ಪ್ರತಿವರ್ಷ ಬಿಎಂಟಿಸಿ ಬಸ್​​ಗಳಿಂದ 30ಕ್ಕೂ ಹೆಚ್ಚು ಮಾರಣಾಂತಿಕ ಅಪಘಾತ: ಚಾಲಕರಿಗೆ ವಿಶೇಷ ತರಬೇತಿ

ಬಿಎಂಟಿಸಿ ಬಸ್​ ಚಾಲಕರ ಅಜಾಗರೂಕ ಚಾಲನೆಯಿಂದ ನಗರದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಬಸ್​​ ಚಾಲನೆ ವೇಳೆ ಸಂಚಾರಿ ನಿಯಮವನ್ನು ಉಲ್ಲಂಘಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಸಂಚಾರಿ ಪೊಲೀಸರು ಚಾಲಕರಿಗೆ ವಿಶೇಷ ತರಬೇತಿ ನೀಡುತ್ತಿದ್ದಾರೆ. ಈ ಬಗ್ಗೆ ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಮಾಹಿತಿ ನೀಡಿದ್ದಾರೆ.

ಪ್ರತಿವರ್ಷ ಬಿಎಂಟಿಸಿ ಬಸ್​​ಗಳಿಂದ 30ಕ್ಕೂ ಹೆಚ್ಚು ಮಾರಣಾಂತಿಕ ಅಪಘಾತ: ಚಾಲಕರಿಗೆ ವಿಶೇಷ ತರಬೇತಿ
ಬಿಎಂಟಿಸಿ
Follow us
| Updated By: ವಿವೇಕ ಬಿರಾದಾರ

Updated on: Feb 03, 2024 | 11:14 AM

ಬೆಂಗಳೂರು, ಫೆಬ್ರವರಿ 03: ಬಿಎಂಟಿಸಿ ಬಸ್ ಚಾಲಕರ (BMTC Bus Drivers) ನಿರ್ಲಕ್ಷ್ಯದಿಂದ ನಗರದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ವರ್ಷದಿಂದ ಬಿಎಂಟಿಸಿ ಬಸ್​ಗೆ (BMTC Bus) ಬಲಿಯಾದವರ ಸಂಖ್ಯೆ ಹೆಚ್ಚಾಗಿದೆ. 2023 ಆಗಸ್ಟ್​ನಲ್ಲಿ 2, ಅಕ್ಟೋಬರ್​ನಲ್ಲಿ 5, ಹಾಗೂ ಜನವರಿಯಲ್ಲಿ ಇಬ್ಬರು ಮೃತಪಟ್ಟಿದ್ದರು. ಬಿಎಂಟಿಸಿ ಬಸ್​ಗಳ ಅಪಘಾತಕ್ಕೆ ಬ್ರೇಕ್ ಹಾಕಲು ನಗರ ಸಂಚಾರಿ ಪೊಲೀಸರು ಯೋಜನೆ ರೂಪಿಸಿದ್ದಾರೆ. ಅದು ಪ್ರತಿದಿನ 50 ಬಿಎಂಟಿಸಿ ಬಸ್​ ಚಾಲಕರಿಗೆ ತರಬೇತಿ ನೀಡಲಾಗುತ್ತಿದೆ. ಈ ಬಗ್ಗೆ ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಮಾತನಾಡಿ, ಪ್ರತಿವರ್ಷ ಬಿಎಂಟಿಸಿ ಬಸ್​ಗಳಿಂದ 30ಕ್ಕು ಹೆಚ್ಚು ಮಾರಣಾಂತಿಕ ಅಪಘಾತಗಳು ಸಂಭವಿಸುತ್ತಿವೆ. 200 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.

ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಸಾಕಷ್ಟಿವೆ. ಸಿಗ್ನಲ್ ಜಂಪ್ ಮತ್ತು ಅತಿವೇಗದ ಚಾಲನೆ ಪ್ರಕರಣಗಳು ಹೆಚ್ಚಾಗಿವೆ. ಅದ್ದರಿಂದ ಬಿಎಂಟಿಸಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಪ್ರತಿದಿನ 50 ಕ್ಕೂ ಹೆಚ್ಚು ಚಾಲಕರಿಗೆ ಸಂಚಾರಿ ನಿಯಮಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ. 12 ಸಾವಿರ ಚಾಲಕರಿಗೂ ತರಬೇತಿ ನೀಡುತ್ತೇವೆ. ಈಗಾಗಲೇ ಸುಮಾರು 3 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ಚಾಲಕರಿಂದ ಈವರೆಗೆ ಒಂದೂ ಉಲ್ಲಂಘನೆ, ಅಪಘಾತಗಳು ನಡೆದಿಲ್ಲ. ಅಪಘಾತಗಳು ತಪ್ಪಿಸುವ ಬಗ್ಗೆಯೂ ಚಾಲಕರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯ: ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ

ಈವರೆಗೆ ತರಬೇತಿ ಪಡೆದ ಪಡೆದ ಚಾಲಕರಿಂದ ಅಪಘಾತ ಸಂಭವಿಸಿಲ್ಲ. ಹಾಗಾದರೆ ಬಿಎಂಟಿಸಿ ಚಾಲಕರಿಗೆ ಯಾವ ರೀತಿ ತರಬೇತಿ ನೀಡಲಾಗುತ್ತದೆ?

  1. ಸುರಕ್ಷಿತವಾಗಿ ವಾಹನ ಚಾಲನೆ ಮಾಡುವುದು ಹೇಗೆ ?
  2. ಡಿಫೆನ್ಸಿವ್ ಡ್ರೈವಿಂಗ್.
  3. ಟ್ರಾಫಿಕ್ ರೂಲ್ಸ್ ಫಾಲೊ ಮಾಡುವುದು.
  4. ಕ್ಯಾಮೆರಾಗಳು ಹೇಗೆ ಟ್ರಾಫಿಕ್ ಉಲ್ಲಂಘನೆಗಳನ್ನ ದಾಖಲಿಸುತ್ತವೆ.
  5. ಡ್ರೈವರ್ & ಕಂಡಕ್ಟರ್ ಹೇಗೆ ಸಂಚಾರ ಪೊಲೀಸರಿಗೆ ಸಹಕರಿಸಬೇಕು.
  6. ಅಪಘಾತಕ್ಕೆ ಕಾರಣಗಳು ಏನೇನು.
  7. ಮಕ್ಕಳು, ಮಹಿಳೆಯರನ್ನು ಹೇಗೆ ಸುರಕ್ಷಿತವಾಗಿರಿಸಬೇಕು.

ಹೀಗೆ ಹಲವು ಅಂಶಗಳ ಮೇಲೆ ಪ್ರತಿದಿನ 50 ಚಾಲಕರಿಗೆ ಟ್ರಾಫಿಕ್ ಪೊಲೀಸರು ತರಬೇತಿ ನೀಡುತ್ತಿದ್ದಾರೆ.

ಬಿಎಂಟಿಸಿ ಬಸ್​ ಗುದ್ದಿ ಇಂಜಿನಿಯರ್​ ವಿದ್ಯಾರ್ಥಿನಿ ಸಾವು

ಮಲ್ಲೇಶ್ವರಂನ ನಿವಾಸಿಯಾದ ಕುಸುಮಿತಾ (21 ವರ್ಷ) ಪ್ರತಿದಿನ ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್​ಗೆ ಬೈಕ್​ನಲ್ಲಿ ಬರುತಿದ್ದಳು. ಅಲ್ಲಿಂದ ಬಳಿಕ ಮೆಟ್ರೋ ಮೂಲಕ ಕಾಲೇಜಿಗೆ ತೆರಳುತಿದ್ದರು. ಎಂದಿನಂತೆ ಶುಕ್ರವಾ (ಫೆ.03) ಸಹ ಬೆಳಗ್ಗೆ 8.30ರ ಸುಮಾರಿಗೆ ಬೈಕ್​ನಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಹರಿಶ್ಚಂದ್ರ ಘಾಟ್ ಬಳಿ ಹೋಗುತ್ತಿರುವಾಗ ಪಕ್ಕದಲ್ಲಿ ಬಂದ ಬಿಎಂಟಿಸಿ ಬಸ್ ಕುಸುಮಿತಾ ಅವರ ಬೈಕ್​ಗೆ ಗುದ್ದಿದೆ.

ಡಿಕ್ಕಿ ಹೊಡೆದು ಬೈಕ್ ಸಮೇತ ಎಳೆದೊಯ್ದಿದೆ. ಇದರಿಂದ ಯುವತಿ ಬಸ್ ಚಕ್ರಕ್ಕೆ ಸಿಲುಕಿದ್ದಾರೆ. ಸ್ಥಳದಲ್ಲಿದ್ದವರು ಯುವತಿ ರಕ್ಷಣೆಗೆ ಮುಂದಾಗಿದ್ದಾರೆ. ಗಾಯಾಗೊಂಡಿದ್ದ ಕುಸುಮಿತಾ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬಳಿಕ ಕುಸುಮಿತಾ ಅವರ ಮೃತದೇಹವನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಲ್ಲೇಶ್ವರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ