BMS Evening College: ಬೆಂಗಳೂರಿನ ಏಕೈಕ ಈವ್ನಿಂಗ್​ ಇಂಜಿನಿಯರಿಂಗ್​ ಕಾಲೇಜ್​ ಬಂದ್

ಬೆಂಗಳೂರಿನ ಏಕೈಕ ಸಂಜೆ ಇಂಜಿನಿಯರಿಂಗ್ ಕಾಲೇಜು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಆದೇಶದ ಮೇರೆಗೆ ಬಂದ್ ಮಾಡಲಾಗುತ್ತಿದೆ.

BMS Evening College: ಬೆಂಗಳೂರಿನ ಏಕೈಕ ಈವ್ನಿಂಗ್​ ಇಂಜಿನಿಯರಿಂಗ್​ ಕಾಲೇಜ್​ ಬಂದ್
ಬಿಎಂಎಸ್ ಈವ್ನಿಂಗ್ ಕಾಲೇಜ್ ಆಫ್ ಇಂಜಿನಿಯರಿಂಗ್
Follow us
TV9 Web
| Updated By: ಆಯೇಷಾ ಬಾನು

Updated on: Jul 04, 2023 | 3:36 PM

ಬೆಂಗಳೂರು: ಬಸವನಗುಡಿಯಲ್ಲಿರುವ ಬಿಎಂಎಸ್ ಈವ್ನಿಂಗ್ ಕಾಲೇಜ್ ಆಫ್ ಇಂಜಿನಿಯರಿಂಗ್(BMS Evening College) ಮುಚ್ಚುವುದರೊಂದಿಗೆ ಬೆಂಗಳೂರಿನ ಸಂಜೆ ಇಂಜಿನಿಯರಿಂಗ್ ಕಾಲೇಜುಗಳ ಯುಗ ಅಂತ್ಯಗೊಂಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾಲೇಜು ನಡೆಸಲು ಅನುಮತಿ ನಿರಾಕರಿಸಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಆದೇಶ ಹೊರಡಿಸಿದ ಹಿನ್ನೆಲೆ ಬೆಂಗಳೂರಿನ ಏಕೈಕ ಸಂಜೆ ಇಂಜಿನಿಯರಿಂಗ್ ಕಾಲೇಜು ಮುಚ್ಚುವ ಹಂತಕ್ಕೆ ತಲುಪಿದೆ.

ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಎಸ್ ಮುರಳೀಧರ್ ಮಾತನಾಡಿ, ಸಂಜೆ ಇಂಜಿನಿಯರಿಂಗ್ ಕಾಲೇಜು ಮುಂದುವರಿಕೆಗೆ ಅನುಮತಿ ನೀಡುವಂತೆ ನಾವು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ, ಎಐಸಿಟಿಇ ಆದೇಶ ಆಧರಿಸಿ ಸರ್ಕಾರ ಅನುಮತಿ ನಿರಾಕರಿಸಿದೆ. ಹೀಗಾಗಿ ಈ ವರ್ಷದಿಂದ ಸಂಜೆ ಇಂಜಿನಿಯರಿಂಗ್ ಕಾಲೇಜನ್ನು ಶಾಶ್ವತವಾಗಿ ಮುಚ್ಚಿದ್ದೇವೆ ಎಂದರು.

1970 ರ ದಶಕದಲ್ಲಿ ಸಂಜೆ ಇಂಜಿನಿಯರಿಂಗ್ ಕಾಲೇಜುಗಳ ಪರಿಕಲ್ಪನೆಯನ್ನು ಕಾರ್ಮಿಕ ವರ್ಗಕ್ಕೆ ಉನ್ನತ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಪರಿಚಯಿಸಲಾಯಿತು. ಮತ್ತು ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ) ಅಥವಾ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಉದ್ಯೋಗಕ್ಕೆ ಸೇರಿದ ಬಹಳಷ್ಟು ಡಿಪ್ಲೊಮಾ ಪದವೀಧರ ವಿದ್ಯಾರ್ಥಿಗಳು ತಮ್ಮ ಉದ್ಯೋಗದಲ್ಲಿ ಬಡ್ತಿ ಪಡೆಯಲು ಉನ್ನತ ಶಿಕ್ಷಣವನ್ನು ಈ ಈವ್ನಿಂಗ್ ಕಾಲೇಜ್​ಗಳಲ್ಲಿ ಪಡೆದಿದ್ದಾರೆ. ನಾವು ಸಹ ಸಂಜೆ ಕಾಲೇಜುಗಳ ಪರವಾಗಿದ್ದೇವೆ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಆದರೆ AICTE ಆದೇಶವನ್ನು ಅನುಸರಿಸಬೇಕಾಗಿದೆ ಎಂದು ಮುರಳೀಧರ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಎಸ್ ಟ್ರಸ್ಟ್​​ ವಿವಾದ: ಸ್ಪೀಕರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲ; ಜೆಡಿಎಸ್​ನಿಂದ ಧರಣಿ ಮುಂದುವರಿಕೆ

ಹಿಂದೆ, ಕರ್ನಾಟಕದಲ್ಲಿ 12 ಇಂಜಿನಿಯರಿಂಗ್ ಈವ್ನಿಂಗ್ ಕಾಲೇಜ್​ಗಳಿದ್ದವು. ಆದ್ರೆ AICTE 2020-21 ಶೈಕ್ಷಣಿಕ ವರ್ಷದಿಂದ ಸಂಜೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಪ್ಲೊಮಾ ಎಂಜಿನಿಯರಿಂಗ್ ಹೊಂದಿರುವವರಿಗೆ ಮೂರು ವರ್ಷಗಳ ಪದವಿ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಯಿತು. ಬಳಿಕ ಇತರ 11 ಸಂಜೆ ಎಂಜಿನಿಯರಿಂಗ್ ಕಾಲೇಜುಗಳನ್ನು 2021-22 ಶೈಕ್ಷಣಿಕ ವರ್ಷದಲ್ಲಿ ಮುಚ್ಚಲಾಯಿತು ಮತ್ತು ಅವುಗಳ ಮೂರು ವರ್ಷಗಳ ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಈಗಿರುವ ನಾಲ್ಕು ವರ್ಷಗಳ ಇಂಜಿನಿಯರಿಂಗ್​ ಕೋರ್ಸ್​ಗಳಿಗೆ ವಿಲೀನಗೊಳಿಸಲಾಗಿದೆ.

AICTE ಆದೇಶದ ಹೊರತಾಗಿಯೂ KEA 2022-23 ಶೈಕ್ಷಣಿಕ ವರ್ಷದಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ಸ್ಟ್ರೀಮ್‌ಗಳಿಗೆ ಲ್ಯಾಟರಲ್ ಪ್ರವೇಶದ ಮೂಲಕ 196 ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದೆ. ಆದರೆ ಪ್ರವೇಶ ಪ್ರಕ್ರಿಯೆ ಮುಗಿದು 45 ದಿನ ಕಳೆದರೂ ಈ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿಲ್ಲ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?