BMS ಮಹಿಳಾ ಕಾಲೇಜಿನಲ್ಲಿ ವ್ಯಾಲೆಂಟೈನ್ಸ್‌ ಡೇ ಸಂಭ್ರಮ; ತಡರಾತ್ರಿ ವರೆಗೆ ಡಿಜೆ ಸದ್ದಿಗೆ ಸ್ಟೆಪ್ಸ್ ಹಾಕಿದ ಯುವತಿ-ಯುವಕರು, ಸ್ಥಳೀಯರ ಆಕ್ರೋಶ

ಬಸವನಗುಡಿ BMS ಮಹಿಳಾ ಕಾಲೇಜಿನಲ್ಲಿ ಫೆಬ್ರವರಿ 14ರಂದು ವ್ಯಾಲೆಂಟೈನ್ಸ್‌ ಡೇ ಸಂಭ್ರಮಾಚರಣೆ ಮಾಡಲಾಗಿದೆ. ಸರ್ಕಾರದ ಕೋವಿಡ್ ನಿಯಮಾವಳಿಗೆ ಎಳ್ಳುನೀರು ಬಿಟ್ಟು ವಿದ್ಯಾರ್ಥಿಗಳು ತಮ್ಮ ಪ್ರೇಮಿಗಳನ್ನು ಕಾಲೇಜಿಗೆ ಕರೆದುಕೊಂಡು ಬಂದು ಡಿಜೆಗೆ ಸ್ಟೆಪ್ಸ್ ಹಾಕಿದ್ದಾರೆ.

BMS ಮಹಿಳಾ ಕಾಲೇಜಿನಲ್ಲಿ ವ್ಯಾಲೆಂಟೈನ್ಸ್‌ ಡೇ ಸಂಭ್ರಮ; ತಡರಾತ್ರಿ ವರೆಗೆ ಡಿಜೆ ಸದ್ದಿಗೆ ಸ್ಟೆಪ್ಸ್ ಹಾಕಿದ ಯುವತಿ-ಯುವಕರು, ಸ್ಥಳೀಯರ ಆಕ್ರೋಶ
ತಡರಾತ್ರಿ ವರೆಗೆ ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದ ಯುವತಿಯರು
Follow us
TV9 Web
| Updated By: ಆಯೇಷಾ ಬಾನು

Updated on:Feb 15, 2022 | 11:09 AM

ಬೆಂಗಳೂರು: ನಗರದ ಕಾಲೇಜೊಂದರಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಪ್ರೇಮಿಗಳ ದಿನ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿಯ BMS ಮಹಿಳಾ ಕಾಲೇಜಿನಲ್ಲಿ(BMS Womens College) ವ್ಯಾಲೆಂಟೈನ್ಸ್‌ ಡೇ(Valentine’s Day) ಆಚರಣೆ ಮಾಡಲಾಗಿದೆ. ಕಾಲೇಜು ರಜೆ ಇದ್ರೂ ಕಾಲೇಜು ಕ್ಯಾಂಪಸ್‌ನಲ್ಲಿ ನಿನ್ನೆ ತಡರಾತ್ರಿವರೆಗೂ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿ ಮೋಜು-ಮಸ್ತಿ ಮಾಡಿ ಎಂಜಾಯ್ ಮಾಡಿದ್ದಾರೆ. ಅಲ್ಲದೆ ಮಹಿಳಾ ಕಾಲೇಜಿನಲ್ಲಿ ಪುರುಷ ವಿದ್ಯಾರ್ಥಿಗಳಿಗೂ ಎಂಟ್ರಿ ನೀಡಲಾಗಿದ್ದು ಪ್ರೇಮಿಗಳ ದಿನಾಚರಣೆಗೆ ಕಾಲೇಜು ಆಡಳಿತ ಮಂಡಳಿ ವೇದಿಕೆ ಕಲ್ಪಿಸಿಕೊಟ್ಟಿದೆ. ಕಾಲೇಜಿನಲ್ಲಿ ಡಿಜೆ ಹಾಕಿ ಕುಣಿದು ಕುಪ್ಪಳಿಸಿದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಬಸವನಗುಡಿ BMS ಮಹಿಳಾ ಕಾಲೇಜಿನಲ್ಲಿ ಫೆಬ್ರವರಿ 14ರಂದು ವ್ಯಾಲೆಂಟೈನ್ಸ್‌ ಡೇ ಸಂಭ್ರಮಾಚರಣೆ ಮಾಡಲಾಗಿದೆ. ಸರ್ಕಾರದ ಕೋವಿಡ್ ನಿಯಮಾವಳಿಗೆ ಎಳ್ಳುನೀರು ಬಿಟ್ಟು ವಿದ್ಯಾರ್ಥಿಗಳು ತಮ್ಮ ಪ್ರೇಮಿಗಳನ್ನು ಕಾಲೇಜಿಗೆ ಕರೆದುಕೊಂಡು ಬಂದು ಡಿಜೆಗೆ ಸ್ಟೆಪ್ಸ್ ಹಾಕಿದ್ದಾರೆ. ಕಾಲೇಜು ರಜೆ ಇದ್ದರೂ ತಡ ರಾತ್ರಿಯ ವರೆಗೆ ಪಾರ್ಟಿ ಮಾಡಿರುವ ಹಿನ್ನೆಲೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ಸಂಜೆ 7 ಗಂಟೆಯಿಂದ ತಡರಾತ್ರಿವರೆಗೆ ಕಾಲೇಜಿನಲ್ಲಿ ಪಾರ್ಟಿ ನಡೆದಿದೆ. ರಾತ್ರಿ 11:45ರವರೆಗೂ ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿದ್ದಾರೆ. ಡಿಜೆ‌ ಸಾಂಗ್, ವಿದ್ಯಾರ್ಥಿಗಳ‌ ಚೀರಾಟ, ಕೂಗಾಟದಿಂದ ಬೇಸತ್ತ ಸ್ಥಳೀಯರು ಕಾಲೇಜು ಆಡಳಿತ ಮಂಡಳಿಗೆ ಕರೆ ಮಾಡಿದ್ದಾರೆ. ಆದ್ರೆ ಕರೆ ನಾಟ್ ರೀಚಬಲ್ ಬಂದಿದೆ. ಹೀಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದ್ರೆ ಪೊಲೀಸರು ಕೂಡ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಿದ್ಯಾರ್ಥಿನಿಯರ ಪಾರ್ಟಿಯಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿತ್ತು. ನಿದ್ದೆ ಮಾಡಲಾಗಿಲ್ಲ. ನೆಮ್ಮದಿಯಿಂದ ಮನೆಯಲ್ಲಿರಲು ಆಗಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

BMS College

ತಡರಾತ್ರಿ ವರೆಗೆ ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದ ಯುವತಿಯರು

ಇದನ್ನೂ ಓದಿ: ಪುಲ್ವಾಮಾ ದಾಳಿಯ 3 ವರ್ಷಗಳ ನಂತರವೂ ಪಾಕಿಸ್ತಾನದಲ್ಲಿ ಸಕ್ರಿಯವಾಗಿದೆ ಜೈಶ್ ಸಂಘಟನೆ

‘ಇಷ್ಟು ಒಳ್ಳೇ ಹುಡುಗನಿಗೆ ಇನ್ನೂ ಯಾಕೆ ಮದುವೆ ಆಗಿಲ್ಲ’; ಪ್ರೇಮಿಗಳ ದಿನವೇ ಪೂಜಾ ಹೆಗ್ಡೆ ನೇರ ಪ್ರಶ್ನೆ

Published On - 11:08 am, Tue, 15 February 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ