
ಬೆಂಗಳೂರು, ಮೇ 09: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿತ್ತು. ಆದರೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಸುಗಮ ಮತ್ತು ಅನುಕೂಲಕರ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಬೆಳಿಗ್ಗೆ 5 ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ದಿನದಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ ಎಂದು BMRCL ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ; ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ
ಮೇ 10ರಂದು ನೇರಳೆ ಮಾರ್ಗದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕುರಿತು ಮೇ 8ರಂದು ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಭಾನುವಾರ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಮೆಟ್ರೋ ಸೇವೆಗಳು ಬೆಳಿಗ್ಗೆ 05 ಗಂಟೆಯಿಂದಲೇ ಸಾಮಾನ್ಯ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.
ನಿರ್ವಹಣಾ ಕಾಮಗಾರಿಹ ಹಿನ್ನೆಲೆ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ರ ವರೆಗೆ ಸ್ಥಗಿತಗೊಳ್ಳಲಿದೆ ಎಂದು ಈ ಹಿಂದೆ ಬಿಎಂಆರ್ಸಿಎಲ್ ತಿಳಿಸಿತ್ತು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:53 pm, Sat, 9 May 26