BMTC: ಬೆಂಗಳೂರಿನಲ್ಲಿ ಬಸ್​ ಸಂಚಾರ ಹೆಚ್ಚಳಕ್ಕೆ ಬಿಎಂಟಿಸಿ ನಿರ್ಧಾರ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 01, 2021 | 6:22 PM

ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಇತರರ ಅನುಕೂಲಕಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

BMTC: ಬೆಂಗಳೂರಿನಲ್ಲಿ ಬಸ್​ ಸಂಚಾರ ಹೆಚ್ಚಳಕ್ಕೆ ಬಿಎಂಟಿಸಿ ನಿರ್ಧಾರ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಸೋಮವಾರದಿಂದ (ಅ.4) ಹೆಚ್ಚುವರಿಯಾಗಿ 100 ಬಸ್​ಗಳನ್ನು ವಿವಿಧ ಮಾರ್ಗಗಳಲ್ಲಿ ಸಂಚರಿಸಲು ಕ್ರಮಕೈಗೊಂಡಿದೆ. ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಇತರರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕೊವಿಡ್-19 ಲಾಕ್​ಡೌನ್ ಸಡಿಲಕೆಯ ನಂತರ ಪ್ರಯಾಣಿಕರಿಗೆ ಸಮರ್ಪಕ ಹಾಗೂ ಸುರಕ್ಷಿತ ಸೇವೆ ಒದಗಿಸಲು ಸಂಸ್ಥೆಯು ಬದ್ಧವಾಗಿದೆ. ಸರ್ಕಾರದ ಸೂಚನೆಯಂತೆ ಎಲ್ಲ ರೀತಿಯ ಕೊವಿಡ್ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಮ್ಮ ಬಸ್​ಗಳು ಸಂಚರಿಸುತ್ತವೆ. ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟು 4943 ಬಸ್​ಗಳು ಸಂಚರಿಸುತ್ತಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಲುತ್ತಿದೆ. 6ನೇ ತರಗತಿಯಿಂದ 10ನೇ ತರಗತಿ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಹಾಗೂ ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿಗಳು ಆರಂಭವಾಗಿವೆ. ಬೆಂಗಳೂರು ನಗರ ಹಾಗೂ ಹೊರವಲಯದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಸಹಜ ಸ್ಥಿತಿಯತ್ತ ಮರಳುತ್ತಿದೆ. ಪರಸ್ಥಳಗಳಿಂದ ಬೆಂಗಳೂರಿಗೆ ಬರುವ ಸಾಮಾನ್ಯ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಸ್ಥೆಯು ಹೆಚ್ಚುವರಿ ಬಸ್​ಗಳ ಸಂಚಾರ ಆರಂಭಿಸಲು ನಿರ್ಧರಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

(BMTC Announces 100 more busses in Bengaluru City)

ಇದನ್ನೂ ಓದಿ: BMTC Electric Bus: ಗುರುವಾರ, ಸೆ. 30ರಂದು ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ

ಇದನ್ನೂ ಓದಿ: ಪ್ರತಿಭಟನೆ ವೇಳೆ ಕೆಎಸ್​ಆರ್​ಟಿ, ಬಿಎಂಟಿಸಿ ನೌಕರರ ಮೇಲೆ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಕೈಬಿಡಲು ಬಹುತೇಕ ನಿರ್ಧಾರ

Published On - 6:20 pm, Fri, 1 October 21