ಬೆಂಗಳೂರಿನ ಸುತ್ತಮುತ್ತಲಿನ ಜನರಿಗೆ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ ಅಕ್ಕಪಕ್ಕದ ಜಿಲ್ಲೆಗಳಿಗೂ ಬಸ್ ಸಂಚಾರ
ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ಬೆಂಗಳೂರು ಮಹಾನಗರ ಸಾರಿಗೆ ನಿಗಮ ನಿಗಮವು ನಗರದಿಂದ 40 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡಲು ಮುಂದಾಗಿದೆ. ಆ ಮೂಲಕ ಬಿಎಂಟಿಸಿ ಬೆಂಗಳೂರಿನ ಸುತ್ತಮುತ್ತಲಿನ ಜನರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 24: ಬಿಎಂಟಿಸಿ ಬಸ್ಸುಗಳು (BMTC Bus) ಈ ಹಿಂದೆ ಬೆಂಗಳೂರು (bangaluru) ನಗರದಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದವು. ಆದರೆ ಇದೀಗ ಅಕ್ಕಪಕ್ಕದ ಜಿಲ್ಲೆಗಳಿಗೂ ಅಂದರೆ 40 ಕಿ.ಮೀ ವರೆಗೂ ಸಂಚಾರಕ್ಕೆ ಮುಂದಾಗಿವೆ. ಇದಕ್ಕಾಗಿ ಕೇಂದ್ರ ಸರ್ಕಾರ ಬರೋಬ್ಬರಿ 4500 ಸಾವಿರ ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ನೀಡಲು ಮುಂದಾಗಿದೆ. ಆ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಂಡಿದೆ.
40 ಕಿಮೀ ವ್ಯಾಪ್ತಿಯಲ್ಲಿ ಸಂಚಾರ
ಬಿಎಂಟಿಸಿ ಆರಂಭವಾದಾಗಿನಿಂದಲೂ ನಗರದಿಂದ 25 ಕಿಮೀ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದವು. ಆದರೆ ಇದೀಗ ಕೇಂದ್ರ ಸರ್ಕಾರದ ಸೂಚನೆ ಹಿನ್ನಲೆ ಬಿಎಂಟಿಸಿ ನಿಗಮ ನಗರದಿಂದ 40 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡಲು ಮುಂದಾಗಿದೆ. ಬಿಎಂಟಿಸಿಯ ಕಾರ್ಯಾಚರಣೆ ವ್ಯಾಪ್ತಿಯನ್ನು 40 ಕಿಲೋಮೀಟರ್ ವರೆಗೆ ವಿಸ್ತರಿಸಲು ಸರ್ಕಾರದಿಂದ ಅಧಿಸೂಚನೆ ಪ್ರಕಟವಾಗಿದೆ.
ಇದನ್ನೂ ಓದಿ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ: ಮೂರು ಸಾವಿರ ಬಸ್ ಮಾರ್ಗಗಳ ವೇಳಾಪಟ್ಟಿ ಪರಿಷ್ಕರಣೆ
ಇನ್ನು ಈ ಬಗ್ಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು 30 ದಿನಗಳವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಒಂದು ತಿಂಗಳ ನಂತರ ಬಿಎಂಟಿಸಿ ಬಸ್ಸುಗಳು ಕೋಲಾರ, ಮಾಲೂರು, ದಾಬಸ್ ಪೇಟೆ, ಸೊಲೂರು, ಕನಕಪುರ, ರಾಮನಗರ, ಆನೇಕಲ್, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರಕ್ಕೆ ಸಂಚಾರ ನಡೆಸಲಿವೆ.
4500 ಹೊಸ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆ
ಇನ್ನೂ ಬಿಎಂಟಿಸಿಯಲ್ಲಿ ಸದ್ಯ 6900 ಬಸ್ಸುಗಳಿವೆ. ಆದರೆ ಈ ಬಸ್ಸುಗಳಲ್ಲಿ ಬಿಎಂಟಿಸಿ ನಿಗಮ 40 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡಲು ಆಗುವುದಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಬಿಎಂಟಿಸಿ ನಿಗಮಕ್ಕೆ 4200 ನಾರ್ಮಲ್ ಎಲೆಕ್ಟ್ರಿಕ್ ಬಸ್ ಮತ್ತು 300 ಎಸಿ ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಲು ಮುಂದಾಗಿದೆ. ಈ 4500 ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ಬೆಂಗಳೂರಿನ 40 ಕಿಮೀ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲು ಬಿಎಂಟಿಸಿ ಅಧಿಕಾರಿಗಳು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.
40 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡಲು ಬಿಎಂಟಿಸಿ ನಿಗಮಕ್ಕೆ ಹೆಚ್ಚಿನ ಬಸ್ಗಳ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ ಬೆಂಗಳೂರು ನಗರಕ್ಕೆ ಹೊಸ ಬಸ್ಗಳನ್ನು ನೀಡಲು ಮುಂದಾಗಿದೆ. ಇದಕ್ಕೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ಈ ಮೆಟ್ರೋ ಮಾರ್ಗದಲ್ಲಿ ಇಂದಿನಿಂದ ಬಿಎಂಟಿಸಿ ಫೀಡರ್ ಬಸ್ಗಳ ಸಂಚಾರ
ಒಟ್ಟಿನಲ್ಲಿ ಬಿಎಂಟಿಸಿ ಬಸ್ಸುಗಳು ಇಲ್ಲಿಯವರೆಗೆ ಬೆಂಗಳೂರು ನಗರದಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದು, ಮುಂದಿನ ತಿಂಗಳಿನಿಂದ ಅಕ್ಕಪಕ್ಕದ ಜಿಲ್ಲೆಗಳಿಗೂ ಸಂಚಾರ ಮಾಡಲಿವೆ. ಇದಕ್ಕೆ ಮಹಿಳಾ ಪ್ರಯಾಣಿಕರು ಸೇರಿದಂತೆ ಪುರುಷ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿರುವುದಂತು ಸುಳ್ಳಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



