ಏಪ್ರಿಲ್ ತಿಂಗಳ ಬಸ್​ ಪಾಸ್​ ಅವಧಿಯನ್ನು ಮೇ 16ರವರೆಗೆ ಮುಂದೂಡಿದ ಬಿಎಂಟಿಸಿ

15 ದಿನ ಮುಷ್ಕರ ನಡೆದ ಕಾರಣ ಪಾಸ್ ಇದ್ದವರಿಗೆ ಬಸ್ ಸೇವೆ ದೊರೆತಿರಲಿಲ್ಲ. ಈ ಕಾರಣದಿಂದ ಏಪ್ರಿಲ್ ತಿಂಗಳ ಪಾಸ್ ಅವಧಿಯನ್ನು ಮೇ 16ರವರೆಗೆ ವಿಸ್ತರಿಸಲಾಗಿದೆ.

ಏಪ್ರಿಲ್ ತಿಂಗಳ ಬಸ್​ ಪಾಸ್​ ಅವಧಿಯನ್ನು ಮೇ 16ರವರೆಗೆ ಮುಂದೂಡಿದ ಬಿಎಂಟಿಸಿ
ಬಿಎಂಟಿಸಿ ಬಸ್
Follow us
guruganesh bhat
|

Updated on: Apr 21, 2021 | 9:15 PM

ಬೆಂಗಳೂರು: ಎಲ್ಲ ಮಾದರಿಯ ಬಿಎಂಟಿಸಿ ಪಾಸ್​ಗಳ ಅವಧಿ ವಿಸ್ತರಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ. ಏಪ್ರಿಲ್ ತಿಂಗಳ ಪಾಸ್ ಅವಧಿಯನ್ನು ಮೇ 16ರವರೆಗೆ ವಿಸ್ತರಣೆ ಮಾಡಲಾಗಿದೆ. 15 ದಿನ ಮುಷ್ಕರ ನಡೆದ ಕಾರಣ ಪಾಸ್ ಇದ್ದವರಿಗೆ ಬಸ್ ಸೇವೆ ದೊರೆತಿರಲಿಲ್ಲ. ಈ ಕಾರಣದಿಂದ ಏಪ್ರಿಲ್ ತಿಂಗಳ ಪಾಸ್ ಅವಧಿಯನ್ನು ಮೇ 16ರವರೆಗೆ ವಿಸ್ತರಿಸಲಾಗಿದೆ.

ಅಷ್ಟೇ ಅಲ್ಲದೇ ಇಂದು ಸಾರಿಗೆ ಸಿಬ್ಬಂದಿ ಮುಷ್ಕರ ಹಿಂಪಡೆದಿದ್ದಾರೆ. ನಾಳೆಯಿಂದ ಎಲ್ಲ ಸಾರಿಗೆ ನೌಕರರೂ ಸೇವೆಗೆ ಹಾಜರಾಗಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ​ ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿದೆ. ನ್ಯಾಯಮೂರ್ತಿಗಳ ಹೇಳಿಕೆಯನ್ನು ನಾವು ಗೌರವಿಸುತ್ತೇವೆ. ಕೊವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದಿದ್ದಾರೆ. ಸೇವೆಗೆ ಹಾಜರಾಗುವಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಜನರಿಗೆ ತೊಂದರೆ ಕೊಡಬೇಡಿ ಎಂದು ಹೇಳಿದ್ದಾರೆ. ಹೀಗಾಗಿ ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು  ತಿಳಿಸಿದರು.

ಆದರೆ, ಮುಷ್ಕರದ ವೇಳೆ 2169 ಮಂದಿ ವಜಾ ಮಾಡಲಾಗಿದೆ. 2941 ಅಮಾನತು ಮಾಡಲಾಗಿದೆ. 7646 ಮಂದಿಗೆ ಶೋಕಾಸ್ ನೋಟೀಸ್ ನೀಡಿದೆ. 8 ಸಾವಿರ ಮಂದಿಯನ್ನು ವರ್ಗಾವಣೆ ಮಾಡಲಾಗಿದೆ. ಒಟ್ಟು 20 ಸಾವಿರ ನೌಕರರ ಮೇಲೆ ದಮನಕಾರಿ ನೀತಿ ಅನುಸರಿಲಾಗಿದೆ. ಸರ್ಕಾರದ ಈ ಎಲ್ಲಾ ನಿರ್ಧಾರ ವಾಪಾಸ್ ಪಡೆಯಬೇಕು. ನೌಕರರ ವಿರುದ್ಧ ಕೈಗೊಂಡ ಕ್ರಮ ಕೈಬಿಡಬೇಕು ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಈ ಬಗ್ಗೆ ಧನ್ಯವಾದ ತಿಳಿಸಿದ ಸಚಿವ ಲಕ್ಷ್ಮಣ ಸವದಿ

ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು  ಬಸ್​ ಸಂಚಾರದ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸರ್ಕಾರದ ಮನವಿಗೆ ಓಗೊಟ್ಟು ಇಂದು ಸಂಜೆಯ ವೇಳೆಗೆ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಸುಮಾರು 13 ಸಾವಿರದಷ್ಟು ಬಸ್ಸುಗಳು ಸಂಚರಿಸಿರುವುದರಿಂದ ಸಾರ್ವಜನಿಕರು ಸಮಾಧಾನ ಪಡುವಂತಾಯಿತು. ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಈ ಬಗ್ಗೆ ಧನ್ಯವಾದ ತಿಳಿಸಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಇಂದು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಾರಿಗೆ ನೌಕರರು ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಸುಮಾರು 13 ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುವಂತಾಗಿ ಕೊವಿಡ್‍ನಂತಹ ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲೂ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸಾರಿಗೆ ಸೇವೆ ಲಭ್ಯವಾಗಿ ನಿಟ್ಟುಸಿರು ಬಿಡುವಂತಾಯಿತು. ಬಿಎಂಟಿಹೀಗೆ ಕರ್ತವ್ಯ ಪ್ರಜ್ಞೆ ಮೆರೆದವರಿಗೆ  ಹಾರ್ದಿಕ ಅಭಿನಂದನೆಗಳು. ಅದೇ ರೀತಿ ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಮುಂದಾಗಬೇಕೆಂದು ಖಾಸಗಿ ವಾಹನ ಮಾಲೀಕರಲ್ಲಿ ಕೋರಿಕೊಂಡಾಗ ಅವರೂ ಸಹ ತುಂಬು ಹೃದಯದಿಂದ ಸಹಕಾರ ನೀಡಿದ್ದನ್ನು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಾಸ್ಕ್ ಹಾಕದೇ ಬಸ್​ಗೆ ಕಾಯುತ್ತಿದ್ದವರಿಗೆ ಕೊರೊನಾ ಪಾಠ ಮಾಡಿದ ಸಚಿವ ಸುರೇಶ್ ಕುಮಾರ್

ಕೊವಿಡ್ ಇಲ್ಲದ ರೋಗಿಗಳ ಚಿಕಿತ್ಸೆಗೆ ಹೊಸ ವ್ಯವಸ್ಥೆ, ಆಕ್ಸಿಜನ್​ಗೆ ಕಾಲ್​ಸೆಂಟರ್: ಡಾ.ಕೆ.ಸುಧಾಕರ್

(BMTC April month bus passes deadline extended till May 16 due to bus strike)