AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಆರ್​​ಸಿಎಲ್​​ನಿಂದ ಮಹತ್ವದ ಮಾಹಿತಿ: ಎಂದಿನಂತೆ ನಾಳೆಯೂ ಮೆಟ್ರೋ ಓಡಾಟ; ಇಲ್ಲ ಯಾವುದೇ ಬದಲಾವಣೆ

ಬಿಎಂಆರ್‌ಸಿಎಲ್ ಮೇ 10ರಂದು ಮೆಟ್ರೋ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹಿಂದೆ ತಿಳಿಸಿತ್ತು. ಆದರೆ, ಸಾರ್ವಜನಿಕರ ಅನುಕೂಲಕ್ಕಾಗಿ ಈ ಪ್ರಕಟಣೆಯನ್ನು ಹಿಂತೆಗೆದುಕೊಂಡಿದೆ. ಭಾನುವಾರ, ಮೇ 10ರಂದು ಬೆಳಿಗ್ಗೆ 5 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲುಗಳು ಎಲ್ಲ ಮಾರ್ಗಗಳಲ್ಲಿ ಎಂದಿನಂತೆ ಸಂಚಾರ ನಡೆಸಲಿವೆ. ಪ್ರಯಾಣಿಕರು ಯಾವುದೇ ಬದಲಾವಣೆಗಳಿಲ್ಲದೆ ಎಂದಿನಂತೆ ಸೇವೆಗಳನ್ನು ಪಡೆಯಬಹುದು ಎಂದು ತಿಳಿಸಿದೆ.

ಬಿಎಂಆರ್​​ಸಿಎಲ್​​ನಿಂದ ಮಹತ್ವದ ಮಾಹಿತಿ: ಎಂದಿನಂತೆ ನಾಳೆಯೂ ಮೆಟ್ರೋ ಓಡಾಟ; ಇಲ್ಲ ಯಾವುದೇ ಬದಲಾವಣೆ
ನಮ್ಮ ಮೆಟ್ರೋ ರೈಲು
ಪ್ರಸನ್ನ ಹೆಗಡೆ
|

Updated on:May 09, 2026 | 3:58 PM

Share

ಬೆಂಗಳೂರು, ಮೇ 09: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿತ್ತು. ಆದರೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಸುಗಮ ಮತ್ತು ಅನುಕೂಲಕರ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಬೆಳಿಗ್ಗೆ 5 ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ದಿನದಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ ಎಂದು BMRCL ತಿಳಿಸಿದೆ.

  • ನಾಳೆ (ಮೇ10) ಎಂದಿನಂತೆ ನಮ್ಮ ಮೆಟ್ರೋ ರೈಲುಗಳ ಸಂಚಾರ
  • ನಿರ್ವಹಣಾ ಕಾಮಗಾರಿ ಹಿನ್ನೆಲೆ ವ್ಯತ್ಯಯ ಪ್ರಕಟಣೆ ಹಿಂಪಡೆದ BMRCL
  • ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ವೇಳಾಪಟ್ಟಿಯಂತೆ ರೈಲುಗಳ ಓಡಾಟ

ಇದನ್ನೂ ಓದಿ: ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ; ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ

ಪ್ರಕಟಣೆ ಹಿಂಪಡೆದ BMRCL

ಮೇ 10ರಂದು ನೇರಳೆ ಮಾರ್ಗದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕುರಿತು ಮೇ 8ರಂದು ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಭಾನುವಾರ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಮೆಟ್ರೋ ಸೇವೆಗಳು ಬೆಳಿಗ್ಗೆ 05 ಗಂಟೆಯಿಂದಲೇ ಸಾಮಾನ್ಯ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

ನಿರ್ವಹಣಾ ಕಾಮಗಾರಿಹ ಹಿನ್ನೆಲೆ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ರ ವರೆಗೆ ಸ್ಥಗಿತಗೊಳ್ಳಲಿದೆ ಎಂದು ಈ ಹಿಂದೆ ಬಿಎಂಆರ್​​ಸಿಎಲ್​​ ತಿಳಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:53 pm, Sat, 9 May 26

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!