ್ಲಿ ಚಿಕಿತ್ಸೆ.
  • ದಿನಾಂಕ: 6 ಜನವರಿ 2೦24: ಸ್ಥಳ: ಜೆ.ಪಿ.ನಗರ ಮೆಟ್ರೋ ನಿಲ್ದಾಣ. ಮೆಟ್ರೋ ಟ್ರ್ಯಾಕ್ ಮೇಲೆ ಬೆಕ್ಕು ಪ್ರತ್ಯೇಕ್ಷ, ಆತಂಕಗೊಂಡ ಪ್ರಯಾಣಿಕರು.

ಎಲೆಕ್ಟ್ರಾನಿಕ್ ಸಿಟಿಯ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದಲ್ಲಿ ಈಗಾಗಲೇ ಪ್ಲಾಟ್‌ಫಾರಂ ಸ್ಕ್ರೀನ್‌ ಡೋರ್‌ ಅಳವಡಿಕೆ ಮಾಡುವ ಕೆಲಸ ಬಿಎಂಆರ್​ಸಿಎಲ್ ಮಾಡ್ತಿದೆ. ಇನ್ಫೋಸಿಸ್‌ ಫೌಂಡೇಶನ್‌ ಅನುದಾನದೊಂದಿಗೆ ಈ ಕಾಮಗಾರಿ ನಡೆಯುತ್ತಿದೆ. ಇದೇ ರೀತಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ 63 ಮೆಟ್ರೋ ನಿಲ್ದಾಣದಲ್ಲಿ ಪಿಎಸ್ ಡಿ ಅಳಡಿಕೆಗೆ ಯೋಜನೆ ಸಿದ್ಧಪಡಿಸ್ತಿದೆ. ಮೊದಲ ಹಂತದಲ್ಲಿ ಕೊಟ್ಟಿಗೆರೆ ಟೂ ನಾಗವಾರ ಮೆಟ್ರೋ ಮಾರ್ಗದಲ್ಲಿ ಬರುವ ಡೈರಿ ಸರ್ಕಲ್ ನಿಂದ ಆರಂಭವಾಗುವ ಎಲ್ಲಾ ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್ ಗಳಲ್ಲೂ ಈ ಪಿಎಸ್ ಡೋರ್ ಅಳವಡಿಸಲು ಮುಂದಾಗುತ್ತೀವಿ. ಎಲ್ಲಾ ಮೆಟ್ರೋ ಸ್ಟೇಷನ್ ಗಳಲ್ಲೂ ಪಿಎಸ್ಡಿ ಅಳವಡಿಸಲು ನಮ್ಮ ಟೆಕ್ನಿಕಲ್ ಟೀಮ್ ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ಬಿಎಂಆರ್ಸಿಎಲ್ ನ ಚೀಫ್ ಪಿಆರ್ಓ ಯಶ್ವಂತ್ ಚೌವ್ಹಾಣ್ ತಿಳಿಸಿದರು.

ಪಿಎಸ್ ಡಿಯಿಂದ ಏನೂ ಪ್ರಯೋಜನಾ?

ಮೆಟ್ರೋದಲ್ಲಾಗುವ ಕೆಲವು ಅವಘಡಗಳಿಗೆ ಪಿಎಎಸ್‌ಡಿ ಬ್ರೇಕ್‌ ಹಾಕಲಿದೆ. ಅಲ್ಲದೆ ಎಸಿಯಿಂದ ಆಗುವ ಮೂವತ್ತು ಪರ್ಸೆಂಟ್ ವೆಚ್ಚ ಉಳಿತಾಯವಾಗುತ್ತೆ. ಮೆಟ್ರೋ ರೈಲು ನಿಲ್ದಾಣಗಳಲ್ಲಿ ಹಳಿ ಸಮೀಪದಲ್ಲಿ ಫೋಟೊ ತೆಗೆಯುವುದು, ರೀಲ್ಸ್‌ ಮಾಡುವುದನ್ನು ತಪ್ಪಿಸಬಹುದು, ಸಣ್ಣ ಮಕ್ಕಳು ಮೆಟ್ರೋ ಹಳಿಗಳತ್ತ ಪೋಷಕರ ಕಣ್ತಪ್ಪಿಸಿ ಹೋಗಿ ಆಗುವ ಅನಾಹುತ ನಿಲ್ಲುತ್ತೆ. ಇನ್ನು ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಮಹಿಳಾ ಪ್ರಯಾಣಿಕರು ಇದು ತುಂಬಾ ಸಂತೋಷದ ಸುದ್ದಿ. ಈ ಪಿಎಸ್ಡಿ ಡೋರ್ ಅಳವಡಿಕೆಯಿಂದ ಧೈರ್ಯವಾಗಿ ಮೆಟ್ರೋದಲ್ಲಿ ಪ್ರಯಾಣ ಮಾಡಬಹುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸಹಾಯ ಆಗುತ್ತದೆ ಎಂದರು.

ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ದುರ್ವರ್ತನೆ

ಈ ರೀತಿಯ ಘಟನೆಯಿಂದ ಮೆಟ್ರೋ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗ್ತಿದೆ. ಮೆಟ್ರೋ ಹಳಿಗಳಿಗೆ ಪಕ್ಕದಲ್ಲಿ 750 ಮೋಲ್ಟ್ ಹೆವಿ ಪವರ್ ಲೈನ್ ಹಾದು ಹೋಗುತ್ತೆ. ಟ್ರ್ಯಾಕ್ ಗೆ ಯಾರಾದ್ರೂ ಇಳಿದ್ರೆ ಅವರ ಜೀವ ಉಳಿಸಲು ಪವರ್ ಆಫ್ ಮಾಡಲಾಗುತ್ತೆ. ಅದನ್ನ ಜನರೇಟ್ ಮಾಡಲು ಅರ್ಧಗಂಟೆಗೂ ಹೆಚ್ಚು ಸಮಯ ಬೇಕಾಗುತ್ತೆ.‌ ಇದರಿಂದ ಪೀಕ್ ಅವರ್‌ಗಳಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಗೆ ಅಡಚಣೆಯಾಗುತ್ತೆ.‌ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತೆ.‌ ಹೀಗಾಗಿ ಇದನ್ನ ತಡೆಯಲು ಬಿಎಂಆರ್ ಸಿಎಲ್ ಎಲ್ಲಾ ಮೆಟ್ರೋ ನಿಲ್ದಾಣದಲ್ಲಿ ಪಿಎಸ್ ಡಿ ಅಳವಡಿಕೆಗೆ ಮುಂದಾಗಿದೆ. ಒಳ್ಳೆಯ ನಡೆ ಅಂತ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗ್ತಿದೆ.

ವೇಗ ಪಡೆದ ಬೆಂಗಳೂರು ಸಬ್‌ ಅರ್ಬನ್ ರೈಲು ಯೋಜನೆಯ ಕಾಮಗಾರಿ

ಇನ್ನು ಬೆಂಗಳೂರು ಸಬ್‌ ಅರ್ಬನ್ ರೈಲು ಯೋಜನೆಯ ಕಾಮಗಾರಿಗೆ ತುಸು ವೇಗ ಸಿಕ್ಕಿದ್ದು, ಕಾರಿಡಾರ್‌- 2 ರಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ 31 ಮೀ ಉದ್ದದ ಯು ಗರ್ಡರ್‌ ಅಳವಡಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲ್ಲಿಯವರೆಗೂ ಮೆಟ್ರೊದಲ್ಲಿ 28 ಮೀ. ಉದ್ದದ ಗರ್ಡರ್ ತಯಾರಿಸಿ ಅಳವಡಿಕೆ‌ ಮಾಡಲಾಗ್ತಿತ್ತು. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಮಾಹಿತಿ ನೀಡಿದ್ದು, ದೇವನಹಳ್ಳಿಯಲ್ಲಿರುವ ಕಾಸ್ಟಿಂಗ್ ಯಾರ್ಡ್ ನಲ್ಲಿ ಅತಿ ಉದ್ದದ ಯುಗಾರ್ಡ್ ಸಿದ್ಧಪಡಿಸಲಾಗ್ತಿದೆ. ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಮಲ್ಲಿಗೆ ಲೈನ್ ನಲ್ಲಿ ಅಗತ್ಯವಾಗಿವೆ ಇದನ್ನು ತಯಾರಿಸಿ ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು.

ಪ್ರತೀ ಗರ್ಡರ್ ತಯಾರಿಕೆಗೂ ಎಂ 60 ಗುಣಮಟ್ಟದ 69.5 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಬೇಕಾಗುತ್ತದೆ. ಕಾಂಕ್ರೀಟ್ ಮೂಲಕ ತಯಾರಿಸಿದ ಯು ಗರ್ಡರ್ ತಲಾ 178 ಟನ್ ಭಾರವಿರುತ್ತವೆ. ಇವುಗಳಿಂದ ಕಾಮಗಾರಿಗೆ ತಗುಲುವ ಸಮಯ ಸಾಕಷ್ಟು ಉಳಿಯಲಿದೆ. ಇದನ್ನು ಆಸ್ ಸಿಸ್ಟಮ್ ಕಂಪನಿಯು ಬೆಂಗಳೂರು ಸಬರ್ಬನ್ ರೈಲು ಯೋಜನೆಗಾಗಿ ವಿನ್ಯಾಸಗೊಳಿಸಿದೆ‌. ಚೆನ್ನೈನ ಐಐಟಿ ಮತ್ತು ಜನರಲ್ ಕನ್ಸಲ್ಟೆಂಟ್ ಕಂಪನಿಗಳು ಕೂಡ ಇದರಲ್ಲಿ ಸಕ್ರಿಯ ಪಾತ್ರ ವಹಿಸಿದೆ ಎಂದು ಟ್ವೀಟ್. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ ಎಂದು ಕೆ.ರೈಡ್ ಜನರಲ್ ಮ್ಯಾನೇಜರ್ ವಿಜಯ್ ಕುಮಾರ್ ಮಾಹಿತಿ ನೀಡಿದರು.

ಒಟ್ನಲ್ಲಿ ಕಳೆದ ಕೆಲವು ದಿನಗಳಿಂದ ಮೆಟ್ರೋ ಟ್ರ್ಯಾಕ್ ನಲ್ಲಿ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಿದ್ದು, ಇದರಿಂದ ಎಚ್ಚೆತ್ತುಕೊಂಡಿರುವ ನಮ್ಮ ಮೆಟ್ರೋ ಪಿಎಸ್ಡಿ ಮೊರೆ ಹೋಗಿದ್ದು ಇದು ಎಷ್ಟರಮಟ್ಟಿಗೆ ವರ್ಕೌಟ್ ಆಗುತ್ತದೆ ಎಂದು ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್