ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಹುತೇಕ ಖಚಿತ: ಜನರ ಅಭಿಪ್ರಾಯ ಕೋರಿದ ಬಿಎಂಆರ್​ಸಿಎಲ್

ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಿದ ನಂತರ ಒಂದು ಬಾರಿ ಟಿಕೆಟ್ ದರ ಪರಿಷ್ಕರಣೆ ಮಾಡಿದ್ದ ನಮ್ಮ ಮೆಟ್ರೋ ಇದೀಗ ಮತ್ತೊಮ್ಮೆ ದರ ಏರಿಕೆಗೆ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯವನ್ನೂ ಬಿಎಂಆರ್​ಸಿಎಲ್ ಕೋರಿದೆ. ನೀವೂ ಅಭಿಪ್ರಾಯ ತಿಳಿಸಬಹುದಾಗಿದ್ದು, ಹೇಗೆ ಸಲ್ಲಿಸುವುದು? ಏನು ಮಾಡಬೇಕೆಂಬ ಮಾಹಿತಿ ಇಲ್ಲಿದೆ.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಹುತೇಕ ಖಚಿತ: ಜನರ ಅಭಿಪ್ರಾಯ ಕೋರಿದ ಬಿಎಂಆರ್​ಸಿಎಲ್
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
Follow us
|

Updated on: Oct 04, 2024 | 7:33 AM

ಬೆಂಗಳೂರು, ಅಕ್ಟೋಬರ್ 4: ನಮ್ಮ ಮೆಟ್ರೋ 2011ರಲ್ಲಿ ಕಾರ್ಯಾಚರಣೆ ಆರಂಭಿಸಿದ ನಂತರ ಎರಡನೇ ಬಾರಿಗೆ ಪ್ರಯಾಣ ದರವನ್ನು ಪರಿಷ್ಕರಿಸುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಬುಧವಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದು, ‘ಮೆಟ್ರೊ ರೈಲು ದರ ನಿಗದಿ ಸಮಿತಿ’ಗೆ ಅಕ್ಟೋಬರ್ 21 ರೊಳಗೆ ಸಲಹೆಗಳನ್ನು ನೀಡುವಂತೆ ನಾಗರಿಕರನ್ನು ಕೋರಿದೆ.

ಅಭಿಪ್ರಾಯ ತಿಳಿಸುವುದು ಹೇಗೆ?

ನಾಗರಿಕರು ತಮ್ಮ ಸಲಹೆಗಳನ್ನು ffc@bmrc.co.in ಗೆ ಇಮೇಲ್ ಮಾಡಬಹುದು ಅಥವಾ 3ನೇ ಮಹಡಿ, ‘ಸಿ’ ಬ್ಲಾಕ್, ಬಿಎಂಟಿಸಿ ಕಾಂಪ್ಲೆಕ್ಸ್, ಕೆಹೆಚ್​​ ರಸ್ತೆ, ಶಾಂತಿನಗರ, ಬೆಂಗಳೂರು-560027 ಈ ವಿಳಾಸಕ್ಕೆ ಪತ್ರ ಬರೆದು ‘ಮೆಟ್ರೊ ರೈಲು ದರ ನಿಗದಿ ಸಮಿತಿ’ ಅಧ್ಯಕ್ಷರಿಗೆ ಅಭಿಪ್ರಾಯ ತಿಳಿಸಬಹುದು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

ಇದು ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ, 2002 ರ ಸೆಕ್ಷನ್ 33 ಮತ್ತು 34 ರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ರಚಿಸಲಾದ ಬಿಎಂಆರ್​ಸಿಎಲ್​​ನ ಮೊದಲ ದರ ನಿಗದಿ ಸಮಿತಿಯಾಗಿದೆ.

ಶೇ 15ರಷ್ಟು ದರ ಹೆಚ್ಚಿಸಿದ್ದ ಬಿಎಂಆರ್​ಸಿಎಲ್

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಆರಂಭವಾದ ನಂತರ ಒಂದು ಬಾರಿ ದರ ಪರಿಷ್ಕರಣೆ ಮಾಡಲಾಗಿದೆ. 2017 ರಲ್ಲಿ ಟಿಕೆಟ್ ದರವನ್ನು ಶೇ 10-15 ರಷ್ಟು ಹೆಚ್ಚಿಸಲಾಗಿತ್ತು.

ಈಗೆಷ್ಟಿದೆ ನಮ್ಮ ಮೆಟ್ರೋ ಟಿಕೆಟ್ ದರ?

ಪ್ರಸ್ತುತ, ನಮ್ಮ ಮೆಟ್ರೋ ಟಿಕೆಟ್ ಕನಿಷ್ಠ ದರವು 10 ರೂ. ಮತ್ತು ಗರಿಷ್ಠ 60 ರೂ. ಇದೆ. ಗರಿಷ್ಠ ದರವು ನೇರಳೆ ಮತ್ತು ಹಸಿರು ಮಾರ್ಗಗಳೆರಡರಲ್ಲೂ ದೀರ್ಘ ಪ್ರಯಾಣಕ್ಕೆ ಅನ್ವಯಿಸುತ್ತದೆ. ವೈಟ್‌ಫೀಲ್ಡ್-ಚಲ್ಲಘಟ್ಟ ನಡುವಣ ದೂರ 43.49 ಕಿಮೀ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್-ನಾಗಸಂದ್ರ ನಡುವಣ ದೂರ 30.32 ಕಿಮೀ ಇದ್ದರೂ ಅವುಗಳ ದರ ಒಂದೇ (60 ರೂ) ಆಗಿದೆ.

ಸ್ಮಾರ್ಟ್‌ಕಾರ್ಡ್‌ಗಳು ಮತ್ತು ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಬಳಸುವ ಪ್ರಯಾಣಿಕರಿಗೆ ಶೇಕಡಾ 5 ರಷ್ಟು ರಿಯಾಯಿತಿ ಸಿಗುತ್ತದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಸುಳಿವು ಕೊಟ್ಟ ಬಿಎಂಆರ್​ಸಿಎಲ್: ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ಸಾಧ್ಯತೆ

ಬಿಎಂಆರ್​ಎಲ್​​​ನ ಆದಾಯವು 2022-23 ರಲ್ಲಿ 422.61 ಕೋಟಿ ರೂ. ಮತ್ತು 2023-24 ರಲ್ಲಿ 573.91 ಕೋಟಿ ರೂ. ಆಗಿತ್ತು. ನಾವು ಮಾರ್ಗಗಳನ್ನು ವಿಸ್ತರಿಸುತ್ತಿದ್ದಂತೆ ನಮ್ಮ ವೆಚ್ಚಗಳು ಹೆಚ್ಚಾಗುತ್ತಿವೆ. ಜೊತೆಗೆ, ನಾವು ನಮ್ಮ ಸಾಲವನ್ನು ಮರುಪಾವತಿ ಮಾಡಬೇಕಿದೆ. ಹಾಗಾಗಿ, ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಸಮಿತಿಯು ಮುಂದಿನ ಕೆಲವು ತಿಂಗಳುಗಳಲ್ಲಿ ಪ್ರಯಾಣ ದರ ಹೆಚ್ಚಳದ ಕುರಿತು ತನ್ನ ಶಿಫಾರಸುಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್