ಸುಮ್ಮನಹಳ್ಳಿ ಬ್ರಿಡ್ಜ್​ ಬಳಿ ದುರ್ಘಟನೆ: ಬಿಎಂಟಿಸಿ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವು

ಸುಮನ್ ಹಳ್ಳಿಯಿಂದ ಲಗ್ಗೆರೆ ಕಡೆ ಚಲಿಸುತ್ತಿದ್ದ ಬಸ್ ಮುಂದೆ ಹೋಗುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳೀಯರು ಬಸ್​ ಚಾಲಕನಿಗೆ ಧರ್ಮದೇಟು ನೀಡಿದ್ದು ಹೊಯ್ಸಳ ಸಿಬ್ಬಂದಿ ಚಾಲಕನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಸುಮ್ಮನಹಳ್ಳಿ ಬ್ರಿಡ್ಜ್​ ಬಳಿ ದುರ್ಘಟನೆ: ಬಿಎಂಟಿಸಿ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವು
ಬಿಎಂಟಿಸಿ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವು
Follow us
TV9 Web
| Updated By: ಆಯೇಷಾ ಬಾನು

Updated on:Nov 03, 2022 | 9:12 AM

ಬೆಂಗಳೂರು: ರಾತ್ರಿ 10 ಗಂಟೆ ಸುಮಾರಿಗೆ ಕಾಮಾಕ್ಷಿಪಾಳ್ಯ ಬಳಿಯ ಸುಮ್ಮನಹಳ್ಳಿ ಬ್ರಿಡ್ಜ್​ ಬಳಿ ಬಿಎಂಟಿಸಿ ಬಸ್​ನಿಂದ ಮತ್ತೊಂದು ದುರ್ಘಟನೆ ಸಂಭವಿಸಿದೆ. ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಅವರ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೊಚ್ಚಿಗೆದ್ದ ಸಾರ್ವಜನಿಕರು ಚಾಲಕನಿಗೆ ಧರ್ಮದೇಟು ನೀಡಿದ್ದಾರೆ.

ಸುಮನ್ ಹಳ್ಳಿಯಿಂದ ಲಗ್ಗೆರೆ ಕಡೆ ಚಲಿಸುತ್ತಿದ್ದ ಬಸ್ ಮುಂದೆ ಹೋಗುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳೀಯರು ಬಸ್​ ಚಾಲಕನಿಗೆ ಧರ್ಮದೇಟು ನೀಡಿದ್ದು ಹೊಯ್ಸಳ ಸಿಬ್ಬಂದಿ ಚಾಲಕನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಲ್ಲೇಶ್ವರಂನ ಕೆ.ಸಿ.ಜನರಲ್​ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಎಂಟಿಸಿ ಬಸ್​ ಜಪ್ತಿ ಮಾಡಿ ಡ್ರೈವರ್​ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ: ಮೊಟ್ಟ ಮೊದಲು ಬಾರಿಗೆ ಸರ್ಕಾರದಿಂದ ತೃತೀಯ ಲಿಂಗಿಗಳ ಆಶ್ರಯ ಜಾಗ: ನಮ್ಮನೆ ಸುಮ್ಮನೆಗೆ ಭೂಮಿ ಪೂಜೆ ಮಾಡಿದ ಅಶೋಕ್

ಬೈಕ್ ಸವಾರ ಪ್ರಮೋದ್ ಸಾವಿಗೆ ರೋಡ್​ ಸ್ಟ್ರಿಪ್ಸ್ ಕಾರಣ

ಮತ್ತೊಂದೆಡೆ ಬೈಕ್ ಸವಾರ ಪ್ರಮೋದ್ ಸಾವಿಗೆ ರೋಡ್​ ಸ್ಟ್ರಿಪ್ಸ್ ಕಾರಣ ಎನ್ನಲಾಗುತ್ತಿದೆ. ಪ್ರಮೋದ್ ರಸ್ತೆಯಲ್ಲಿ ತೆರಳುತ್ತಿದ್ದಾಗ ರೋಡ್ ಸ್ಟ್ರಿಪ್ಸ್ ಬಳಿ ಬೈಕ್ ಸ್ಲೋ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಬೆಟ್ಟದಲ್ಲಿ ಚಿರತೆಗಳು ಪ್ರತ್ಯಕ್ಷ, ಆತಂಕದಲ್ಲಿ ಜನ

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿದ್ದು ಚಿರತೆಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬೆಟ್ಟದಲ್ಲಿ ಎಷ್ಟೇ ಹುಡುಕಾಡಿದರೂ ಚಿರತೆಗಳು ಪತ್ತೆಯಾಗಿಲ್ಲ. ನಿನ್ನೆ ಬೆಟ್ಟದ ಬಂಡೆ ಮೇಲೆ ಚಿರತೆಗಳು ಕಾಣಿಸಿಕೊಂಡಿದ್ದವು. ಇದೇ ಸ್ಥಳದಲ್ಲಿ ಚಿರತೆ ದಾಳಿಗೆ ಯುವಕ ಬಲಿಯಾಗಿದ್ದ. ಬೆಟ್ಟ ಬಂಡೆಕಲ್ಲುಗಳ ಮೇಲೆ ಚಿರತೆ ಕುಳಿತಿರುವ ದೃಶ್ಯ ಗ್ರಾಮಸ್ಥರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಅರಣ್ಯ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ.

ಕಾಡಾನೆಯನ್ನು ಅಟ್ಟಾಡಿಸಿ ಆಟವಾಡಿಸಿದ ಕಾಡು ನಾಯಿಗಳು

ಮೈಸೂರು ಜಿಲ್ಲೆ ಹೆಚ್ಡಿ​ ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಸಫಾರಿ ವೇಳೆ ಅಪರೂಪದ ಘಟನೆಯೊಂದು ಸೆರೆ ಸಿಕ್ಕಿದೆ. ಕಾಡಿನ ಸಫಾರಿ ವೇಳೆ ಪ್ರವಾಸಿಗರ ಮೊಬೈಲ್‌ನಲ್ಲಿ ಅಪರೂಪದ ದೃಶ್ಯ ಸೆರೆಯಾಗಿದೆ. ಕಾಡು ನಾಯಿಗಳು ಮತ್ತು ಆನೆಯ ನಡುವೆ ಕಾಳಗ ನಡೆದಿದೆ. ಕಾಡು ನಾಯಿಗಳು ಆನೆಯ ಹಿಂದೆ ಬಿದ್ದಿದ್ದು ಆನೆ ತಿರುಗಿ ಬಿದ್ದಾಗ ಅವು ಓಡಿ ತಪ್ಪಿಸಿಕೊಳ್ಳಳ್ಳು ಪ್ರಯತ್ನಿಸಿವೆ. ಘೀಳಿಡುತ್ತಾ ನಾಯಿಗಳನ್ನು ಕಾಡಾನೆ ಅಟ್ಟಾಡಿಸಿದೆ.

Published On - 6:55 am, Thu, 3 November 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು