ಬೆಂಗಳೂರು: ಬಿಎಂಟಿಸಿ ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವು
BMTC: ಬಿಎಂಟಿಸಿ ಬಸ್ನಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಬೆಂಗಳೂರು: ಕೆಲವು ತಿಂಗಳ ಕೆಳಗೆ ಬಿಎಂಟಿಸಿ (BMTC) ಬಸ್ ಕೆಳಗೆ ಸಿಲುಕಿ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಈಗ ಬಿಎಂಟಿಸಿ ಬಸ್ನಡಿ ಸಿಲುಕಿ ಬೈಕ್ ಸವಾರ (Bike Rider) ಸಾವನ್ನಪ್ಪಿರುವ ಘಟನೆ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಸೋಮನಹಳ್ಳಿ ಬ್ರಿಡ್ಜ್ ಬಳಿ ಮುಂದೆ ತೆರಳುತ್ತಿದ್ದ, ಬೈಕ್ಗೆ ಬಿಎಂಟಿಎಸ್ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ವಿಜಯನಗರ ಕುಲದೀಪ್ ಬಗರೇಚಾ ಮೃತ ಬೈಕ್ ಸವಾರ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್ನ್ನು ವಶಕ್ಕೆ ಪಡೆದಿದ್ದಾರೆ.
BMTC ಬಸ್, ಬೈಕ್ ನಡುವೆ ಅಪಘಾತ; ಸವಾರರಿಬ್ಬರು ಸಾವು
ನವೆಂಬರ್ 29 ರಂದು ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ನಡೆದಿತ್ತು. ಘಟನೆಯಲ್ಲಿ ಮಂಜುನಾಥ್(25), ಶಿವರಾಜ್(29) ಸಾವನ್ನಪ್ಪಿದ್ದರು. ಮೃತರು ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ತಿಳಿಬಂದಿತ್ತು. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:05 pm, Wed, 18 January 23