AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಕಂಡಕ್ಟರ್-ಉತ್ತರ ಭಾರತೀಯ ವಲಸಿಗನ ನಡುವೆ ಕಪಾಳಮೋಕ್ಷ; ವಿಡಿಯೋ ವೈರಲ್

ಬಿಎಂಟಿಸಿ ಬಸ್​​ ಮತ್ತು ಉತ್ತರ ಭಾರತೀಯ ವಲಸಿಗನ ನಡುವೆ ನಡೆದ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನಿಖರವಾದ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಬಿಎಂಟಿಸಿ ಬಸ್ ಕಂಡಕ್ಟರ್-ಉತ್ತರ ಭಾರತೀಯ ವಲಸಿಗನ ನಡುವೆ ಕಪಾಳಮೋಕ್ಷ; ವಿಡಿಯೋ ವೈರಲ್
ಬಿಎಂಟಿಸಿ ಬಸ್ ಕಂಡಕ್ಟರ್ ಮತ್ತು ಉತ್ತರ ಭಾರತೀಯ ವಲಸಿಗನ ನಡುವೆ ಹೊಡೆದಾಟದ ವಿಡಿಯೋ ವೈರಲ್ (ಸಾಂದರ್ಭಿಕ ಚಿತ್ರ)
Rakesh Nayak Manchi
Rakesh Nayak Manchi| Edited By: ಆಯೇಷಾ ಬಾನು|

Updated on:Jul 25, 2023 | 8:46 AM

Share

ಬೆಂಗಳೂರು, ಜುಲೈ 24: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಕಂಡಕ್ಟರ್ ಮತ್ತು ಉತ್ತರ ಭಾರತೀಯ ವಲಸಿಗ ಎಂದು ಹೇಳಲಾಗುತ್ತಿರುವವನ ನಡುವೆ ನಡೆದ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಟಿಕೆಟ್ ಶುಲ್ಕ ನೀಡದೇ ಪ್ರಯಾಣಿಕ ಕಂಡಕ್ಟರ್​ ಜೊತೆ ಅಸಭ್ಯವಾಗಿ ಮಾತನಾಡಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ.

ರಾಮಯ್ಯ ಆಸ್ಪತ್ರೆ ಬಳಿ ಬಸ್ ಹತ್ತಿದ ಯುವಕ ಯಶವಂತಪುರಕ್ಕೆ ಹೋಗಲು ಟಿಕೆಟ್ ಕೇಳಿದ. ಆಗ ಬಸ್ ಕಂಡಕ್ಟರ್ ಮತ್ತಿಕೆರೆಗೆ ಟಿಕೆಟ್ ನೀಡಿದ್ರು. ಈ ವೇಳೆ ಮಹಿಳೆಯರಿಗೆ ಚಾರ್ಜ್ ಇಲ್ಲ, ನಮಗ್ಯಾಕೆ ಎಂದು ಯುವಕ ಕ್ಯಾತೆ ತೆಗೆದಿದ್ದಾನೆ. ಆಗ ಕಂಡಕ್ಟರ್ ಟಿಕೆಟ್ ಗೆ ಹಣ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಮತ್ತು ಯುವಕ ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರು ಮಹಿಳೆಯರು ತಡೆಯಲು ಯತ್ನಿಸಿದ್ದಾರೆ. ಆದರೂ ಇಬ್ಬರ ನಡುವೆ ಹೊಡೆದಾಟ ಮುಂದುವರಿಯುತ್ತದೆ. ಜಗಳ ತಾರಕಕ್ಕೇರುತ್ತಿದ್ದಂತೆ ಮಧ್ಯಪ್ರವೇಶಿಸಿದ ಚಾಲಕ, ಪ್ರಯಾಣಿಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶುಲ್ಕ ಪಾವತಿಸುವಂತೆ ಹೇಳಿದ್ದಾರೆ.

ಇದನ್ನೂ ಓದಿ: Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

ಬಸ್ ಚಾಲಕ ಮತ್ತು ಕಂಡಕ್ಟರ್ ‘ಇವನನ್ನು ಠಾಣೆಗೆ ಕರೆದುಕೊಂಡು ಹೋಗೋಣ’ ಎಂದು ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಸಬಹುದು. ಇದರ ವಿಡಿಯೋ ಟ್ವಿಟರ್​ನಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಗಮನಿಸಿದ ನಗರ ಪೊಲೀಸರು, ರೀಟ್ವೀಟ್ ಮಾಡಿ, ನಿಖರವಾದ ಪ್ರದೇಶದ ಸ್ಥಳವನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ. ಅದಾಗ್ಯೂ, ಈ ಘಟನೆ ಯಾವಾಗ ನಡೆದಿದ್ದು ಎಂಬುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Mon, 24 July 23

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!